ಉಡುಪಿ | ಮಣಿಪುರ ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ: ಪ್ರೊ. ಫಣಿರಾಜ್

Date:

Advertisements

ಮಣಿಪುರದಲ್ಲಿ ಎರಡು ಸಮುದಾಯಗಳ ನಡುವೆ ನಡೆಯುತ್ತಿರುವ ಹಿಂಸಾಚಾರಕ್ಕೆ ರಾಜಕೀಯ ಮತ್ತು ಜನಾಂಗೀಯ ದ್ವೇಷವೇ ಕಾರಣ. ಹಿಂಸಾಚಾರದ ಹಿಂದೆ ವಿಭಜನಕಾರಿ ಶಕ್ತಿಗಳಿವೆ ಎಂದು ಪ್ರೊ. ಫಣಿರಾಜ್ ಹೇಳಿದ್ದಾರೆ.

ಮಣಿಪುರದಲ್ಲಿ ನಡೆದ ಇಬ್ಬರು ಮಹಿಳೆಯ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರವನ್ನು ಖಂಡಿಸಿ, ಸಂತ್ರಸ್ತೆಯರಿಗೆ ನ್ಯಾಯಕ್ಕಾಗಿ ಆಗ್ರಹಿಸಿ ಉಡುಪಿಯಲ್ಲಿ ಹಲವು ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

“ಮಣಿಪುರದಲ್ಲಿ ನಡೆಯುತ್ತಿರುವ ಹಿಂಸಾಚಾರ ನಾವು ಯೋಚಿಸಿದಷ್ಟು ಸರಳೀಕೃತವಾಗಿಲ್ಲ. ಇದರ ಹಿಂದೆ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಹಿಂದುತ್ವದ ವಿಭಜನಕಾರಿ ನೀತಿ ಅಡಗಿದೆ. ಈ ನೀತಿ ಇಡೀ ಭಾರತದಾದ್ಯಂತ ಹಬ್ಬುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಇದೀಗ ಈಶಾನ್ಯ ಭಾರತದಲ್ಲಿ ಅದೇ ನೀತಿ ಅನುಸರಿಸಿ, ಬುಡಕಟ್ಟು ಜನರನ್ನು ವಿಭಜಿಸಿ ಆಳಲು ಪ್ರಯತ್ನಿಸುತ್ತಿದೆ. ಹಿಂಸಾಚಾರದ ವಿರುದ್ಧ ತುಟಿ ಬಿಚ್ಚದ ಪ್ರಧಾನಿ ವಿಭಜನಕಾರಿ ನೀತಿಗೆ ಅನುಮೋದನೆ ನೀಡುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಮಣಿಪುರದ ಹಿಂಸಾಚಾರದಲ್ಲಿ ವಿಭಜನಕಾರಿ ನೀತಿಯೊಂದಿಗೆ ಬಂಡವಾಳಶಾಹಿಗಳ ಷಡ್ಯಂತ್ರವೂ ಇದೆ. ಕುಕಿ ಸಮುದಾಯ ವಾಸವಿರುವ ಗುಡ್ಡಗಾಡು ಪ್ರದೇಶಗಳನ್ನು ಅಕ್ರಮಿಸಿಕೊಳ್ಳುವ ಯತ್ನ ನಡೆಯುತ್ತಿದೆ. ಆ ಪ್ರದೇಶದಲ್ಲಿ ಕೇಂದ್ರ ಸರ್ಕಾರ ಜಾರಿಗೆ ತರಲು ಹೊರಟಿರುವ ಎಣ್ಣೆ ಬೀಜ ಬೆಳೆಸುವ ಹುನ್ನಾರ ಕೂಡ ನಡೆಯುತ್ತಿದೆ. ಆ ಪ್ರದೇಶವನ್ನು ಅದಾನಿಗೆ ಮಾರಲು ಕೇಂದ್ರ ಸರ್ಕಾರ ಯತ್ನಿಸುತ್ತಿದೆ. ಈ ಎಲ್ಲ ಕಾರಣಗಳಿಂದ ಎರಡು ಸಮುದಾಯದ ನಡುವೆ ಹಿಂಸಾಚಾರ ಸೃಷ್ಟಿಸಲಾಗಿದೆ” ಎಂದರು.

