ಬಹು ನಿರೀಕ್ಷಿತ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್ ಸರಣಿ ಆರಂಭವಾಗಿದ್ದು, ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡ ಟೀಂ ಇಂಡಿಯಾವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿದೆ.
ಐದು ಪಂದ್ಯಗಳ ತೆಂಡೂಲ್ಕರ್ – ಆಂಡರ್‌ಸನ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಲೀಡ್ಸ್ ಮೈದಾನದಲ್ಲಿ ನಡೆಯುತ್ತಿದೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಆರ್ ಅಶ್ವಿನ್ ಅವರಂತಹ ಅನುಭವಿಗಳು ಟೆಸ್ಟ್ ಕ್ರಿಕೆಟ್‌ಗೆ ವಿದಾಯ ಹೇಳಿರುವುದರಿಂದ, ಈಗ ತಂಡದ ನಾಯಕತ್ವವನ್ನು ಅನುಭವಿ ಶುಭ್ಮನ್ ಗಿಲ್ ಹೊತ್ತುಕೊಂಡು ಯುವ ಬ್ರಿಗೇಡ್‌ನ್ನು ಇಂಗ್ಲೆಂಡ್‌ನಲ್ಲಿ ಮುನ್ನಡೆಸಲಿದ್ದಾರೆ. ಸಾಲು ಸಾಲು ಸವಾಲುಗಳನ್ನು ಟೀಮ್ ಇಂಡಿಯಾ ಹೇಗೆ ಮೆಟ್ಟಿ ನಿಲ್ಲುತ್ತದೆ ಎಂಬುದರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಗುಜರಾತ್ ಟೈಟಾನ್ಸ್ ತಂಡದ ಸಾಯಿ ಸುದರ್ಶನ್ ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದಾರೆ.
ಸಾಯಿ ಸುದರ್ಶನ್ ಐಪಿಎಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ್ದರು. ಅಲ್ಲದೆ ದೇಶೀಯ ಟೂರ್ನಿಯಲ್ಲಿ ರನ್‌ಗಳನ್ನು ಪೇರಿಸಿದ್ದರು. ಇವರು ಐಪಿಎಲ್‌ನಲ್ಲಿ ಆಡಿದ 15 ಪಂದ್ಯಗಳಲ್ಲಿ 54ರ ಸರಾಸರಿಯಲ್ಲಿ 759 ರನ್ ಸಿಡಿಸಿದ್ದಾರೆ. ಇದರಲ್ಲಿ 1 ಶತಕ ಹಾಗೂ 6 ಅರ್ಧಶತಕಗಳು ಸೇರಿದ್ದವು. ಈ ಪ್ರದರ್ಶನದ ಮೂಲಕ ಸಾಯಿ ಸುದರ್ಶನ್ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆ ಆಗಿದ್ದಾರೆ.
ಇದನ್ನು ಓದಿದ್ದೀರಾ? ಅವಮಾನ ಅನುಭವಿಸಿದ್ದ ನಾಯಕ: ದಕ್ಷಿಣ ಆಫ್ರಿಕಾಕ್ಕೆ 27 ವರ್ಷದ ಬಳಿಕ ಐಸಿಸಿ ಟ್ರೋಫಿ ತಂದುಕೊಟ್ಟ
ಶುಭಮನ್ ಗಿಲ್ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದು, ಮೂರನೇ ಕ್ರಮಾಂಕದಲ್ಲಿ ಸಾಯಿ ಸುದರ್ಶನ್ ಬ್ಯಾಟ್ ಮಾಡಲಿದ್ದಾರೆ. 11ರ ಬಳಗದಲ್ಲಿ ಇಬ್ಬರು ಆಲ್‌ರೌಂಡರ್‌ಗಳ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಶಾರ್ದೂಲ್ ಠಾಕೂರ್ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ವಿಕೆಟ್ ಕೀಪರ್ ಆಗಿ ರಿಷಭ್ ಪಂಥ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಮೂವರು ಕನ್ನಡಿಗರಿಗೆ ಅವಕಾಶ
ಲೀಡ್ಸ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಕರ್ನಾಟಕದ ಮೂವರು ಆಟಗಾರರು ಸ್ಥಾನ ಲಭಿಸಿದೆ. ಆರಂಭಿಕರಾಗಿ ಕೆಎಲ್ ರಾಹುಲ್ ಸ್ಥಾನ ಪಡೆದಿದ್ದರೆ, ಕರುಣ್ ನಾಯರ್ ಮಧ್ಯಮ ಕ್ರಮಾಂಕದಲ್ಲಿ ಹಾಗೂ ವೇಗದ ಬೌಲರ್ ಆಗಿ ಪ್ರಸಿದ್ಧ ಕೃಷ್ಣ ಸ್ಥಾನ ಪಡೆಸಿದ್ದಾರೆ.
ಭಾರತ ಉತ್ತಮ ಆರಂಭ
ಮೊದಲು ಬ್ಯಾಟ್ ಮಾಡುತ್ತಿರುವ ಭಾರತ ತಂಡ ಉತ್ತಮ ಆರಂಭ ಪಡೆದಿದ್ದು 11 ಓವರ್‌ಗಳಲ್ಲಿ ವಿಕೇಟ್ ನಷ್ಟವಿಲ್ಲದೆ 36 ರನ್ ಗಳಿಸಿದೆ. ಯಶಸ್ವಿ ಜೈಸ್ವಾಲ್ 23 ರನ್‌ಗಳೊಂದಿಗೆ ಬ್ಯಾಟ್ ಮಾಡುತ್ತಿದ್ದರೆ, ಕನ್ನಡಿಗ ಕೆ ಎಲ್ ರಾಹುಲ್ 12 ರನ್‌ಗಳೊಂದಿಗೆ ಕ್ರೀಸ್‌ನಲ್ಲಿದ್ದಾರೆ.
ಪಂದ್ಯವಾಡುವ ಉಭಯ ತಂಡಗಳ 11ರ ಬಳಗ:
ಭಾರತ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಬಿ ಸಾಯಿ ಸುದರ್ಶನ್, ಶುಭಮನ್ ಗಿಲ್ (ನಾಯಕ), ರಿಷಭ್ ಪಂತ್ (ವಿಕೆಟ್ ಕೀಪರ್), ಕರುಣ್ ನಾಯರ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಪ್ರಸಿದ್ಧ್ ಕೃಷ್ಣ, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಸಿರಾಜ್
ಇಂಗ್ಲೆಂಡ್: ಝಾಕ್ ಕ್ರಾಲಿ, ಬೆನ್ ಡಕೆಟ್, ಆಲಿ ಪೋಪ್, ಜೋ ರೂಟ್, ಹ್ಯಾರಿ ಬ್ರೂಕ್, ಬೆನ್ ಸ್ಟೋಕ್ಸ್ (ನಾಯಕ), ಜೇಮೀ ಸ್ಮಿತ್ (ವಿಕೆಟ್ ಕೀಪರ್), ಕ್ರಿಸ್ ವೋಕ್ಸ್, ಬ್ರೈಡನ್ ಕಾರ್ಸೆ, ಜೋಶ್ ಟಂಗ್, ಶೋಯೆಬ್ ಬಶೀರ್