ಕರ್ನಾಟಕದ ಬಹುತೇಕ ಕಡೆ ಮುಂಗಾರು ದುರ್ಬಲವಾಗಿದ್ದು, ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆ ತುಸು ಹೆಚ್ಚಿದೆ. ಆರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಧಾರಣ ಮಳೆಯಾಗಲಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್ನಲ್ಲಿ ಒಣಹವೆ ಮುಂದುವರೆಯಲಿದೆ.
ಹಾವೇರಿ, ಗದಗ, ಧಾರವಾಡ, ಬೆಳಗಾವಿಯಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ. ಕದ್ರಾ, ಆಗುಂಬೆ, ಕ್ಯಾಸಲ್ರಾಕ್, ಖಾನಾಪುರ್, ಮಂಕಿ, ಯಲ್ಲಾಪುರ, ಸಿದ್ದಾಪುರ, ಭಾಗಮಂಡಲ, ಕಮ್ಮರಡಿ, ಶೃಂಗೇರಿ, ಕೊಪ್ಪ, ಸೋಮವಾರಪೇಟೆ, ಮಾಣಿ, ಪುತ್ತೂರು, ಬೆಳ್ತಂಗಡಿ, ಗೇರುಸೊಪ್ಪ, ಅಂಕೋಲಾ, ಜೋಯ್ಡಾ, ಹಿರೇಕೆರೂರು, ಸಂಕೇಶ್ವರ, ಲೋಂಡಾ, ನಿಪ್ಪಾಣಿ, ಧಾರವಾಡ, ಆನವಟ್ಟಿ, ದಾವಣಗೆರೆ, ಹುಣಸೂರಿನಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 30.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 31.1 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.2ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಬಿ.ಆರ್ ಪಾಟೀಲ್ ಆರೋಪಗಳೂ, ಸರ್ಕಾರದ ನೈತಿಕತೆಯೂ
ಹೊನ್ನಾವರದಲ್ಲಿ 31.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಗಳೂರು ಏರ್ಪೋರ್ಟ್ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 25.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಕ್ತಿನಗರದಲ್ಲಿ 31.1ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಬೆಳಗಾವಿಯಲ್ಲಿ 25.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೀದರ್ನಲ್ಲಿ32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ,22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಧಾರವಾಡದಲ್ಲಿ 27.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಗದಗದಲ್ಲಿ 30.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 33.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 26.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 32.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 35.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.