ಪ್ರತಿಭಟನೆಯಲ್ಲಿ ಮಾತನಾಡಿದ ಫಾ.ವಿಲಿಯಂ ಮಾರ್ಟಿಸ್, “ಮಣಿಪುರದಲ್ಲಿ ಅಲ್ಪಸಂಖ್ಯಾತ ಕುಕಿ ಸಮುದಾಯ ದೌರ್ಜನ್ಯಕ್ಕೊಳಕ್ಕಾಗುತ್ತಿದೆ. ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ನಡೆಸಲಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕಾದ ಸರ್ಕಾರ ಮೌನ ವಹಿಸಿದೆ. ಇಂತಹ ಸಮಯದಲ್ಲಿ ಸಂತ್ರಸ್ತರ ಪರವಾಗಿ ನಾವು ದನಿಯೆತ್ತರಿಸಬೇಕು” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?: ದ.ಕ | ಭಾರೀ ಮಳೆ : ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಸನೆಟ್ ಬೋರ್ಬೊಝಾ ಮಾತನಾಡಿ, “ಭಾರತ ಸರ್ವ ಜನಾಂಗದ ಶಾಂತಿಯ ತೋಟ. ಮಣಿಪುರದಲ್ಲಿ ಯುವತಿಯರ ಮೇಲೆ ನಡೆದ ಕೃತ್ಯ ಅಮಾನವೀಯವಾದದ್ದು ಇಂತಹ ಘಟನೆಯನ್ನು ಖಂಡಿಸದಿದ್ದರೆ ನಾವು ಮನುಷ್ಯರಾಗಲು ಸಾಧ್ಯವಾಗುದಿಲ್ಲ. ಮಹಿಳೆಯರ ಘನತೆಯ ರಕ್ಷಣೆ ಕೇವಲ ಘೋಷಣೆ ಮಾಡಲಾಗುತ್ತದೆ. ಆದರೆ ವಾಸ್ತವಿಕತೆ ಬೇರೆ ಇದೆ. ಮಹಿಳೆಯರ ಘನತೆಯನ್ನು ಗೌರವಿಸುವ ಸಮಾಜ ಹುಟ್ಟು ಹಾಕಬೇಕು” ಎಂದು ಕರೆ ನೀಡಿದರು.

ಪ್ರತಿಭಟನೆಯಲ್ಲಿ ಸಾಲಿಡಾರಿಟಿ ಯೂತ್ ಮೂವ್ಮೆಂಟ್ ಜಿಲ್ಲಾಧ್ಯಕ್ಷ ನಬೀಲ್ ಗುಜ್ಜರ್ ಬೆಟ್ಟು, ಎಸ್‌ಐಓ ರಾಜ್ಯ ಕಾರ್ಯದರ್ಶಿ ಅಫ್ವಾನ್ ಹೂಡೆ, ಸಾಲಿಡಾರಿಟಿ ಹೂಡೆ ಘಟಕಾಧ್ಯಕ್ಷ ಜಾಬೀರ್ ಖತೀಬ್, ಸಾಲಿಡಾರಿಟಿ ಮಲ್ಪೆ ಕಾರ್ಯದರ್ಶಿ ಶುಐಬ್ ಮಲ್ಪೆ, ಉಡುಪಿಯ ಕಾರ್ಯದರ್ಶಿ ಫೈಸಲ್ ಉಡುಪಿ, ಜಮಾಅತೆ ಇಸ್ಲಾಮಿ ಹಿಂದ್ ಮಹಿಳಾ ವಿಭಾಗದ ಸಂಚಾಲಕಿ ಕುಲ್ಸುಮ್ ಅಬುಬಕ್ಕರ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈದಿನ ಗ್ರೌಂಡ್‌ ರಿಪೋರ್ಟ್‌ | ಪ್ರವಾಹ ಇಳಿದುಹೋದ ಮೇಲೆ… ಬದುಕೆಲ್ಲ ಬರಿದಾಗಿದೆ!

ಕಲಬುರಗಿ ಜಿಲ್ಲೆಯಲ್ಲಿ ಭೀಮಾ ನದಿಯ ಪ್ರವಾಹ ತಗ್ಗಿದೆ. ಇಷ್ಟು ದಿನ ಆರ್ಭಟಿಸಿದ...

ಕಲಬುರಗಿ | ಕಲ್ಯಾಣ ಕರ್ನಾಟಕ ಹೋರಾಟ ಸಮಿತಿಯಿಂದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ

ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ನೇತೃತ್ವದಲ್ಲಿ ರೈತ, ದಲಿತ, ಕನ್ನಡ, ವಿದ್ಯಾರ್ಥಿ,...

ಕಲಬುರಗಿ | ಅಶೋಕ ವಿಜಯದಶಮಿ ಅಂಗವಾಗಿ ಪಂಚಶೀಲ ಧ್ವಜಾರೋಹಣ

ನಗರದ ಶಕ್ತಿನಗರ ಬಡಾವಣೆಯಲ್ಲಿ ಜೈಭೀಮ್ ತರುಣ್ ಸಂಘ (ರಿ) ವತಿಯಿಂದ ಗುರುವಾರ...

ರಾಯಚೂರು | ಅಪ್ರಾಪ್ತೆಯರ ಅಪಹರಣಕ್ಕೆ ಯತ್ನ ಆರೋಪ – ಸಾರ್ವಜನಿಕರಿಂದ ವ್ಯಕ್ತಿಗೆ ಥಳಿತ

ಅಪ್ರಾಪ್ತೆ ಹೆಣ್ಣುಮಕ್ಕಳನ್ನು ಅಪಹರಿಸಲು ಯತ್ನಿಸಿದ ವ್ಯಕ್ತಿಯೊಬ್ಬನನ್ನು ಗ್ರಾಮಸ್ಥರೇ ಹಿಡಿದು ಥಳಿಸಿ ಬಳಿಕ...

Download Eedina App Android / iOS

X