ರಾಯಚೂರು | ಮಣಿಪುರ ಪ್ರಕರಣ; ಕ್ರಮಕ್ಕೆ ವೆಲ್ಫೇರ್ ಪಕ್ಷ ಆಗ್ರಹ

Date:

Advertisements

ಮಣಿಪುರದಲ್ಲಿ ಕುಕಿ ಬುಡಕಟ್ಟು ಸಮುದಾಯದ ಮೂವರು ಮಹಿಳೆಯರನ್ನು ಬೆತ್ತಲೆಗೊಳಿಸಿ, ಲೈಂಗಿಕ ದೌರ್ಜನ್ಯ ನಡೆಸಿದ ಹಾಗೂ ಯುವತಿಯೊಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಕೃತ್ಯವನ್ನು ಖಂಡಿಸಿ ವೆಲ್ಫೇರ್ ಪಕ್ಷ ನೇತೃತ್ವದಲ್ಲಿ ಹಲವು ಸಂಘಟನೆಗಳ ಮುಖಂಡರು ರಾಯಚೂರು ನಗರದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

“ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರವು ಮನುಷ್ಯ ಕುಲವೇ ತಲೆತಗ್ಗಿಸುವ ಕೃತ್ಯವಾಗಿದೆ. ಆದರೆ ಕೇಂದ್ರ ಸರ್ಕಾರ ಕ್ರಮ ತೆಗೆದುಕೊಳ್ಳಲು ವಿಳಂಬ ಧೋರಣೆ ಅನುಸರಿಸುತ್ತಿರುವುದು ಖಂಡನೀಯ” ಎಂದು ಕೇಂದ್ರ ಹಾಗೂ ಮಣಿಪುರ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ವೆಲ್ಫೇರ್ ಪಕ್ಷದ ರಾಜ್ಯಾದ್ಯಕ್ಷ ತಾಯರ್ ಹುಸೇನ್ ಮಾತನಾಡಿ, “ಕೇಂದ್ರ ಸರ್ಕಾರವು ಮಹಿಳೆಯರ ಸುರಕ್ಷತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಮಣಿಪುರದಲ್ಲಿ ಭಯದ ವಾತಾವರಣ ನಿರ್ಮಾಣಗೊಳ್ಳುತ್ತಿದೆ. ಶಾಂತಿ ಮರು ಸ್ಥಾಪಿಸಬೇಕು. ಹಿಂಸಾಚಾರ ನಡೆದರೂ ಈ ಬಗ್ಗೆ ಪ್ರಧಾನಿಯವರು ಒಂದೇ ಒಂದು ಮಾತನಾಡಿರಲಿಲ್ಲ. ಸುಪ್ರಿಂ ಕೋರ್ಟ್ ಮಧ್ಯ ಪ್ರವೇಶಿಸಿದ ಮೇಲೆ 30 ಸೆಕೆಂಡ್ ಮಾತನಾಡಿದ್ದಾರೆ. ಇದು ಅಕ್ಷಮ್ಯ ಅಪರಾಧ ಹಾಗೂ ಮೀಸಲಾತಿ ವಿಚಾರಕ್ಕೆ ಆರಂಭವಾದ ಹೋರಾಟ ಹಿಂಸಾರೂಪ ಪಡೆದುಕೊಂಡಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೀದರ್ | ವಸತಿ ಶಾಲೆ ಪ್ರಾಚಾರ್ಯರ ವಿರುದ್ಧ ಕಿರುಕುಳ ಆರೋಪ; ಕಠಿಣ ಕ್ರಮಕ್ಕೆ ಡಿವಿಪಿ ಆಗ್ರಹ

“ಮಣಿಪುರ ಪ್ರಕರಣವನ್ನು ತನಿಖೆಗೆ ಒಳಪಡಿಸಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಮೌಲಾನ್ ಫರೀದ್ ಉಮ್ರಿ, ಕಾರ್ಯದರ್ಶಿ ಸೈಯದ್ ಅನ್ಸಾರಿ, ಉಪಾಧ್ಯಕ್ಷ ಅಬ್ದುಲ್ ಘನಿ, ನಗರಾಧ್ಯಕ್ಷ ತಾರೂಖ್ ಮನಿಯಾರ್ ಹಾಗೂ ಇತರೆ ಸಂಘಟನೆಗಳ ಮುಖಂಡರಾದ ಎಸ್ ಮಾರೆಪ್ಪ ವಕೀಲ, ಖಾಜಾ ಅಸ್ಲಾಂ ಅಹಮದ್, ಜಾನ್ ವೆಸ್ಲಿ ಸೇರಿದಂತೆ ಬಹುತೇಕರು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

Download Eedina App Android / iOS

X