ಬ್ರ್ಯಾಂಡ್ ಬೆಂಗಳೂರು: ಡಿಸಿಎಂ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ

Date:

Advertisements

ಬ್ರ್ಯಾಂಡ್ ಬೆಂಗಳೂರು ಅಭಿವೃದ್ಧಿ ಸಂಬಂಧ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮತ್ತು ಕೆನಡಾ ಮೂಲದ ವರ್ಡ್ ಡಿಸೈನ್ ಸಂಸ್ಥೆಯ (WDO) ಅಧ್ಯಕ್ಷರು ಡೇವಿಡ್ ಕುಸುಮ ಅವರು ಉಪಮುಖ್ಯಮಂತ್ರಿ
ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ವಿಧಾನಸೌಧದಲ್ಲಿ ಒಪ್ಪಂದಕ್ಕೆ ಸೋಮವಾರ ಸಹಿ ಹಾಕಿದರು.

ಒಡಂಬಡಿಕೆಯ ಸಹಿ ಪ್ರಕ್ರಿಯೆ ಬಳಿಕ ಮಾಧ್ಯಮದವರಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು
ಬೆಂಗಳೂರಿಗೆ ಹೊಸ ರೂಪ ನೀಡಿ ಈ ನಗರವನ್ನು ಜಾಗತಿಕ ನಗರವಾಗಿ ರೂಪಿಸುವ ಉದ್ದೇಶದಿಂದ ಇಂದು ರಾಜ್ಯ ಸರ್ಕಾರ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ವರ್ಲ್ಡ್ ಡಿಸೈನ್ ಆರ್ಗನೈಸೇಷನ್ ಜತೆ ಒಪ್ಪಂದ ಮಾಡಿಕೊಂಡಿದೆ.

ಬ್ರ್ಯಾಂಡ್ ಬೆಂಗಳೂರು ಹಾಗೂ ಕರ್ನಾಟಕದ ಪಾಲಿಗೆ ಇಂದು ಹೊಸ ಅಧ್ಯಾಯ ಆರಂಭವಾಗುತ್ತಿದೆ. ಕರ್ನಾಟಕದ ಭವಿಷ್ಯದ ಅಭಿವೃದ್ಧಿಗೆ ಇದು ಹೆಜ್ಜೆ ಗುರುತಾಗಲಿದೆ.

Advertisements

ಕೆಲ ವರ್ಷಗಳ ಹಿಂದೆ ವಿಶ್ವ ವಿನ್ಯಾಸ ರಾಜಧಾನಿ ಯಾವುದು ಎಂಬ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಇದರಲ್ಲಿ ಬೆಂಗಳೂರು ಯಶ ಕಾಣಲಿಲ್ಲ. ಬೆಂಗಳೂರು ವಾಸಯೋಗ್ಯ ನಗರವಾಗಿ ನಿರ್ಮಾಣ ಮಾಡಬೇಕಿದೆ. ಇದಕ್ಕಾಗಿ ಈ ಸಂಸ್ಥೆ ಜತೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಯಿಸ್ಟ್ ಬೊಮ್ಮಾಯಿ, ಬೊಂಬೆ ಬೊಮ್ಮಾಯಿ ಮತ್ತು ಬಿಜೆಪಿ

ಬೆಂಗಳೂರು ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಈ ನಗರವನ್ನು ಬೆಂಗಳೂರನ್ನು ಜಾಗತಿಕ ನಗರವಾಗಿ ಮಾಡಲು ಸರ್ಕಾರ ಬದ್ಧವಾಗಿದೆ. ಯಾವುದೇ ಯೋಜನೆಯಾದರೂ ಅದರ ವಿನ್ಯಾಸ ಬಹಳ ಮುಖ್ಯ ಪಾತ್ರ ವಹಿಸುತ್ತದೆ. ಹೀಗಾಗಿ ನಾವು ಇಂದು ಈ ಸಂಸ್ಥೆ ಜೊತೆ ಕೈಜೋಡಿಸುತ್ತಿದ್ದೇವೆ. ಈ ಸಂಸ್ಥೆ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳ ವಿಚಾರದಲ್ಲಿ ಸಲಹೆ, ಮಾರ್ಗದರ್ಶನ ನೀಡಲಿದೆ.

ಆರಂಭದಲ್ಲಿ ಈ ಒಪ್ಪಂದ ಕೇವಲ ಬೆಂಗಳೂರು ನಗರಕ್ಕೆ ಮಾತ್ರ ಸೀಮಿತವಾಗಿತ್ತು. ಆದರೆ ಈಗ ಇದನ್ನು ಬಿಎಂಆರ್‌ಡಿಎ ವ್ಯಾಪ್ತಿಯ ಪ್ರದೇಶಗಳನ್ನು ಒಳಗೊಳ್ಳಲಾಗಿದೆ. ಬೆಂಗಳೂರಿಗೆ ತನ್ನದೇ ಆದ ಇತಿಹಾಸ, ಪರಂಪರೆ, ಸಂಸ್ಕೃತಿ ಹೊಂದಿದೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಇಂದು ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದದಿಂದ ನಮಗೆ ಶಕ್ತಿ ಹೆಚ್ಚಲಿದೆ. ಸರ್ಕಾರ ಹಾಗೂ ಬಿಬಿಎಂಪಿ ಪರವಾಗಿ ಆಯುಕ್ತರು ಈ ಒಪ್ಪಂದಕ್ಕೆ ಸಹಿ ಹಾಕುತ್ತಿದ್ದಾರೆ.

