ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಕಂದಕ್ಕೆ ಉರುಳಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೆಗ್ಗಾರುಕೂಡಿಗೆ ಬಳಿ ನಡೆದಿದೆ.
ಮಂಗಳೂರಿಗೆ ಕಾಫಿ ತುಂಬಿಕೊಂಡು ಹೋಗುತ್ತಿದ್ದ ಲಾರಿ ಹೆಗ್ಗಾರುಕೂಡಿಗೆ ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಉರುಳಿದೆ. ಸುಮಾರು 40 ಅಡಿ ಆಳದ ಕಂದಕಕ್ಕೆ ಉರುಳಿದ ಪರಿಣಾಮ ಲಾರಿಯಲ್ಲಿದ್ದ ಕಾಫಿ ಚೀಲಗಳು ಚೆಲ್ಲಾಪಿಲ್ಲಿಯಾಗಿದೆ. ಈ ಘಟನೆಯಲ್ಲಿ ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದು, ಸಣ್ಣಪುಟ್ಟ ಗಾಯಗೊಂಡಿದ್ದಾರೆ. ಸ್ಥಳೀಯರ ಸಹಾಯದಿಂದ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆಗಳ ಹಾವಳಿ – ರೈತರಲ್ಲಿ ಆತಂಕ
ಈ ಘಟನೆ ಕುರಿತು ಸ್ಥಳಕ್ಕೆ ಜಯಪುರ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.
