ಉಡುಪಿ | ಇಡೀ ವಿಶ್ವಕ್ಕೆ ಯೋಗ ಕಲಿಸಿದ್ದು ಭಾರತ – ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್

Date:

Advertisements

ಇಡೀ ವಿಶ್ವವೇ ಭಾರತದ ಆರೋಗ್ಯ ಪದ್ಧತಿಯನ್ನು ಅಳವಡಿಸಿಕೊಂಡಿದೆ. ಪ್ರತಿಯೊಬ್ಬರು ಯೋಗವನ್ನು ನಿತ್ಯ ಪರಂಪರೆಯಾಗಿ ಅಳವಡಿಸಿಕೊಳ್ಳಬೇಕು. ಪ್ರತಿದಿನ ಕನಿಷ್ಠ 30 ನಿಮಿಷವಾದರೂ ಯೋಗ ಮಾಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳಕರ್ ಹೇಳಿದರು.

ಅವರು ಇಂದು ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಹಾಗೂ ಡಾ.ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಅಂತರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಯೋಗದಿಂದ ಮಾತ್ರ ಮನಸ್ಸಿಗೆ ಉಲ್ಲಾಸ ಸಿಗುತ್ತದೆ. ನಾನು ಕಳೆದ 25 ವರ್ಷಗಳಿಂದ ಯೋಗಾಭ್ಯಾಸ ಮಾಡುತ್ತಿದ್ದೇನೆ. ನಾನು ದಿನಕ್ಕೆ 15 ಗಂಟೆ ಕೆಲಸ ಮಾಡುವ ಸಾಮರ್ಥ್ಯದ ಹಿಂದೆ ಯೋಗವಿದೆ. ಇದೇ ಜನವರಿ 14 ರಂದು ನನಗೆ ಅಪಘಾತ ಆಯಿತು, ಬೆನ್ನು ನೋವಿನಿಂದಾಗಿ ಇಂದು ಯೋಗ ಮಾಡಲು ಸಾಧ್ಯವಾಗಲಿಲ್ಲ ಎಂದು ಹೇಳಿದರು.

Advertisements

ನಾನು ವಾರಕ್ಕೆ ಐದು ದಿನ ಯೋಗ ಮಾಡುತ್ತೇನೆ. ಇವತ್ತಿನ ಆಧುನಿಕ ಜಗತ್ತಿನಲ್ಲಿ ಯೋಗ ಬೇಕೇ ಬೇಕು. ಪ್ರತಿ ದಿನ 25 ರಿಂದ 50 ಸೂರ್ಯ ನಮಸ್ಕಾರ ಮಾಡುತ್ತಿದ್ದೆ. ಭುಜಂಗಾಸನ, ವೀರಭದ್ರಾಸನ, ಪ್ರಾಣಾಯಾಮ ನನ್ನ ಆರೋಗ್ಯದ ಗುಟ್ಟು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಉಡುಪಿ ಜಿಲ್ಲೆ ಎಸ್.ಎಸ್.ಎಲ್.ಸಿ ಯಲ್ಲಿ ಎರಡನೇ, ಪಿಯುಸಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, ಶೈಕ್ಷಣಿಕವಾಗಿ ಜಿಲ್ಲೆ ತನ್ನ ಸಾಮರ್ಥ್ಯ ಹೆಚ್ಚಿಸಿಕೊಂಡಿದೆ. ದೇಶದ ಸಂಸ್ಕೃತಿ ಆಚಾರ, ವಿಚಾರವನ್ನು ಎಲ್ಲರೂ ಅಳವಡಿಸಿ ಕೊಳ್ಳಬೇಕು. ತಂದೆ ತಾಯಂದಿರು ನಮ್ಮ ಮಕ್ಕಳೇ ನಮಗೆ ಆಸ್ತಿ ಎನ್ನುತ್ತಾರೆ. ಮಕ್ಕಳು ಕೂಡ ನಮ್ಮ ತಂದೆ ತಾಯಿಯೇ ನಮ್ಮ ಆಸ್ತಿ ಎನ್ನುವಂತೆ ಆಗಲಿ ಎಂದು ಹೇಳಿದರು.
ಯೋಗವೆಂದರೆ ಕೇವಲ ವ್ಯಾಯಾಮ, ಪ್ರಾಣಾಯಾಮ ಮಾತ್ರ ಅಲ್ಲ, ಅದೊಂದು ಆರೋಗ್ಯಕರ ಜೀವನದ ವಿಧಾನ, ಯೋಗವಿದ್ದಲ್ಲಿ ರೋಗವಿಲ್ಲ, ಯೋಗವೇ ಭೋಗವಾದರೆ ಮನುಷ್ಯನ ಎಲ್ಲಾ ಚಟುವಟಿಕೆಗಳು ಸ್ವಾಭಿಮಾನದ ಸ್ವಾತಂತ್ರ‍್ಯವನ್ನು ಗಳಿಸುತ್ತದೆ. ನಮ್ಮ ಪ್ರಧಾನಿ ಮೋದಿ ಅವರು ಇಡೀ ವಿಶ್ವಕ್ಕೆ ಯೋಗದ ಮಹತ್ವದ ಬಗ್ಗೆ ಹೇಳಿಕೊಟ್ಟರು ಎಂದರು.

