ಕಳೆದ ವರ್ಷಕ್ಕಿಂತ ಈ ವರ್ಷ ರಾಜ್ಯದಲ್ಲಿ ಮುಂಗಾರು ತೀವ್ರವಾಗಿದ್ದು, ಮುಂಗಾರಿಗೂ ಮೊದಲೇ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಜತೆಗೆ ಜೂನ್ 26 ರವರೆಗೆ ರಾಜ್ಯದಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯಾದ್ಯಂತ ಮಳೆ ಮತ್ತು ಬಿರುಗಾಳಿ ಮುಂದುವರಿಯುವ ಮುನ್ಸೂಚನೆಯನ್ನು ಕೂಡ ಐಎಂಡಿ ನೀಡಿದೆ. ಕಳೆದ 15 ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಜಲಾಶಯಗಳು ಬಹುತೇಕ ಭರ್ತಿಯಾಗಿದ್ದು, ಭಾರೀ ಮಳೆಗೆ ಜಲಾಶಯದ ಒಳಹರಿವು ಹೆಚ್ಚಾಗಿದೆ.
ಭಾರೀ ಮಳೆಯಿಂದ ಭದ್ರಾ, ಹಾರಂಗಿ, ಕಬಿನಿ, ಕೆಆರ್‌ಎಸ್, ಹೇಮಾವತಿ, ಲಿಂಗನಮಕ್ಕಿ, ಆಲಮಟ್ಟಿ, ಮಲಪ್ರಭಾ ಅಣೆಕಟ್ಟುಗಳ ನೀರಿನ ಮಟ್ಟ ಹೆಚ್ಚಳವಾಗಿದೆ. ಭದ್ರಾ ಜಲಾಶಯ ಸೇರಿದಂತೆ ಪ್ರಮುಖ ಜಲಾಶಯಗಳ ನೀರಿನ ಪ್ರಮಾಣ, ಜಲಾಶಯಕ್ಕೆ ಒಳಹರಿವು ಹಾಗೂ ಹೊರಹರಿವು ಎಷ್ಟಿದೆ ಎಂಬುದನ್ನು ಗಮನಿಸಬಹುದು.
ಈ ಬಾರಿಯ ಉತ್ತಮ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಕೆಆರ್‌ಎಸ್ ಜಲಾಶಯಕ್ಕೆ ಅಧಿಕ ನೀರು ಹರಿದು ಬರುತ್ತಿದೆ. ಕೆಆರ್‌ಎಸ್ ಜಲಾಶಯ ಈಗಾಗಲೇ ಭರ್ತಿಯ ಅಂಚಿಗೆ ತಲುಪಿದ್ದು, ಈ ವರ್ಷ ಕೆಆರ್‌ಎಸ್ ಜಲಾಶಯ ಜುಲೈ ತಿಂಗಳಿನಲ್ಲೇ ಭರ್ತಿಯಾಗುವ ಸಾಧ್ಯತೆ ಹೆಚ್ಚಾಗಿದೆ.
ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ ಮಟ್ಟ 38.04 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 49.45ರಷ್ಟಿದೆ. ಇಂದಿನ ವರ್ಷ ನೀರಿನ ಮಟ್ಟ 14.56 ಟಿಎಂಸಿಯಷ್ಟಿದ್ದು, ಕಳೆದ ವರ್ಷದ 10.14 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 1413 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 798 ಕ್ಯೂಸೆಕ್ ಹೊರಹರಿವು ಇದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಕೊರತೆಗಳ ಮೆಟ್ಟಿ ನಿಂತ ಸರ್ಕಾರಿ ಶಾಲೆ; ಸತತ 8 ವರ್ಷಗಳಿಂದ ಶೇ.100ರಷ್ಟು ಫಲಿತಾಂಶ
ಆಲಮಟ್ಟಿ ಜಲಾಶಯ ಗರಿಷ್ಟ ನೀರಿನ ಮಟ್ಟ 519.60 ಮೀ.ನಷ್ಟಿದ್ದು, ಒಟ್ಟು ಸಾಮರ್ಥ್ಯ 123.08 ಟಿಎಂಸಿ ಇದೆ. ಇಂದಿನ ನೀರಿನ ಮಟ್ಟ 29.42 ಟಿಎಂಸಿಯಷ್ಟಿದ್ದು, ಕಳೆದ ವರ್ಷ 19.92 ಟಿಎಂಸಿಯಷ್ಟು ನೀರು ಸಂಗ್ರಹವಾಗಿತ್ತು. ಇದೀಗ 3,715 ಕ್ಯೂಸೆಕ್‌ನಷ್ಟು ಒಳಹರಿವು ಇದ್ದು, 430 ಕ್ಯೂಸೆಕ್‌ನಷ್ಟು ಹೊರಹರಿವು ಇದೆ.
ಅಂತೆಯೇ ಉಳಿದ ಜಲಾಶಯಗಳ ನೀರಿನ ಮಟ್ಟ ಎಷ್ಟಿದೆ ಎಂಬುದನ್ನು ಈ ಕೋಷ್ಟಕದಲ್ಲಿ ಕಾಣಬಹುದು.
