ಶಿವಮೊಗ್ಗ | ಸಂವಿಧಾನದ ಓದು ಪ್ರಜಾಪ್ರಭುತ್ವದ ಅರಿವನ್ನು ವಿಸ್ತರಿಸುತ್ತದೆ ; ನ್ಯಾ. ಹೆಚ್.ಎನ್. ನಾಗಮೋಹನ್ ದಾಸ್

Date:

Advertisements

ಶಿವಮೊಗ್ಗದಲ್ಲಿ ಇಂದು ಸಂವಿಧಾನದ ಓದು ಪ್ರಜಾಪ್ರಭುತ್ವದ ಅರಿವನ್ನು ವಿಸ್ತರಿಸುತ್ತದೆ ಎಂದು ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಹೇಳಿದರು.ಅವರು ಇಂದು ಸಂವಿಧಾನ ಓದು ಅಭಿಯಾನ ಕರ್ನಾಟಕ ಸಮಾನ ಮನಸ್ಕ ಸಂಘಟನೆಗಳು ಇವರ ಸಂಯುಕ್ತಾಶ್ರಯದಲ್ಲಿ ಸಾಗರ ರಸ್ತೆಯಲ್ಲಿರುವ ಮಲ್ಲಿಗೇನಹಳ್ಳಿಯ ಸನ್ನಿಧಿ ಪಾಲನಾ ನವೀಕರಣ ಕೇಂದ್ರದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಂವಿಧಾನ ಓದು ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಭಾರತ ದೇಶವನ್ನು ತಿಳಿಯದೇ ಭಾರತ ಸಂವಿಧಾನ ತಿಳಿಯಲು ಸಾಧ್ಯವಿಲ್ಲ. ಸಂವಿಧಾನ ತಿಳಿಯದೇ ಅದರ ಮೂಲ ತತ್ವವನ್ನು ಅರಿಯಲು ಸಾಧ್ಯವಾಗುವುದಿಲ್ಲ. ಅಧಿಕಾರ, ನ್ಯಾಯಾಂಗ, ಕಾರ್ಯಾಂಗದ ವ್ಯಾಪ್ತಿಗಳು ಅದರ ಸ್ವೇಚ್ಛಾಚಾರ ಇವುಗಳನ್ನೆಲ್ಲಾ ಸಂವಿಧಾನದ ಮೂಲಕವೇ ನಾವು ಅರ್ಥಮಾಡಿಕೊಳ್ಳಬೇಕಾಗುತ್ತದೆ ಎಂದರು.

1001785846

ಸಂಸ್ಕೃತಿ, ಉಪಸಂಸ್ಕೃತಿ, ಧರ್ಮ, ಜಾತಿ, ಆರ್ಥಿಕ, ಸಾಮಾಜಿಕ ಸಂಬಂಧಗಳು ಇವೆಲ್ಲವೂ ಸಂವಿಧಾನದ ಓದುವಿನಿಂದ ಮನನವಾಗುತ್ತವೆ. ಸಂವಿಧಾನ ಅರ್ಥ ಮಾಡಿಕೊಳ್ಳುವುದರಿಂದ ಸಹಿಷ್ಣುತೆ ಹೆಚ್ಚುತ್ತದೆ ಎಂದರು.ಸಮ ಸಮಾಜದ ನಿರ್ಮಾಣ ಭಾರತೀಯತೆ, ಮಾನವೀಯತೆ ಈ ಮುಂತಾದ ಅಂಶಗಳನ್ನಿಟ್ಟುಕೊಂಡೇ ಅಂಬೇಡ್ಕರ್ ಅವರು ಸಂವಿಧಾನವನ್ನು ರಚಿಸಿದ್ದಾರೆ. ಸಂವಿಧಾನದ ಆಶಯಗಳು ಕಟ್ಟಕಡೆಯ ಮನುಷ್ಯರನ್ನು ತಲುಪಬೇಕು ಎಂದರು. ಸಂವಿಧಾನ ಎಲ್ಲಾ ಮನುಷ್ಯರು ಸಮಾನರು ಎಂಬ ತತ್ವದ ಅಡಿಯಲ್ಲಿಯೇ ರೂಪುಗೊಂಡಿದೆ ಎಂದರು.

Advertisements

ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮುಖ್ಯ ಅತಿಥಿಯಾಗಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಇಂತಹ ಕಾರ್ಯಕ್ರಮಗಳಲ್ಲಿ ರಾಜಕಾರಣಿಗಳು ಭಾಗವಹಿಸುವುದೇ ಒಂದು ಪುಣ್ಯದ ಕೆಲಸ. ಇದು ನಮ್ಮ ಕರ್ತವ್ಯವೂ ಹೌದು. ನೆಲ., ಜಲ, ಭಾಷೆ, ಧರ್ಮ. ಎಲ್ಲವೂ ಸೇರಿಯೇ ಭಾರತವಾಗಿದೆ. ಇದರ ರಕ್ಷಣೆಗೆ ಸಂವಿಧಾನೆ ನಿಂತುಕೊಂಡಿದೆ. ಸಂವಿಧಾನವನ್ನು ನಾವು ರಕ್ಷಿಸಬೇಕಾಗ ಸಂದರ್ಭ ಬಂದಿರುವುದು ವಿಷಾದನೀಯ. ಆದರೆ ಭಾರತೀಯರಿಗೆ ಸಂವಿಧಾನವೇ ಶ್ರೇಷ್ಟ ಗ್ರಂಥ ಎಂದರು.ಸಂವಿಧಾನದ ಅರಿವನ್ನು ಮೂಡಿಸುವ ಉದ್ದೇಶದಿಂದಲೇ 1 -10ನೇ ತರಗತಿ ವಿದ್ಯಾರ್ಥಿಗಳಿಗೆ ಸಂವಿಧಾನ ಪೀಠಿಕೆ ಓದುವುದನ್ನು ನಾನು ಶಿಕ್ಷಣ ಸಚಿವನಾದ ಮೇಲೆ ಕಡ್ಡಾಯವನ್ನಾಗಿ ಮಾಡಿದ್ದೇನೆ. ಶಿಕ್ಷಕರು ಕಡ್ಡಾಯವಾಗಿ ಸಂವಿಧಾನ ಪೀಠಿಕೆ ಓದಿಸಬೇಕು. ಮತ್ತು ಕ್ರಮೇಣ ಅರ್ಥ ಮಾಡಿಸಬೇಕು. ಡಿಡಿಪಿಐ ಈ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.