ಶಾಸಕ ಯಶ್‌ಪಾಲ್ ಎ ಸುವರ್ಣ ಮಾತನಾಡಿ, ಜೀವನಶೈಲಿಯಲ್ಲಿ ಯೋಗ ಅಳವಡಿಸಿಕೊಳ್ಳುವ ಮೂಲಕ ಆರೋಗ್ಯಕರ ಜೀವನ ರೂಢಿಸಿಕೊಳ್ಳಬಹುದು. ಯೋಗ ಮಾಡಲು ಯಾವುದೇ ರೀತಿಯ ವೆಚ್ಚವಾಗುವುದಿಲ್ಲ. ಇತ್ತೀಚಿಗಿನ ಜೀವನಶೈಲಿಯು ಮನುಷ್ಯನ ದೇಹ ಮತ್ತು ಮನಸ್ಸಿನ ಮೇಲೆ ಸಾಕಷ್ಟು ಒತ್ತಡ ತರುತ್ತದೆ. ಇದರಿಂದ ಮುಕ್ತರಾಗಲು ಯೋಗ ಒಂದೇ ಸರಿಯಾದ ಮಾರ್ಗವಾಗಿದೆ ಎಂದರು.

ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಯೋಗಾಭ್ಯಾಸವು ಪ್ರತಿಯೊಬ್ಬರ ಜೀವಶೈಲಿಯ ಭಾಗವಾಗಬೇಕು. ಯೋಗಾಭ್ಯಾಸವು ಅನಾರೋಗ್ಯ ಹಾಗೂ ಹೆಚ್ಚಿನ ದೈಹಿಕ ಸಮಸ್ಯೆಗಳನ್ನು ದೂರ ಮಾಡುತ್ತದೆ. ಇತ್ತೀಚಿನ ದಿನಗಳಲ್ಲಿ ಯೋಗಾಭ್ಯಾಸವು ವಿಶ್ವದಲ್ಲಿಯೇ ಹೆಚ್ಚಿನ ಮಹತ್ವ ಪಡೆದಿದ್ದು, ಅನೇಕ ದೇಶಗಳಲ್ಲಿ ಜನರು ಇದನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕೊಡವೂರು, ಉಡುಪಿ ತಾಲೂಕು ಅಧ್ಯಕ್ಷ ರಮೇಶ್ ಕಾಂಚನ್, ಪ್ರಸಾದ್ ರಾಜ್ ಕಾಂಚನ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಿ.ಎಫ್.ಓ ಗಣಪತಿ, ವಿದ್ಯಾರ್ಥಿಗಳು ಹಾಗೂ ಮತ್ತಿತರು ಉಪಸ್ಥಿತರಿದ್ದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ಸತೀಶ್ ಆಚಾರ್ಯ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ನಿರೂಪಿಸಿ, ಡಾ. ಹೇಮಲತಾ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X