ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರ 75 ನೇ ವರ್ಷದ ಹುಟ್ಟು ಹಬ್ಬದ ಅಮೃತ ಮಹೋತ್ಸವ ಸಮಾರಂಭ ಮುಗಿಸಿ ಮರಳಿ ಊರಿಗೆ ಹೊರಟಿದ್ದ ಮಹಿಳೆ ಬಸ್ಸಿನಲ್ಲೇ ಹೃದಯಾಘಾತಕ್ಕೆ ಬಲಿಯಾದ ಘಟನೆ ಶನಿವಾರ ಸಂಜೆ ನಡೆದಿದೆ.
ತುಮಕೂರಿನಿಂದ ಹೊರಟು ಮಾರ್ಗ ಮಧ್ಯೆ ಹೃದಯಾಘಾತಕ್ಕೆ ಒಳಗಾದ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿ ಸೀಗೆಹಳ್ಳಿ ಗ್ರಾಮದ ಸುನಂದಮ್ಮ (55) ಬಸ್ಸಿನಲ್ಲೇ ಮೃತ ಪಟ್ಟಿದ್ದಾರೆ. ತುರುವೇಕೆರೆ ಕಡೆಗೆ ಹೊರಟಿದ್ದ ಬಸ್ಸು ಕೂಡಲೇ ಗುಬ್ಬಿ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಪರೀಕ್ಷೆಗೆ ಒಳಪಡಿಸಲಾಗಿ ಮೃತಪಟ್ಟಿರುವ ಬಗ್ಗೆ ವೈದ್ಯರು ದೃಢಪಡಿಸಿದರು.
ವಿಷಯ ತಿಳಿದು ಸ್ಥಳಕ್ಕೆ ತಹಶೀಲ್ದಾರ್ ಆರತಿ.ಬಿ ಹಾಗೂ ಗುಬ್ಬಿ ಪೊಲೀಸರು ಧಾವಿಸಿ ಮುಂದಿನ ಕ್ರಮ ಕೈಗೊಂಡರು. ಮರಣೋತ್ತರ ಪರೀಕ್ಷೆ ನಡೆಸಿ ಮೃತರ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು.