ಮಂಗಳೂರು | ತುಳುನಾಡಿನ ಪಾರಂಪರಿಕ ಕೈಮಗ್ಗ ವೃತ್ತಿಯನ್ನು ಪ್ರೋತ್ಸಾಹಿಸಿ: ಅಮರಶ್ರೀ

Date:

Advertisements

ತುಳುನಾಡಿನ ಪಾರಂಪರಿಕ ಕೈ ಮಗ್ಗ ವೃತ್ತಿಗೆ ತುಳುನಾಡಿನ ಜನತೆ ಎಲ್ಲಾ ರೀತಿಯ ಸಹಕಾರ ಬೆಂಬಲ ಕೊಡಬೇಕು ಎಂದು ಎ ಬಿ ಶೆಟ್ಟಿ ದಂತ ವೈದ್ಯಕೀಯ ಕಾಲೇಜಿನ ಅಸೋಸಿಯೇಟ್ ಡೀನ್ ಡಾ. ಅಮರಶ್ರೀ ಅಮರನಾಥ ಶೆಟ್ಟಿ ಹೇಳಿದರು.

ಮಂಗಳೂರಿನ ಕಿನ್ನಿಗೋಳಿ ನೇಕಾರ ಸೌಧದಲ್ಲಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು ಕದಿಕೆ ಟ್ರಸ್ಟ್ ಸಹಯೋಗದಲ್ಲಿ ಆಯೋಜಿಸಿದ್ದ ಕೈ ಮಗ್ಗ ನೇಯ್ಗೆಯ ಹಿರಿಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್ ಅವರಿಗೆ ಗೌರವ ಸಮರ್ಪಿಸಿ ಅವರು ಮಾತನಾಡಿದರು.

“ರಾಜ್ಯದ ಹಾಗೂ ದೇಶದ ಬೇರೆ ಬೇರೆ ಭಾಗಗಳಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಬೆಳೆದು ಬಂದ ನೇಯ್ಗೆ ವೃತ್ತಿಯ ಬಗ್ಗೆ ನಾವೆಲ್ಲ ಅಭಿಮಾನ ಪಟ್ಟುಕೊಳ್ಳುತ್ತೇವೆ. ಇದೇ ಸಂದರ್ಭದಲ್ಲಿ ನಮ್ಮದೇ ನೆಲದಲ್ಲಿ ಹುಟ್ಟಿ ಬೆಳೆದ ಒಂದು ಕಾಲದಲ್ಲಿ ಕುಲ ಕಸುಬಾಗಿದ್ದ, ಕೈ ಮಗ್ಗ ನೇಯ್ಗೆಯವರಿಗೆ ಪ್ರೋತ್ಸಾಹ ಕೊಡುವ ನಿಟ್ಟಿನಲ್ಲಿ ವರ್ಷದಲ್ಲಿ ಒಂದು ಬಾರಿಯಾದರೂ ತುಳುನಾಡಿನ ಸೀರೆ ಹಾಗೂ ಕೈ ಮಗ್ಗದ ಉತ್ಪನ್ನಗಳನ್ನು ಖರೀದಿಸಬೇಕು” ಎಂದು ಆಶಯ ವ್ಯಕ್ತಪಡಿಸಿದರು.

Advertisements

ಸನ್ಮಾನ ಸ್ವೀಕರಿಸಿ ಮಾತನಾಡಿದ ಹಿರಿಯ ಕೈ ಮಗ್ಗ ನೇಯ್ಗೆಯ ಕುಶಲಕರ್ಮಿ ದೇವಕಿ ಶೆಟ್ಟಿಗಾರ್, “ತಾಳಿಪಾಡಿ ನೇಕಾರರ ಸೇವಾ ಸಂಘ ಹಾಗೂ ಕದಿಕೆ ಟ್ರಸ್ಟ್ ಅವರ ಕಾರಣದಿಂದಾಗಿ ನಾನು ಮತ್ತೇ ನನ್ನ ಮೂಲ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಯಿತು. ನನಗೆ ಸಿಕ್ಕಿದ ಗೌರವವು ಈ ಎರಡೂ ಸಂಸ್ಥೆಗಳಿಗೆ ಅರ್ಪಿಸುತ್ತೇನೆ” ಎಂದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಮಾತನಾಡಿ, “ತುಳು ಬದುಕಿನ ವಿಶಾಲವಾದ ವ್ಯಾಪ್ತಿಯೊಳಗಡೆ ಅನೇಕ ಕುಲಕಸುಬು ಹಾಗೂ ಕುಶಲಕರ್ಮಿಗಳ ಸೇವೆ ತುಳುನಾಡಿಗೆ ಸಂದಿವೆ. ಈ ಹಿನ್ನಲೆ ಕೈ ಮಗ್ಗ ನೇಯ್ಗೆಯಲ್ಲಿ ತೊಡಗಿಸಿಕೊಂಡ ಹಿರಿಯರನ್ನು ಪ್ರೋತ್ಸಾಹಿಸುವ ಸಲುವಾಗಿ  ಅಕಾಡೆಮಿ ವತಿಯಿಂದ ಚಾವಡಿ ತಮ್ಮನದ ಗೌರವ ನೀಡಲಾಯಿತು” ಎಂದರು.

ಇದನ್ನೂ ಓದಿ: ಮಂಗಳೂರು | ‘ಮರೆಯಲಾಗದ ಬ್ಯಾರಿ ಮಹನೀಯರು’ ಕೃತಿಯ ಎರಡನೇ ಭಾಗ ಬಿಡುಗಡೆ

ಕದಿಕೆ ಟ್ರಸ್ಟ್ ನ ಅಧ್ಯಕ್ಷೆ ಮಮತಾ ರೈ ಮಾತನಾಡಿ, “2018 ರಲ್ಲಿ ಕದಿಕೆ ಟ್ರಸ್ಟ್ ವತಿಯಿಂದ ಪಾರಂಪರಿಕ ಕೈ ಮಗ್ಗವನ್ನು ಪುನರುಜ್ಜೀವನಗೊಳಿಸುವ  ಕೆಲಸ ಮಾಡಿಕೊಂಡು ಬರಲಾಯಿತು. ಇಂದು ದೇವಕಿ ಶೆಟ್ಟಿಗಾರ್ ಅವರಂತೆ ಹಿರಿಯರು ಈ ವೃತ್ತಿಯಲ್ಲಿ ಮತ್ತೆ ತೊಡಗಿಸಿಕೊಳ್ಳಲು ಹಾಗೂ ಹೊಸಬರು ಈ ವೃತ್ತಿಗೆ ಬರುವಂತೆ ಪ್ರೇರೇಪಿಸಲು  ಸಾಧ್ಯವಾಗಿದೆ. ಕೈ ಮಗ್ಗ ಬಟ್ಟೆಗಳನ್ನು ಖರೀದಿಸುವ ಮೂಲಕ ಇವರನ್ನು ನಾವು ಪ್ರೋತ್ಸಾಹಿಸಬೇಕು” ಎಂದರು.

ಸಮಾರಂಭದಲ್ಲಿ ಹಿರಿಯ ಸಾಹಿತಿ ಡಾ. ಪ್ರಭಾಕರ ನೀರ್ ಮಾರ್ಗ, ಕೊಡೆತ್ತೂರು ಸಚ್ಚಿದಾನಂದ ಉಡುಪ, ತುಳು ಪರಿಷತ್ ಅಧ್ಯಕ್ಷ ಶುಭೋದಯ ಆಳ್ವ ಸೇರಿದಂತೆ ಇತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X