ರಾಯಚೂರು ತಾಲ್ಲೂಕಿನ ತುಂಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿಗೆ ಶಾಲೆ, ಕಾಲೇಜುಗಳಿಗೆ ಹೋಗುವುದಕ್ಕೆ ಕೆ ಕೆ ಆರ್ ಟಿ ಸಿ ಬಸ್ ನಿಲುಗಡೆ ಮಾಡುತ್ತಿಲ್ಲ ಎಂದು ಆಕ್ರೋಶಗೊಂಡು ಶಾಲಾ ಕಾಲೇಜು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ರಾಯಚೂರು- ಮಂತ್ರಾಲಯ ಹೆದ್ದಾರಿ ತಡೆದು ವಿದ್ಯಾರ್ಥಿಗಳು ಪ್ರತಿಭಟಿಸಿ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆ ವರೆಗೆ ಯಾವುದೇ ಬಸ್ ನಿಲ್ಲಿಸುವುದಿಲ್ಲ.ಬೆಳಿಗ್ಗೆ ಶಾಲಾ ಕಾಲೇಜಗೆ ಹೋಗಬೇಕಾದರೆ ಸಮಯ ಪಾಲನೆ ಆಗುತ್ತಿಲ್ಲ ಇದರ ಬಗ್ಗೆ ಹಲವು ಬಾರಿ ವಿದ್ಯಾರ್ಥಿಗಳು KKRTC ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಕ್ರಮ ಕೈಗೊಂಡಿಲ್ಲ ಎಂದು ಅಸಮಧಾನಗೊಂಡು ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯು ಮಾದಿಗ ದಂಡೋರ ಮೀಸಲಾತಿ ಹೋರಾಟ ಸಮಿತಿ ನೇತೃತ್ವ ವಹಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ ಅವರಿಗೆ ಮನವಿ ಪತ್ರ ಸಲ್ಲಿಸಿ ತುಂಟಾಪುರ ಗ್ರಾಮಕ್ಕೆ ಬಸ್ ನಿಲುಗಡೆಯಾಗಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಲಾರಿ ಡಿಕ್ಕಿ ; ಓರ್ವ ಸಾವು , ಮತ್ತೊಬ್ಬ ಗಂಭೀರ ಗಾಯ
ನಿಯಂತ್ರಣಾಧಿಕಾರಿ ಚಂದ್ರಶೇಖರ್ ಮಾತನಾಡಿ ಎಲ್ಲಾ ಗ್ರಾಮಗಳಲ್ಲಿ ಕಡ್ಡಾಯವಾಗಿ ಬಸ್ ಗಳನ್ನು ನಿಲ್ಲಿಸಲು ಮತ್ತು ತುಂಟಾಪುರ ಗ್ರಾಮದಲ್ಲಿ ಒಂದು ಕಂಟ್ರೋಲರ್ ನ್ನು ನೇಮಿಸಿ ಪ್ರತಿಯೊಂದು ಗ್ರಾಮದ ನಿಲ್ದಾಣಗಳಲ್ಲಿ ನಾಮಫಲಕವನ್ನು ಅಳವಡಿಸುತ್ತೇವೆ. ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅಂಗವಿಕಲರಿಗೆ ಸರಿಯಾದ ಸಮಯಕ್ಕೆ ಬಸ್ಸುಗಳನ್ನು ವ್ಯವಸ್ಥೆ ಕಲ್ಪಿಸಿ ನಿಮ್ಮ ಕೋರಿಕೆಯನ್ನು ಈಡೇರಿಸುತ್ತೇವೆ ಎಂದು ಭರವಸೆ ನೀಡಿದರು.
