ಉಡುಪಿ | ಹೆತ್ತ ತಾಯಿಯನ್ನೆ ಕೊಂದ ಮಗ, ಮರಣೋತ್ತರ ಪರೀಕ್ಷೆಯಿಂದ ಬಯಲಾಯ್ತು ಪ್ರಕರಣ

Date:

Advertisements

ಹಣ ಹಾಗೂ ಕೌಂಟುಂಬಿಕ ಕಲಹದ ಹಿನ್ನೆಲೆ ತನ್ನ ತಾಯಿಯನ್ನೇ ಮಗ ಕೊಲೆಗೈದಿರುವ ಘಟನೆ ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗುರುವಾರ ನಡೆದಿದೆ.

ಮೃತ ಮಹಿಳೆಯನ್ನು ಪದ್ಮಾಬಾಯಿ ಎಂದು ಗುರುತಿಸಲಾಗಿದ್ದು, ಪದ್ಮಾಬಾಯಿ ಮಗ ಈಶ ನಾಯಕ್ (26) ತಾಯಿಯನ್ನು ಕೊಲೆಗೈದ ಆರೋಪಿ.

ಜೂನ್ 19ರ ಗುರುವಾರ ಪದ್ಮಾಬಾಯಿಯವರು ಮಲಗಿದ್ದಲ್ಲಿಂದ ಏಳುತ್ತಿಲ್ಲವೆಂದು ಅವರ ಮಗ ಪೋನ್ ಕರೆ ಮಾಡಿ ಪದ್ಮಾಬಾಯಿ ತಂಗಿ ಶಿಲ್ಪ ಎನ್ನುವವರಿಗೆ ತಿಳಿಸಿದ್ದಾರೆ. ಬಳಿಕ ಪದ್ಮಾಬಾಯಿ ಅವರನ್ನು ಚಿಕಿತ್ಸೆ ಹಿನ್ನೆಲೆ ಉಡುಪಿಯ ಜಿಲ್ಲಾ ಅಜ್ಜರಕಾಡು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅವರನ್ನು ಪರೀಕ್ಷಿಸಿದ ವೈದ್ಯರು ಪದ್ಮಾಬಾಯಿ ಈಗಾಗಲೇ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

Advertisements

ಪದ್ಮಾಬಾಯಿಯವರ ಕುತ್ತಿಗೆಯ ಬಳಿ ಕೆಂಪಾಗಿದ್ದ ಹಿನ್ನೆಲೆ ಯಾರೋ ಕುತ್ತಿಗೆಯನ್ನು ಒತ್ತಿ ಕೊಂದಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ ಶಿಲ್ಪ ಅವರು, ಮಣಿಪಾಲ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಮೃತ ಶರೀರವನ್ನು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯ ಶವಾಗಾರದಲ್ಲಿ ಕಸ್ತೂರ್ಬಾ ಆಸ್ಪತ್ರೆಯ ಪೊರೆನ್ಸಿಕ್ ಮೆಡಿಸಿನ್ ವಿಭಾಗದ ವೈದ್ಯಾಧಿಕಾರಿಯವರಿಂದ ವೈದ್ಯಕೀಯ ಶವಮರಣೋತ್ತರ ಪರೀಕ್ಷೆ ನಡೆಸಲಾಯಿತು. ಜೂನ್ 21ರಂದು ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ವರದಿ ಬಂದಿದ್ದು ಅದರಲ್ಲಿ ಪದ್ಮಾಬಾಯಿಯವರನ್ನು ಯಾರೋ ದುಷ್ಕರ್ಮಿಗಳು ಕೊಲೆ ಮಾಡಿರುವುದಾಗಿ ತಿಳಿದು ಬಂದಿದೆ.

ಈ ಪ್ರಕರಣವನ್ನು ಕೊಲೆ ಪ್ರಕರಣವೆಂದು ಪರಿಗಣಿಸಿದ ಪೊಲೀಸರು ತನಿಖೆ ನಡೆಸಿದ್ದು, ಈ ವೇಳೆ ಪದ್ಮಾ ಬಾಯಿರವರನ್ನು ಅವರ ಮಗನಾದ ಈಶ ನಾಯ್ಕ ಎನ್ನುವವನು ಹಣಕ್ಕಾಗಿ ಹಾಗೂ ಕೌಟುಂಬಿಕ ಕಲಹದಿಂದ ಕೊಲೆ ಮಾಡಿರುವುದಾಗಿ ತಿಳಿದು ಬಂದಿರುತ್ತದೆ. ಪ್ರಕರಣದ ಆರೋಪಿಯಾದ ಈಶ ನಾಯಕ್ ನನ್ನು ದಸ್ತಗಿರಿ ಮಾಡಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆಂದು ಪೊಲೀಸರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X