ದಿನಾಂಕಃ 19-06-2025 ರ ಇಂದು ಬೆಳಗ್ಗೆ ತಿರುಮಲೇಶ್, ಪಿಎಸ್ಐ ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆ ರವರು ಶಿವಮೊಗ್ಗ ನಗರದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯಲ್ಲಿ, ಸಂಚಾರ ನಿಯಮಗಳ ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ವಿಧ್ಯಾರ್ಥಿಗಳಿಗೆ ಸಂಚಾರ ನಿಯಮಗಳ ಪಾಲನೆಯು ಕುರಿತು ಜವಾಬ್ದಾರಿಯುತ ನಾಗರೀಕರಾದ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿರುತ್ತದೆ ಎಂದರು. ಸುರಕ್ಷತೆಯ ದೃಷ್ಠಿಯಿಂದ ಕಡ್ಡಾಯವಾಗಿ ಎಲ್ಲರೂ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ತಿಳಿಸಿದರು.

ಯಾವುದೇ ಸಂದರ್ಭದಲ್ಲಿಯೂ ಸಹಾ 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡಬಾರದು. ಒಂದು ವೇಳೆ ನೀವು ಸಂಚಾರ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಇದರಿಂದ ನಿಮ್ಮ ಮತ್ತು ಇತರರ ಜೀವಕ್ಕೆ ಅಪಾಯವಾಗಲಿದೆ ಎಂದು ಎಚ್ಚರಿಕೆ ತಿಳಿಸಿದರು.
ಪ್ರಸ್ತುತ ಎಲ್ಲರೂ ಸಾಮಾಜಿಕ ಜಾಲತಾಣವನ್ನು ಬಳಸುವುದು ಸರ್ವೇ ಸಾಮಾನ್ಯವಾಗಿದ್ದು, ಯಾವುದೇ ಕಾರಣಕ್ಕೂ ಕೂಡ ಅಜಾಗರೂಕತೆಯಿಂದ ನಿಮ್ಮ ವೈಯಕ್ತಿಕ ಮಾಹಿತಿಗಳನ್ನು ಹಂಚಿಕೊಳ್ಳಬೇಡಿ ಎಂದು ತಿಳಿಸಿದ್ದಾರೆ.
ವಿದ್ಯಾರ್ಥಿಗಳಾದ ನೀವುಗಳು ವಿಧ್ಯಾಭ್ಯಾಸದ ಕಡೆಗೆ ಹೆಚ್ಚಿನ ಒತ್ತು ನೀಡಿ, ಸಾಧಿಸ ಬೇಕಾದ ಗುರಿಯನ್ನು ಸಾಧಿಸಿ, ಮತ್ತು ಸಾಮಾಜಿಕ ಜಾಲತಾಣದ ಅತಿಯಾದ ಬಳಕೆಯಿಂದ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ವಿಧ್ಯಾರ್ಥಿಗಳು ಮತ್ತು ಪೊಲೀಸ್ ಅಧಿಕಾರಿ ಸಿಬ್ಬಂಧಿಗಳು ಉಪಸ್ಥಿತರಿದ್ದರು.
