ಸಂವಿಧಾನ ಓದು ಅಭಿಯಾನ ಕರ್ನಾಟಕ, ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರವು ಜೂನ್ ೨೧-೨೨ರ ವರೆಗೆ ಎರಡು ದಿನಗಳ ಕಾಲ ಸಾಗರ ರಸ್ತೆಯ ಮಲ್ಲಿಗೇನಹಳ್ಳಿಯ ಸನ್ನಿಧಿ ಸೆಂಟರ್‌ನಲ್ಲಿ ನಡೆಯಲಿದೆ. ಅಧ್ಯಯನ ಶಿಬಿರವನ್ನು ಜೂ.೨೧ ರಂದು ಬೆಳಿಗ್ಗೆ ೧೦ ಕ್ಕೆ ಕ್ಕೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್‌ರವರು ಉದ್ಘಾಟನೆ ಮಾಡಲಿದ್ದಾರೆ.
ಸಚಿವ ಮಧುಬಂಗಾರಪ್ಪ, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ಕೇಂದ್ರದ ನಿರ್ದೇಶಕ ಫಾ. ಕ್ಲಿಫರ್ಡ್ ರೋಷನ್ ಪಿಂಟೋ, ಹಿರಿಯ ವಕೀಲ ಜಿ.ಎಸ್. ನಾಗರಾಜ್, ವಕೀಲ ವಿಜಯ್, ರಂಗಕರ್ಮಿ ಆರ್.ಎಸ್. ಹಾಲಸ್ವಾಮಿ ಮತ್ತಿತರರು ಉಪಸ್ಥಿತರಿರುವರು.ಜೂ.೨೧ರಂದು ನಡೆಯುವ ವಿವಿಧ ಗೋಷ್ಠಿಗಳಲ್ಲಿ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್‌ದಾಸ್, ಬಿ. ರಾಜಶೇಖರಮೂರ್ತಿ. ಆರ್. ರಾಮಕೃಷ್ಣ ಉಪನ್ಯಾಸ ನೀಡುವರು.

ಜೂ.೨೨ರಂದು ಎರಡು ಗೋಷ್ಠಿಗಳಿದ್ದು, ಸಂವಿಧಾನ ಮತ್ತು ಮಹಿಳೆ ಕುರಿತು ಶಾಂತಿ ನಾಗಲಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕುರಿತು ಕಿಗ್ಗ ರಾಜಶೇಖರ್ ಮಾತನಾಡುವರು ಎಂದರು.ಮಧ್ಯಾಹ್ನ ೧ಕ್ಕೆ ಸಮಾರೋಪ ಹಾಗೂ ಶಿಬಿರಾರ್ಥಿಗಳಿಗೆ ಪ್ರಶಸ್ತಿ ಪತ್ರ ವಿತರಿಸಲಾಗುವುದು.
ಈ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯೆ ಬಲ್ಕೀಸ್ ಬಾನು, ರೈತ ಮುಖಂಡ ಹೆಚ್.ಆರ್. ಬಸವರಾಜಪ್ಪ, ದ.ಸಂ.ಸ ಮುಖಂಡ ಎಂ. ಗುರುಮೂರ್ತಿ, ವಕೀಲ ಅನಂತನಾಯಕ್, ಜನಶಕ್ತಿ ಸಂಘಟನೆಯ ಕೆ.ಎಲ್. ಅಶೋಕ್, ಅನಂತರಾಮು ಮತ್ತಿತರರು ಭಾಗವಹಿಸುವರು.