ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹ; ರಸ್ತೆ ಮೇಲೆ ಮಾವು ಸುರಿದು ಪ್ರತಿಭಟನೆ

Date:

Advertisements

ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ಪ್ರತಿ ಕೆಜಿ ಮಾವಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಕ್ಷದ ಕೋಲಾರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು, ಸಾರ್ವಜನಿಕರಿಗೆ ಉಚಿತವಾಗಿ ಹಣ್ಣುಗಳನ್ನು ವಿತರಿಸಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ, “ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

Advertisements

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವಿಗೆ 15 ಸಾವಿರ ರೂ ಸಿಗುವಂತೆ ಬೆಂಬಲ ಬೆಲೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು-ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು. ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ. ಹವಾಮಾನ ವೈಪರೀತ್ಯಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದರ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತ ಪರಿಸ್ಥಿತಿ ಬಂದಿದೆ. ಕೂಡಲೇ ಸರ್ಕಾರಗಳು ಇತ್ತ ಗಮನ ಹರಿಸಬೇಕು” ಎಂದು ಒತ್ತಾಯಿಸಿದರು.

“ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆಗೆ ನಿಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಮದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಡಾ. ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕೋಲಾರ | ವೇಮಗಲ್‌ನಲ್ಲಿ ಇಂದಿರಾ ಕ್ಯಾಂಟಿನ್ ಆರಂಭ

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ, “ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು. ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರೀಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು. ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು” ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

Download Eedina App Android / iOS

X