ರಾಯಚೂರು ತಾಲ್ಲೂಕು ಬಿಚ್ಚಾಲಿ ಗ್ರಾಮದಲ್ಲಿ ಸ್ವಾಮಿ ವಿವೇಕಾನಂದ ಯೂಥ್ ಮೂವ್ ಮೆಂಟ್ ಆರ್ಥಿಕ ನೆರವು ಹಾಗೂ ಪೇಪಾಲ್ ಪೇಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಶ್ರೀ ಬೃಂದಾವನ ಮಹಿಳಾ ಸ್ವಸಹಾಯ ಸಂಘ ಗ್ರಾಮೀಣ ಸಾಮಾಜಿಕ ಉತ್ಪಾದನೆ ಘಟಕಕ್ಕೆ ಸಂಸದ ಜಿ ಕುಮಾರ ನಾಯ್ಕ ಹಾಗೂ ರಾಯಚೂರು ಗ್ರಾಮೀಣ ಶಾಸಕರಾದ ಬಸನಗೌಡ ದದ್ದಲ್ ಅವರು ಉದ್ಘಾಟಿಸಿದರು.
ಈ ವೇಳೆ ಸಂಸದ ಕುಮಾರ ನಾಯ್ಕ ಅವರು ಮಾತನಾಡಿ, ಮಹಿಳೆಯರು ಸ್ವಾವಲಂಬಿಗಳಾಗಬೇಕು ಇಂತಹ ಸಹಕಾರಿ ಸಂಘಗಳ ಮೂಲಕ ಬದುಕನ್ನು ಕಟ್ಟಿಕೊಂಡು ಗ್ರಾಮೀಣ ಮಟ್ಟದಲ್ಲಿ ಉದ್ಯೋಗಗಳನ್ನು ಸೃಷ್ಟಿ ಮಾಡುವಂತಹ ನಿಮ್ಮ ಕಾರ್ಯ ಶ್ಲಾಘನೀಯವಾಗಿದೆ. ಇಂತಹ ಸಹಕಾರ ಸಂಘಗಳಿಗೆ ಸದಾ ನಮ್ಮ ಪ್ರೋತ್ಸಾಹವಿರುತ್ತದೆ ಎಂದು ಹೇಳಿದರು.
ನಂತರ ಮಾತನಾಡಿದ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ರವರು ನನ್ನ ಕ್ಷೇತ್ರದಲ್ಲಿ ಇಂತಹ ಸಹಕಾರಿ ಸಂಘ ಸ್ಥಾಪನೆಯಾಗಿತ್ತು ವೈಯಕ್ತಿಕವಾಗಿ ನನಗೆ ತುಂಬಾ ಸಂತಸವಾಗಿದೆ. ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಈ ಸಂಘಗಳಿಗೆ ಕಲ್ಪಿಸಿ ಮುಂದೆ ಇನ್ನೂ ಇಂತಹ ಅನೇಕ ಸಂಸ್ಥೆಗಳನ್ನು ಹೆಚ್ಚಾಗಿ ಸ್ಥಾಪಿಸಿ ಅದಕ್ಕೆ ಬೇಕಾದ ಎಲ್ಲಾ ಸಹಕಾರವನ್ನು ಸರ್ಕಾರದ ವತಿಯಿಂದ ನಾನು ಸದಾ ಪ್ರಯತ್ನವನ್ನು ಮಾಡುತ್ತೇನೆ ಎಂದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು
ಈ ಸಂದರ್ಭದಲ್ಲಿ ಸಂಘದ ನಿರ್ದೇಶಕರಾದ ಡಾ. ಡೆನ್ನಿಸ್ ಚೌಹಾಣ್, ಶ್ರೀ ವಿನಾಯಕ್ ಸಂಘದ ಅಧ್ಯಕ್ಷರಾದ ಶ್ರೀಮತಿ ಅಶ್ವಿನಿ ಸೇರಿದಂತೆ ಸ್ವ ಸಹಾಯ ಸಂಘದ ಎಲ್ಲಾ ಸದಸ್ಯರು, ಗ್ರಾಮ ಪಂಚಾಯತಿಯ ಸದಸ್ಯರು ಗ್ರಾಮಸ್ಥರು ಹಾಜರಿದ್ದರು.
