ವಿಜಯನಗರ | ʼಯುದ್ದ ಬೇಕಾ; ಬುದ್ದ ಬೇಕಾʼ ಎನ್ನುವ ಕಾಲ ಇದು: ಡಾ. ವೀರೇಶ ಬಡಿಗೇರ

Date:

Advertisements

ʼಯುದ್ಧ ಬೇಕಾ ಇಲ್ಲ, ಬುದ್ಧ ಬೇಕಾʼ ಎನ್ನುವ ಕಾಲ ಇದು. ಈ ವಾಕ್ಯದ ಸಾರವನ್ನು ನಾವು ಆಳವಾಗಿ ಅರ್ಥಮಾಡಿಕೊಳ್ಳಬೇಕಾಗಿದೆ ಎಂದು ಕನ್ನಡ ವಿಶ್ವವಿದ್ಯಾಲಯದ ಸಂಗೀತ ಮತ್ತು ನೃತ್ಯ ವಿಭಾಗದ ಮುಖ್ಯಸ್ಥ ಡಾ.ವೀರೇಶ ಬಡಿಗೇರ ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ನುಡಿ ಕಟ್ಟಡದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಆಯೋಜಿಸಿದ್ದ ಏಳು ದಿನಗಳ ಕಾಲ ನಡೆಯುವ ರಾಷ್ಟ್ರೀಯ ಸೇವಾ ಯೋಜನೆ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, “ಇತ್ತೀಚಿನ ದಿನಗಳಲ್ಲಿ ಕಲಹ, ದ್ವೇಷ ಹಾಗೂ ಕೋಮು ಗಲಭೆಗಳು ನಡೆಯುತ್ತಿವೆ. ಇಂತಹ ವಿಚಾರಗಳಿಗೆ ಕಿವಿಗೊಡದೆ ಅಹಿಂಸೆ, ತಿಳಿವಳಿಕೆ, ಪ್ರೀತಿ ಮತ್ತು ಸೌಹಾರ್ದತೆಯನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು. ರಾಷ್ಟ್ರೀಯ ಸೇವಾ ಯೋಜನೆಯ ಮೂಲ ತತ್ವವು ವಿದ್ಯಾರ್ಥಿಗಳಿಗೆ ಲೋಕಸೇವೆಯ ಮೂಲಕ ರಾಷ್ಟ್ರ ನಿರ್ಮಾಣದ ಕಾರ್ಯಗಳಲ್ಲಿ ಒಳಗೊಂಡಂತಹ ಅನುಭವವನ್ನು ನೀಡುವುದು ಹಾಗೂ ಇದರೊಂದಿಗೆ ರಾಷ್ಟ್ರಪ್ರೇಮ ಮತ್ತು ಸೇವಾ ಭಾವನೆಗಳನ್ನು ಬೆಳೆಸುವುದಾಗಿದೆ. ಶಿಕ್ಷಣದ ಜೊತೆಯಲ್ಲಿ ಸೇವೆ, ಸೇವೆಯ ಜೊತೆಯಲ್ಲಿ ಶಿಕ್ಷಣ ಎನ್ನುವ ಮೂಲ ಆಶಯದಿಂದ ನಾವು ರಾಷ್ಟ್ರೀಯ ಸೇವೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು” ಎಂದು ತಿಳಿಸಿದರು.

ಕನ್ನಡ ವಿಶ್ವವಿದ್ಯಾಲಯದ ಲಲಿತಕಲಾ ನಿಕಾಯದ ಡೀನರಾದ ಡಾ. ಶಿವಾನಂದ ಎಸ್. ವಿರಕ್ತಮಠ ಮಾತನಾಡಿ, “ನಾವೆಲ್ಲರೂ ಸಾರ್ವಜನಿಕ ವಲಯಗಳನ್ನು ಅನುಭವಿಸಿ ಆರಾಧಿಸುವ ಸಂಪ್ರದಾಯವನ್ನು ರೂಢಿಸಿಕೊಂಡು ರಾಷ್ಟ್ರೀಯ ಸೇವೆಗಳಲ್ಲಿ ಭಾಗವಹಿಸಬೇಕು. ಯುವಕರು ಸ್ವಯಂ ಪ್ರೇರಿತರಾಗಿ ರಾಷ್ಟ್ರೀಯ ಸೇವಾ ಯೋಜನೆಗಳ ಮೂಲಕ ರಕ್ತದಾನ ಶಿಬಿರ ಹಾಗೂ ಆರೋಗ್ಯ ಶಿಬಿರಗಳಲ್ಲಿ ಸಕ್ರಿಯವಾಗಿ ಭಾಗವಹಿಸಬೇಕು. ಇದರಿಂದ ದೈಹಿಕವಾಗಿ, ಮಾನಸಿಕವಾಗಿ ಹಾಗೂ ಬೌದ್ಧಿಕವಾಗಿ ಸದೃಢರಾಗಲು ಸಾಧ್ಯವಾಗುತ್ತದೆ. ರಾಷ್ಟ್ರೀಯ ಸೇವಾ ಯೋಜನೆಯನ್ನು ಕೇವಲ ಒಂದು ಶಿಬಿರವಾಗಿ ಭಾವಿಸಿಕೊಳ್ಳದೆ ಅದನ್ನು ನಾವು ಮೂಲಭೂತ ಕರ್ತವ್ಯವೆಂದು ತಿಳಿದು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಕಾಪಾಡಿಕೊಂಡು, ಪರಿಸರ ಸಂರಕ್ಷಣೆ ಹಾಗೂ ರಾಷ್ಟ್ತ ಸಂರಕ್ಷಣೆಯಲ್ಲಿ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು” ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

Advertisements

ಇದನ್ನೂ ಓದಿ: ವಿಜಯನಗರ | ಬಸ್ ನಿಲ್ದಾಣದಲ್ಲಿ, ದ್ವಿಚಕ್ರ ವಾಹನಗಳದ್ದೇ ಕಾರುಬಾರು; ಸಾರ್ವಜನಿಕರ ಪರದಾಟ!

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸಂಯೋಜನಾ ಅಧಿಕಾರಿ ಡಾ. ಎ ಶ್ರೀಧರ್, ವಿವಿಧ ನಿಕಾಯಗಳ ಡೀನರು, ಡಾ. ಲೋಕೇಶ್ ಎಸ್ ಕೆ, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಆಡಳಿತ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X