ಬೀದರ್ ನಗರದ ಬಹಮನಿ ಕೋಟೆ ಆವರಣದಲ್ಲಿ ಶನಿವಾರ ಬೆಳಿಗ್ಗೆ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಬೀದರ್ ಜಿಲ್ಲಾ ಆಯುಷ್ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ʼಯೋಗವು ಕೇವಲ ಶಾರೀರಿಕ ವ್ಯಾಯಾಮವಲ್ಲ, ಅದು ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವನ್ನು ಸಾಧಿಸುವ ಶ್ರೇಷ್ಠ ಪಥವಾಗಿದೆ.ನಮ್ಮ ಭಾರತೀಯ ಸಂಸ್ಕೃತಿ ಕೊಟ್ಟ ಅತ್ಯಮೂಲ್ಯ ಕೊಡುಗೆಗಳಲ್ಲಿ ಯೋಗವೂ ಒಂದು. ಪ್ರತಿದಿನವೂ ಯೋಗ ಅಭ್ಯಾಸ ಮಾಡುವ ಮೂಲಕ ಆರೋಗ್ಯವಂತ ಬದುಕು ರೂಪಿಸೋಣʼ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ, ಎಸ್ಪಿ ಪ್ರದೀಪ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ. ಹೆಚ್ಚುವರಿ ಎಸ್ಪಿ ಚಂದ್ರಕಾಂತ ಪೂಜಾರಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ್ ಶೀಲವಂತ ಮತ್ತಿತರರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ: ಸಿದ್ದರಾಮಯ್ಯ