ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಇರಾನ್ ‘ಜೂಜುಕೋರ’ ಎಂದು ಕಟುವಾಗಿ ಟೀಕಿಸಿದೆ. “ನೀವು ಆರಂಭಿಸಿರುವ ಯುದ್ಧವನ್ನು ನಾವು ಕೊನೆಗೊಳಿಸುತ್ತೇವೆ” ಎಂದು ಆಕ್ರೋಶ ಹೊರಹಾಕಿದೆ.
ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಮಧ್ಯಪ್ರವೇಶಿಸುವ ಕುರಿತು ಶೀಘ್ರವೇ ನಿರ್ಧರಿಸಲಾಗುವುದು ಎಂದು ಹೇಳುತ್ತಿದ್ದ ಅಮೆರಿಕ, ಶನಿವಾರ ತಡರಾತ್ರಿ ಏಕಾಏಕಿ ಇರಾನ್‌ನ ಮೂರು ಪ್ರಮುಖ ಪರಮಾಣು ಘಟಕಗಳ ಮೇಲೆ ಭಾರಿ ಬಾಂಬ್ ದಾಳಿ ನಡೆಸಿದೆ.
ತನ್ನ ಮೂರು ಪರಮಾಣು ಘಟಕಗಳ ಮೇಲೆ ದಾಳಿ ನಡೆಸಿರುವ ಅಮೆರಿಕ ವಿರುದ್ಧ ಸೇಡು ತೀರಿಸಿಕೊಳ್ಳುವುದಾಗಿ ಇರಾನ್ ಶಪಥ ಮಾಡಿದೆ.