ಕರ್ನಾಟಕದ ಪ್ರಮುಖ ಜಲಾಶಯಗಳು (Dam) | ಗರಿಷ್ಠ ನೀರಿನ ಮಟ್ಟ (ಮೀ) | ಒಟ್ಟು ಸಾಮರ್ಥ್ಯ (ಟಿಎಂಸಿ) | ಇಂದಿನ ನೀರಿನ ಮಟ್ಟ (ಟಿಎಂಸಿ) | ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) | ಒಳಹರಿವು (ಕ್ಯೂಸೆಕ್ಸ್) | ಹೊರಹರಿವು (ಕ್ಯೂಸೆಕ್ಸ್) |
ಆಲಮಟ್ಟಿ ಜಲಾಶಯ (Almatti Dam) | 519.60 | 123.08 | 29.42 | 19.92 | 3715 | 430 |
ತುಂಗಭದ್ರಾ ಜಲಾಶಯ (Tungabhadra Dam) | 497.71 | 105.79 | 5.57 | 4.21 | 638 | 2026 |
ಮಲಪ್ರಭಾ ಜಲಾಶಯ (Malaprabha Dam) | 633.80 | 37.73 | 6.43 | 7.16 | 0 | 194 |
ಕೆ.ಆರ್.ಎಸ್ (KRS Dam) | 38.04 | 49.45 | 14.56 | 10.14 | 1413 | 798 |
ಲಿಂಗನಮಕ್ಕಿ ಜಲಾಶಯ (Linganamakki Dam) | 554.44 | 151.75 | 13.97 | 11.30 | 2497 | 1686 |
ಕಬಿನಿ ಜಲಾಶಯ (Kabini Dam) | 696.13 | 19.52 | 9.01 | 4.30 | 910 | 408 |
ಭದ್ರಾ ಜಲಾಶಯ (Bhadra Dam) | 657.73 | 71.54 | 15.22 | 24.97 | 875 | 343 |
ಘಟಪ್ರಭಾ ಜಲಾಶಯ (Ghataprabha Dam) | 662.91 | 51.00 | 7.95 | 4.12 | 545 | 119 |
ಹೇಮಾವತಿ ಜಲಾಶಯ (Hemavathi Dam) | 890.58 | 37.10 | 10.82 | 14.61 | 1376 | 250 |
ವರಾಹಿ ಜಲಾಶಯ (Varahi Dam) | 594.36 | 31.10 | 3.06 | 2.33 | 457 | 0 |
ಹಾರಂಗಿ ಜಲಾಶಯ (Harangi Dam) | 871.38 | 8.50 | 3.28 | 2.59 | 289 | 200 |
ಸೂಫಾ (Supa Dam) | 564.00 | 145.33 | 30.42 | 32.64 | 4171 | 2054 |
ನಾರಾಯಣಪುರ ಜಲಾಶಯ (Narayanpura Dam) | 492.25 | 15.87 | 21.16 | 14.78 | 235 | 235 |
ವಾಣಿವಿಲಾಸ ಸಾಗರ (VaniVilas Sagar Dam) | 652.24 | 30.42 | 18.23 | 25.06 | 0 | 147 |
ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಲುನಲ್ಲಿ ಕಳೆದ 24 ಗಂಟೆಗಳಲ್ಲಿ ಅತ್ಯಧಿಕ 95 ಮಿಮೀ ಮಳೆಯಾಗಿದೆ. ಜೂನ್ 22ರಿಂದ ಜೂನ್ 30ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಚದುರಿದ ಮಳೆಯಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಹಿಂದೆ ಕೆಆರ್‌ಎಸ್ ಜಲಾಶದ ಬಳಿ ‘ಟ್ರಯಲ್ ಬ್ಲಾಸ್ಟ್’ ನಡೆಸಲು ಮುಂದಾಗಿದ್ದನ್ನು ರೈತರು ಹೋರಾಟದ ಮೂಲಕ ತಡೆದಿದ್ದರು. ಈಗ ಅಮ್ಯೂಸ್‌ಮೆಂಟ್ ಪಾರ್ಕ್‌ಗಾಗಿ ಆಳವಾದ ದೊಡ್ಡ ಗುಂಡಿಗಳನ್ನು ತೋಡಲು ಮುಂದಾಗಿದ್ದಾರೆ. ಅಲ್ಲದೆ ಈಗಾಗಲೇ ಕೆಆರ್‌ಎಸ್ ಜಲಾಶಯ ಅವಧಿಗು ಮುನ್ನವೇ ಭರ್ತಿಯಾಗಿದೆ. ಇದೀಗ ಅಣೆಕಟ್ಟು ಪ್ರದೇಶದಲ್ಲಿ ಕಾಮಗಾರಿಗಳು ನಡೆದು ಶಿಲಾ ಪದರದ ಮೇಲೆ ನಿಂತಿರುವ ಕೆಆರ್‌ಎಸ್ ಅಣೆಕಟ್ಟೆ ಕಂಪಿಸಿದರೆ ಅನಾಹುತಕ್ಕೆ ಕಾರಣವಾಗಬಹುದು ಎಂಬುದು ಸ್ಥಳೀಯ ರೈತರ ಆತಂಕಕ್ಕೂ ಕಾರಣವಾಗಿದೆ.
ಇನ್ನು ಎಲ್ಲಿದ್ದೀರಾ ನೀವು krs ಅಲ್ರೇಡಿ 43 ಟಿಎಂಸಿ ನೀರು ತುಂಬಿದೆ