ಮೈಸೂರು | ನಟನ ರಂಗಶಾಲೆಯಲ್ಲಿ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘

Date:

Advertisements

ಮೈಸೂರಿನ ನಟನ ರಂಗಶಾಲೆಯಲ್ಲಿ ಹಿರಿಯ ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ ಅಭಿನಯದ ‘ ಶರ್ಮಿಷ್ಠೆ ‘ ನಾಟಕವನ್ನು ಮೈಸೂರು ಉಸ್ತುವಾರಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್. ಸಿ. ಮಹದೇವಪ್ಪ ವೀಕ್ಷಿಸಿದರು.

ಬೇಲೂರು ರಘುನಂದನ್‌ ವಿರಚಿತ, ಚಿದಂಬರ ರಾವ್‌ ಜಂಬೆ ನಿರ್ದೇಶಿಸಿರುವ ಹಿರಿಯ ನಟಿ ಉಮಾಶ್ರೀ ಅವರ ಅಭಿನಯದ “ಶರ್ಮಿಷ್ಠೆ” ನಾಟವನ್ನು ವೀಕ್ಷಿಸಿ ಮಾತನಾಡಿದ ಸಚಿವ ಮಹದೇವಪ್ಪ ಬಹುಮುಖ ಪ್ರತಿಭೆ ಉಮಾಶ್ರೀ ಅವರ ಭಾವಪೂರ್ಣವಾದ ಅಭಿನಯ ನಮ್ಮೆನ್ನೆಲ್ಲ ಒಂದು ಗಂಟೆ ಕಾಲ ಭಾವಪರವಶಗೊಳಿಸಿದೆ. ಇಬ್ಬರು ಪರಮಾಪ್ತ ಸ್ನೇಹಿತರ ವಿಭಿನ್ನವಾದ ನಡೆ, ನುಡಿಗಳು ಹಾಗೂ ಸಂಘರ್ಷದ ಸನ್ನಿವೇಶಗಳ ಮನೋಜ್ಞವಾದ ನಟನೆ ನಿಜಕ್ಕೂ ಪ್ರಶಂಸನೀಯ ಎಂದರು.

ಕಷ್ಟದ ದಿನಗಳಿಂದ ಬೆಳೆದು ಬಂದಿರುವ ಉಮಾಶ್ರೀ ಅವರು ಜೀವನದ ಅನೇಕ ಮಜಲುಗಳನ್ನು ಹತ್ತಿರದಿಂದ ಕಂಡಿದ್ದಾರೆ. ನಾಟಕದಲ್ಲೂ ಕೂಡ ಎಲ್ಲಿಯೂ ಏರಿಳಿತಗಳಿಲ್ಲದೆ ಅತ್ಯುತ್ತಮವಾಗಿ ಏಕಪಾತ್ರದಲ್ಲಿ ಅಭಿನಯಿಸಿ ಪಾತ್ರಕ್ಕೆ ಜೀವತುಂಬಿದ್ದಾರೆ. ಅವರ ಅಪ್ರತಿಮಾ ಕಲಾ ಪ್ರತಿಭೆಯನ್ನು ಈ ನಾಟಕದ ಮೂಲಕ ಅಭಿವ್ಯಕ್ತಿಗೊಳಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

Advertisements

ರಾಜಕೀಯದಲ್ಲಿಯೂ ಕೂಡ ಮಹಿಳಾ ಮತ್ತು ಮಕ್ಕಳ ಸಚಿವೆಯಾಗಿ ಮಹಿಳಾ ಪರವಾಗಿ ಉತ್ತಮವಾದ ಕೆಲಸಗಳನ್ನು ಮಾಡಿದ್ದಾರೆ. ಮಕ್ಕಳು ಹಾಗೂ ಬಾಣಂತಿಯರ ಬಗ್ಗೆ ಆಸಕ್ತಿವಹಿಸಿ ಅನೇಕ ಕೊಡುಗೆ ನೀಡಿದ್ದಾರೆ. ವಿಧಾನ ಪರಿಷತ್‌ನಲ್ಲಿ ಕೂಡ ಚಳುವಳಿಯ ಮೂಲಕ ತಮ್ಮ ಜವಬ್ದಾರಿಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಾನಸಿಕ, ದೈಹಿಕ ಸದೃಢತೆ, ಸುಸ್ಥಿತಿ, ಮನೋಲ್ಲಾಸಕ್ಕೆ ಯೋಗ ಸಹಕಾರಿ : ಜಿಲ್ಲಾಧಿಕಾರಿ ಶಿಲ್ಪಾ ನಾಗ್

ರಂಗಕ್ಷೇತ್ರಗಳು ಸಾಮಾಜಿಕ ಜವಾಬ್ದಾರಿ ಮತ್ತು ಸಂದೇಶಗಳನ್ನು ಸಾರುವ ಮೂಲಕ ಮಹತ್ತರವಾದ ಬದಲಾವಣೆಯನ್ನು ಜಾರಿಮಾಡುವಂತಹ ವೇದಿಕೆಗಳಾಗಿವೆ. ಇಂತಹ ಕೆಲಸಗಳಿಗೆ ಪ್ರೇರಕ ಶಕ್ತಿಯಾಗಿ ಉಮಾಶ್ರೀ ಹಾಗೂ ಮಂಡ್ಯ ರಮೇಶ್ ಅವರಂತಹ ಕಲಾವಿದರ ಕೊಡುಗೆ ಶ್ಲಾಘನೀಯ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X