ತುಮಕೂರು | ಯುವಜನರ ಚಿಂತನೆ ಸಮಾಜದ ಅಭಿವೃದ್ಧಿಯತ್ತ ಇರಬೇಕು : ಡಾ. ಎಂ.ವೆಂಕಟೇಶ್ವರಲು

Date:

Advertisements

ಯುವ ಜನತೆಯ ಚಿಂತನೆ ಮತ್ತು ಸಂಶೋಧನಾ ಮನೋಭಾವ ದೇಶವನ್ನು ಅಭಿವೃಧಿಯತ್ತ ಕೊಂಡೊಯ್ಯುತ್ತದೆ ಹಾಗಾಗಿ ವಿದ್ಯಾರ್ಥಿಗಳು ಈ ದಿಕ್ಕಿನಲ್ಲಿ ಚಿಂತಿಸಬೇಕಿದೆ ಎಂದು ತುಮಕೂರು ವಿಶ್ವ ವಿದ್ಯಾನಿಲಯದ ಉಪಕುಲಪತಿ ಡಾ. ಎಂ.ವೆಂಕಟೇಶ್ವರಲು ಅಭಿಪ್ರಾಯಪಟ್ಟರು. 

ತುಮಕೂರು ನಗರದ ಶ್ರೀ ಸಿದ್ಧಾರ್ಥ ತಾಂತ್ರಿಕ ವಿಶ್ವ ವಿದ್ಯಾನಿಲಯದ ಆವರಣದಲ್ಲಿ ಶ್ರೀ ಸಿದ್ಧಾರ್ಥ ವ್ಯವಹಾರ ನಿರ್ವಹಣಾ ಅಧ್ಯಯನ ಕೇಂದ್ರದಿಂದ ಆಯೋಜಿಸಿದ್ದಂತಹ “ಇನ್‌ಸ್ಪಿರೋ 2025” ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡಿದ ಅವರು, ಸಮಾಜದದ ಬದಲಾವಣೆಗೆ ಒಂದು ಉತ್ತಮ ಸಂಶೋಧನೆಗಳು ಕಾರಣವಾಗಬಹುದು. ಅದೇ ರೀತಿ ವಿದ್ಯಾರ್ಥಿಗಳ ಜೀವನವನ್ನು ಬದಲಾಯಿಸಿಕೊಳ್ಳಲು ಒಂದು ಸಣ್ಣ ಬದಲಾವಣೆಗಳು ಕಾರಣವಾಗುತ್ತದೆ. ಪ್ರತಿನಿತ್ಯ ವಿದ್ಯಾರ್ಥಿಗಳು ಹೊಸ ಹೊಸ ವಿಚಾರಗಳನ್ನು ಕಲಿಯುತ್ತಿರಬೇಕು. ವಿದ್ಯಾರ್ಥಿಗಳ ಗುರಿ ಕೇವಲ ಉದ್ಯೋಗವನ್ನು ಪಡೆಯುವುದಷ್ಟೇ ಅಲ್ಲ ಹೆಚ್ಚು ಹೆಚ್ಚು ಜ್ಞಾನವನ್ನು ಪಡೆದುಕೊಳ್ಳುವುದಾಗಿರಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. 

ಸಾಹೇ ವಿ.ವಿ ಉಪಕುಲಾಧಿಪತಿ ಡಾ. ಕೆ.ಬಿ ಲಿಂಗೇಗೌಡ ಮಾತನಾಡಿ ವಿದ್ಯಾರ್ಥಿಗಳಿಗೆ ಅವಕಾಶಗಳು ಸಾಕಷ್ಟಿದೆ ಅದನ್ನು ಸರಿಯಾಗಿ ಬಳಸಿಕೊಳ್ಳಬೇಕು. ಏನಾದರೊಂದು ಸಾಧಿಸಬೇಕು ಎಂದು ಹಸಿವಿದ್ದಾಗ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ ವಿದ್ಯಾರ್ಥಿಗಳು ಯಾವಾಗಲೂ ಅಧ್ಯಯನ ಶೀಲರಾಗಿ ವಿಭಿನ್ನವಾಗಿ ಆಲೋಚಿಸಿ, ಸದಾ ಸಂಶೋಧನಾ ಮನೋಭಾವವನ್ನು ಹೊಂದಿರಿ ಎಂದು ಹೇಳಿದರು. 

Advertisements

ಶ್ರೀ ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಸದಸ್ಯರಾದ ಕನ್ನಿಕಾ ಪರಮೇಶ್ವರಿ  ಮಾತನಾಡಿ ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶ್ರದ್ಧೆಯಿಂದ ಕಲಿತಾಗ ಮಾತ್ರ ತಮ್ಮ ಭವಿಷ್ಯ ಉಜ್ವಲವಾಗಿರುತ್ತದೆ ಹಾಗಾಗಿ ವಿದ್ಯಾರ್ಥಿಗಳು ಸಮಯ ಪಾಲನೆಗೆ ಹೆಚ್ಚು ಗಮನವನ್ನು ನೀಡಿ ತಮ್ಮ ಜೀವನವನ್ನು ಸುಂದರವಾಗಿಸಿಕೊಳ್ಳಿ ಎಂದು ಹೇಳಿದರು. 

ಕಾರ್ಯಕ್ರಮದಲ್ಲಿ ವಿಭಾಗದ ವಿದ್ಯಾರ್ಥಿಗಳಿಂದ ಸಾಕಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ಫ್ಯಾಷನ್ ಶೋಗಳು ಬಹಳ ಸೊಗಸಾಗಿ ಮೂಡಿಬಂದವು.   

ಇದೇ ಸಂದರ್ಭದಲ್ಲಿ ಸಾಹೇ ವಿವಿಯ ಕುಲಪತಿಗಳ ಸಲಹೆಗಾರರಾದ ಡಾ. ವಿವೇಕ್ ವೀರಯ್ಯ, ಎಸ್.ಎಸ್.ಐ.ಬಿಎಂ. ಕಾಲೇಜಿನ ಪ್ರಾಂಶುಪಾಲರಾದ ಡಾ.ಮಮತಾ ಜಿ. ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X