ಗಾಂಧೀಜಿಯನ್ನೇ ಮರೆತುಬಿಡುವ ಅಪಾಯವಿದೆ. ಮಕ್ಕಳು ಗಾಂಧೀಜಿಯವರನ್ನೂ ನೆನಪಿಸಿಕೊಳ್ಳಬೇಕು ಎಂಬ ಉದ್ದೇಶದಿಂದ ಸುಮಾರು 10 ಕೋಟಿ ಪುಸ್ತಕಗಳಳ್ಳಿ ಗಾಂಧೀಜಿ ಮತ್ತು ಸಂವಿಧಾನದ ಬಗ್ಗೆ ಪ್ರಕಟಿಸಲಾಗುವುದು ಎಂದರು. ಸಂವಿಧಾನವನ್ನು ಓದುವುದರ ಮೂಲಕ ಅದರ ಮೌಲ್ಯ ಹೆಚ್ಚಾಗಬೇಕು. ಮತ್ತು ದೇಶದ ಒಗ್ಗಟ್ಟಿದೆ. ಸಂವಿಧಾನವೇ ಪ್ರೇರಣೆ ಎಂದರು.

1001785847

ಸಂಯೋಜಕ ಮತ್ತು ಕಾರ್ಯಕ್ರಮ ಆಯೋಜಕ ಕೆ.ಪಿ. ಶ್ರೀಪಾಲ್ ಪ್ರಾಸ್ತಾವಿಕವಾಗಿ ಮಾತನಾಡಿ, ಸಂವಿಧಾನ ಓದು ಅಧ್ಯಯನ ಶಿಬಿರದಿಂದ ಭಾರತ ಸಂವಿಧಾನದ ಬಗ್ಗೆ ಹೆಚ್ಚು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ. ಸಂವಿಧಾನ ಓದು ಇಂದು ಅನಿವಾರ್ಯವಾಗಿದೆ. ಇಂದು ಮತ್ತು ನಾಳೆ ಸಂವಿಧಾನ ಕುರಿತಂತೆ ಹಲವು ತಜ್ಞರು ಮಾಹಿತಿ ನೀಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ, ಸನ್ನಿಧಿ ಪಾಲನಾ ನವೀಕರಣ ಕೇಂದ್ರದ ನಿರ್ದೇಶಕ ಫಾ. ಕ್ಲಿಫರ್ಡ್ ರೋಷನ್ ಪಿಂಟೋ. ಹಿರಿಯ ವಕೀಲ ಜಿ.ಎಸ್. ನಾಗರಾಜ್, ಜಿಲ್ಲಾಧಿಕಾರಿ ಗುರುದತ್ ಹೆಗಡೆ, ಸಿಇಒ ಹೇಮಂತಕುಮಾರ್, ಸಂಪನ್ಮೂಲ ವ್ಯಕ್ತಿ ಬಿ. ರಾಜಶೇಖರ್ ಮೂರ್ತಿ, ಭೋವಿ ನಿಗಮದ ಅಧ್ಯಕ್ಷ ರವಿಕುಮಾರ್ ಸೇರಿದಂತೆ ಹಲವರಿದ್ದರು.ಪತ್ರಕರ್ತ ಆರ್.ಎಸ್. ಹಾಲಸ್ವಾಮಿ ಕಾರ್ಯಕ್ರಮ ನಿರೂಪಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬಣದಲ್ಲಿ ಅಸಮಾಧಾನ : ಎಂಎಲ್ ಸಿ ಕಾರು ತಡೆ ವಾಗ್ವಾದ

ಎಂಎಲ್ ಸಿ ಶರಣಗೌಡ ಪಾಟೀಲ್‌ ಅವರ ಕಾರಿಗೆ ಡಿ ಎಸ್ ಹುಲಗೇರಿ...

ಕಲಬುರಗಿ | ಮೂರು ತಿಂಗಳಿಂದ ಪಾವತಿಯಾಗದ ʼಗೃಹಲಕ್ಷ್ಮೀʼ ಹಣ : ವೆಲ್ಫೇರ್ ಪಾರ್ಟಿ ಆಕ್ರೋಶ

ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಪಂಚ ಗ್ಯಾರಂಟಿಯ ಗೃಹಲಕ್ಷ್ಮೀ ಯೋಜನೆಯ ಹಣ...

ಬೆಳಗಾವಿ : ಮೂರು ವರ್ಷದ ಹೆಣ್ಣು ಮಗುವನ್ನು ಆಸ್ಪತ್ರೆಯಲ್ಲಿ ಬಿಟ್ಟು ಹೋದ ತಂದೆ ತಾಯಿ

ತಾಯಿಯ ಮಡಿಲಿಗೆ ತವಕಿಸುತ್ತಿರುವ ಮೂರು ವರ್ಷದ ಹೆಣ್ಣುಮಗುವನ್ನು ಆಸ್ಪತ್ರೆಯಲ್ಲಿ ತಂದೆ ತಾಯಿಗಳು...

Download Eedina App Android / iOS

X