ನಮ್ಮ ಹಿರಿಯರು ತಮ್ಮದೇ ಆದ ರೀತಿಯಲ್ಲಿ ಬೆಂಗಳೂರನ್ನು ಕಟ್ಟಿದ್ದಾರೆ. ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ಯಲು ನಾವು ಅದಕ್ಕೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇವೆ. ಈಗಿರುವ ಬೆಂಗಳೂರಿನಲ್ಲಿ ಯಾವ ರೀತಿಯ ಬದಲಾವಣೆ ಮಾಡಬಹುದು, ಮುಂದೆ ಬೆಳೆಯಲಿರುವ ಬೆಂಗಳೂರನ್ನು ಹೇಗೆ ರೂಪಿಸಬೇಕು, ಹೊಸ ಉಪನಗರ ಹೇಗೆ ರೂಪಿಸಬೇಕು ಎಂಬುದರ ಬಗ್ಗೆ ಸಲಹೆ ನೀಡಲು ಈ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ.

ಈ ಸಂಸ್ಥೆ ಕೇಂದ್ರ ಕಚೇರಿ ಕೆನಡಾದಲ್ಲಿದ್ದು, ವಿಶ್ವದ ಅತ್ಯುತ್ತಮ ಆರ್ಕಿಟೆಕ್ಚರ್‌ಗಳನ್ನು ಹೊಂದಿದೆ. ಈ ಸಂಸ್ಥೆ ಅನೇಕ ದೇಶಗಳ ಜತೆ ಕೆಲಸ ಮಾಡಿದೆ. ಮುಂದಿನ ದಿನಗಳಲ್ಲಿ ಸುಮಾರು 200-300 ಇಂಜಿನಿಯರ್ ಗಳು ಕೆಲಸ ಮಾಡಲಿದ್ದಾರೆ. ಇಲ್ಲಿ ಅವರು ಯಾವುದೇ ಕಟ್ಟಣ ನಿರ್ಮಾಣ ಮಾಡುವುದಿಲ್ಲ. ಇವರು ಬೆಂಗಳೂರಿಗೆ ಹೊಸ ರೂಪ ನೀಡಲು ಸಲಹೆ ನೀಡುತ್ತಾರೆ. ಇವರು ಈಗ ಯಾವ ರೀತಿ ಸಲಹೆ ನೀಡುತ್ತಾರೆ ಎಂಬುದನ್ನು ನೋಡಿಕೊಂಡು ನಂತರದ ದಿನಗಳಲ್ಲಿ ಜಿಲ್ಲಾ ಕೇಂದ್ರಗಳು ಹಾಗೂ ತಾಲೂಕು ಕೇಂದ್ರಗಳಿಗೆ ರೂಪ ನೀಡುವ ಬಗ್ಗೆ ಆಲೋಚಿಸುತ್ತೇವೆ. ಬೆಂಗಳೂರಿಗೆ ಹೊಸ ರೂಪ ನೀಡಲು ನಾವು ಪ್ರಯತ್ನ ಮಾಡುತ್ತಿದ್ದು, ನಿಮ್ಮೆಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಕೇಶ್ ಸಿಂಗ್ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಬಂಧಿಸಿದ ಇಡಿ: ನಗದು ಸಹಿತ ಚಿನ್ನಾಭರಣ ವಶಕ್ಕೆ

ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಮನೆ, ಕಚೇರಿ ಸೇರಿದಂತೆ 31...

ಧರ್ಮಸ್ಥಳ ಪ್ರಕರಣ | ನಾವು ಯಾರ ಪರವೂ ಇಲ್ಲ; ನ್ಯಾಯದ ಪರ: ಡಿಸಿಎಂ ಡಿ.ಕೆ.ಶಿವಕುಮಾರ್

"ನಾವು ಧರ್ಮಸ್ಥಳದವರ ಪರವೂ ಇಲ್ಲ, ಇವರ ಪರವೂ ಇಲ್ಲ. ನಾವು ನ್ಯಾಯದ...

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ ಬಗ್ಗೆ ಕಳವಳ ವ್ಯಕ್ತಪಡಿಸಿದ ನೊಬೆಲ್ ಪ್ರಶಸ್ತಿ ವಿಜೇತ ಅಮರ್ತ್ಯ ಸೇನ್

ಬಿಹಾರದಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ(SIR) ಬಗ್ಗೆ ನೊಬೆಲ್ ಪ್ರಶಸ್ತಿ ವಿಜೇತ...

ಕರಾವಳಿಯಲ್ಲಿ ಉದ್ಯೋಗ ಸೃಷ್ಟಿ, ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ: ಡಿಸಿಎಂ ಡಿ ಕೆ ಶಿವಕುಮಾರ್

"ಕರಾವಳಿ ಭಾಗದಲ್ಲಿ ಉದ್ಯೋಗ ಸೃಷ್ಟಿಗೆ ಹಾಗೂ ಪ್ರವಾಸೋದ್ಯಮ ಬೆಳವಣಿಗೆಗೆ ಪ್ರತ್ಯೇಕ ನೀತಿ...

Download Eedina App Android / iOS

X