ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ನೊಬೆಲ್ ಪ್ರಶಸ್ತಿ ನೀಡಬೇಕು ಎಂದು ಚಲನಚಿತ್ರ ನಿರ್ಮಾಪಕ ಹನ್ಸಲ್ ಮೆಹ್ತಾ ಅವರು ಹೇಳಿದ್ದಾರೆ. ಆದರೆ ಟ್ರಂಪ್ ಮಾಡಿದ ಕೆಲಸಕ್ಕಾಗಿ ಅಲ್ಲ, ಬದಲಿಗೆ ಟ್ರಂಪ್ ಒಮ್ಮೆ ಬಾಯಿ ಮುಚ್ಚಲು ಪ್ರಶಸ್ತಿ ನೀಡಬೇಕು ಎಂದು ಹೇಳಿದ್ದಾರೆ. ಈ ಬಗ್ಗೆ ಹನ್ಸಲ್ ಮೆಹ್ತಾ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.
ಇತ್ತೀಚೆಗೆ ಟ್ರಂಪ್, “ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ. ಸೆರ್ಬಿಯಾ ಮತ್ತು ಕೊಸೊವೊ ನಡುವಿನ ಯುದ್ಧವನ್ನು ನಿಲ್ಲಿಸಿದ್ದಕ್ಕಾಗಿ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ” ಎಂದು ಹೇಳಿದ್ದರು. ಹಾಗೆಯೇ ಪಾಕಿಸ್ತಾನ ನೊಬಲ್ ಪ್ರಶಸ್ತಿಗೆ ಡೊನಾಲ್ಡ್ ಟ್ರಂಪ್ ಹೆಸರನ್ನು ನಾಮನಿರ್ದೇಶನ ಮಾಡಿದೆ.
ಇದನ್ನು ಓದಿದ್ದೀರಾ? ನಾನು ಏನೇ ಮಾಡಿದರೂ ನನಗೆ ನೊಬೆಲ್ ಶಾಂತಿ ಪ್ರಶಸ್ತಿ ಸಿಗುವುದಿಲ್ಲ: ಟ್ರಂಪ್
ಟ್ರಂಪ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಮೆಹ್ತಾ, “ಟ್ರಂಪ್ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ ಬೇಕಾದರೆ, ಅವರಿಗೆ ಅದನ್ನು ಖಂಡಿತ ನೀಡಿ. ಅವರ ಣಿವರಿಯದ ಮೋಟಾರ್ ಬಾಯಿಯನ್ನು ಮುಚ್ಚಿಸಲು ತೆರಬೇಕಾದ ಸಣ್ಣ ಬೆಲೆ ಅದು” ಎಂದು ಬರೆದುಕೊಂಡಿದ್ದಾರೆ.
ಪಾಕಿಸ್ತಾನದ ಭಯೋತ್ಪಾದಕ ಸಂಘಟನೆ ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಕೊಂದಿದೆ. ಇದಕ್ಕೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ ಒಂಬತ್ತು ಭಯೋತ್ಪಾದಕ ನೆಲೆಗಳ ಮೇಲೆ ಕ್ಷಿಪಣಿ ದಾಳಿ ನಡೆಸಿ 100ಕ್ಕೂ ಹೆಚ್ಚು ಉಗ್ರರ ಹತ್ಯೆ ಮಾಡಿದೆ.
ಈ ಬಳಿಕ ಪಾಕಿಸ್ತಾನ ಮತ್ತು ಭಾರತದ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು ದಾಳಿ ಪ್ರತಿದಾಳಿ ನಡೆಯುತ್ತಲೇ ಇತ್ತು. ಕೊನೆಗೆ ಎರಡೂ ದೇಶಗಳು ಮಾತುಕತೆ ನಡೆಸಿ ಕದನ ವಿರಾಮ ಒಪ್ಪಂದವನ್ನು ಮಾಡಿಕೊಂಡಿದೆ. ಆದರೆ ಈ ಒಪ್ಪಂದವನ್ನು ತಾನೇ ಮಾಡಿಸಿದ್ದು ಎಂದು ಟ್ರಂಪ್ ನಿರಂತರವಾಗಿ ಹೇಳಿಕೊಳ್ಳುತ್ತಿದ್ದಾರೆ. ಇಂತಹ ಕಾರ್ಯಗಳಿಗೆ ನೊಬೆಲ್ ಪ್ರಶಸ್ತಿ ನೀಡಲ್ಲ ಎಂದು ಹೇಳಿದ್ದರು.
