ಮಂಡ್ಯ ಜಿಲ್ಲೆ, ಕೃಷ್ಣರಾಜ ಪೇಟೆ ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಊಗಿನಹಳ್ಳಿ ಗ್ರಾಮದ ಮುಖ್ಯ ರಸ್ತೆಯಿಂದ ಸರ್ಕಾರಿ ಶಾಲೆಯವರೆಗೆ ₹2 ಲಕ್ಷದ 4 ಸಾವಿರ ರೂಪಾಯಿಗಳ ವೆಚ್ಚದಲ್ಲಿ ಮಹಾಗನಿ, ನೇರಳೆ, ಬೇವು ಸೇರಿದಂತೆ 300 ಗಿಡ ನೆಡುವ ಯೋಜನೆ ಕೈಗೊಳ್ಳುವ ಮುನ್ನವೇ ಹಣ ಪಾವತಿ ಮಾಡಿರುವುದು ವರದಿಯಾಗಿದೆ.
ಗ್ರಾಮ ಪಂಚಾಯಿತಿ ಮನರೇಗಾ ಯೋಜನೆಯಡಿ ಅವ್ಯವಹಾರ ನಡೆದಿರುವ ಬಗ್ಗೆ ‘ ಉದ್ಯೋಗ ಖಾತರಿ ಯೋಜನೆಯಡಿ ದೋಖಾ – ಗ್ರಾಮಸ್ಥರಿಂದ ಪ್ರತಿಭಟನೆ ‘ ಎಂದು ಮಾಧ್ಯಮಗಳು ವರದಿ ಮಾಡಿದ್ದವು. ಈ ಹಿನ್ನಲೆಯಲ್ಲಿ ತಾಲ್ಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ದಾಖಲೆಗಳನ್ನು ಪರಿಶೀಲನೆ ಮಾಡಿ ವರದಿ ಸಲ್ಲಿಸಿದ್ದರು.
ಈ ಸುದ್ದಿ ಓದಿದ್ದೀರಾ? ಮಂಡ್ಯ | ದಲಿತ ಯುವಕನ ಸಜೀವ ದಹನ ಪ್ರಕರಣ; ಸ್ಥಳಕ್ಕೆ ಸಿಐಡಿ ತಂಡ ಭೇಟಿ
ಜಿಲ್ಲಾ ಪಂಚಾಯತ್ ಸಿಇಓ ನಂದಿನಿಯವರು ಗ್ರಾಮ ಪಂಚಾಯತಿ ಪಿಡಿಓ, ಸಹಾಯಕ ನಿರ್ದೇಶಕರು, ಮನರೇಗಾ ತಾಂತ್ರಿಕ ಸಂಯೋಜಕ ಹಾಗೂ ತಾಂತ್ರಿಕ ಸಹಾಯಕರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿದ್ದಾರೆ. ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಾನೂನು ರೀತ್ಯಾ ಕ್ರಮ ಕೈಗೊಳ್ಳಲಾಗುವುದು. ಯೋಜನೆ ಅನುಷ್ಠಾನ ಮಾಡದೆ ಪಾವತಿ ಮಾಡಿರುವ ಹಣವನ್ನು ವಸೂಲಿ ಮಾಡುವುದಾಗಿ ಪತ್ರಿಕಾ ಹೇಳಿಕೆ ನೀಡಿರುತ್ತಾರೆ.