ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ನೂತನ ಕುಲಸಚಿವರಾಗಿ (ಆಡಳಿತ) ಕರ್ನಾಟಕ ಆಡಳಿತ ಸೇವೆಯ ಹಿರಿಯ ಅಧಿಕಾರಿ ಡಾ.ಚನ್ನಪ್ಪ.ಎ ಅಧಿಕಾರ ಸ್ವೀಕರಿಸಿದರು.
ಮಂಗಳವಾರ ರಾಜ್ಯ ಸರ್ಕಾರ 18 ಕೆಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿತ್ತು. ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯಲ್ಲಿ ಆಡಳಿತ ಕುಲಸಚಿವರಾಗಿದ್ದ ಡಾ.ಚನ್ನಪ್ಪ.ಎ ಅವರನ್ನು ರಾಯಚೂರಿನ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾಲಯದ ಆಡಳಿತ ಕುಲಸಚಿವರಾಗಿದ್ದ ಡಾ. ಶಂಕರಪ್ಪ ವಣಿಕ್ಯಾಳ್ ಅವರ ಸ್ಥಾನಕ್ಕೆ ನಿಯುಕ್ತಿಗೊಳಿಸಿ ವರ್ಗಾವಣೆ ಮಾಡಿದೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ
ಕುಲಪತಿ (ಹಂಗಾಮಿ) ಡಾ. ಸುಯಮೀಂದ್ರ ಕುಲಕರ್ಣಿ, ಮೌಲ್ಯಮಾಪನ ಕುಲಸಚಿವ ಜ್ಯೋತಿ ದಮ್ಮ ಪ್ರಕಾಶ್, ಸಿಂಡಿಕೇಟ್ ಸದಸ್ಯರಾದ ಶಿವಣ್ಣ, ಝೀಶಾನ್ ಅಖಿಲ್ ಸಿದ್ಧಿಖಿ ಹಾಗೂ ಯರಿಸ್ವಾಮಿ.ಎಂ (ನಿಕಟಪೂರ್ವ ಮೌಲ್ಯಮಾಪನ ಕುಲಸಚಿವರು) ಅವರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.
