ಬೀದರ್‌ | ಮಾಂಜ್ರಾ ನದಿಯಲ್ಲಿ ಮುಳುಗಿ ರೈತ ಸಾವು : 5 ಲಕ್ಷ ಪರಿಹಾರ ಚೆಕ್‌ ವಿತರಣೆ

Date:

Advertisements

ಭಾಲ್ಕಿ ತಾಲೂಕಿನ ತಳವಾಡ(ಎಂ) ಗ್ರಾಮದಲ್ಲಿ ಈಚೆಗೆ ಮಾಂಜ್ರಾ ನದಿ ನೀರಿನಲ್ಲಿ ಆಕಸ್ಮಿಕವಾಗಿ ಮುಳುಗಿ ಮೃತಪಟ್ಟ ರೈತ ವಿಲಾಸ ಗಣಪತರಾವ ಪಂಚಾಳ (65) ನಿವಾಸಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಭಾನುವಾರ ಭೇಟಿ ನೀಡಿದರು.

ಮೃತ ರೈತನ ಕುಟುಂಬ ಸದಸ್ಯರನ್ನು ಸಾಂತ್ವನ ತಿಳಿಸಿದ ಸಚಿವರು 5 ಲಕ್ಷ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು.

ಬಳಿಕ ಮಾತನಾಡಿದ ಸಚಿವರು, ʼಮಾಂಜ್ರಾ ನದಿ ನೀರಿನಲ್ಲಿ ಇದೇ ಜೂ.೧೮ ರಂದು ರೈತ ವಿಲಾಸ ಅವರು ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿರುವ ವಿಷಯ ತಿಳಿದು ತೀವ್ರ ದುಖ ತರಿಸಿದೆ. ಪರಿವಾರದ ದುಖದಲ್ಲಿ ನಾನು ಭಾಗಿಯಾಗಿದ್ದೇನೆ. ಎಲ್ಲರೂ ಧೈರ್ಯದಿಂದ ಇರಬೇಕು. ಸರಕಾರದ ವತಿಯಿಂದ 5 ಲಕ್ಷ ಪರಿಹಾರ ಧನ ಮಂಜೂರು ಮಾಡಿಸಿ ಚೆಕ್ ನೀಡಿದ್ದೇನೆʼ ಎಂದರು.

Advertisements

ʼಪರಿಹಾರ ಧನವನ್ನು ಮಕ್ಕಳ ಶಿಕ್ಷಣ ಮತ್ತು ಮದುವೆ ಕಾರ್ಯಕ್ಕೆ ಬಳಸಿಕೊಳ್ಳಬೇಕು. ಮುಂದೆಯೂ ಏನೇ ಸಹಾಯ ಸಹಕಾರ ಬೇಕಿದ್ದರೂ ನಿಮ್ಮೊಂದಿಗೆ ಇರುತ್ತೇವೆʼ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ಸತೀಶ ಪಾಟೀಲ್ ಸೇರಿದಂತೆ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

Download Eedina App Android / iOS

X