ವೈದ್ಯಕೀಯ, ಎಂಜಿನಿಯರಿಂಗ್ ಸೇರಿ ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು‌ ಹಂಚಿಕೆ: ಕೆಇಎ

Date:

Advertisements

ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ನಡೆಯುತ್ತಿದ್ದ ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಕೈಬಿಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಿರ್ಧರಿಸಿದೆ. ಅದರಂತೆ, ಎಲ್ಲ ಕೋರ್ಸ್‌ಗಳಿಗೂ ಒಮ್ಮೆಗೇ ಸೀಟು ಹಂಚಿಕೆ ಮಾಡುವುದಾಗಿ ತಿಳಿಸಿದೆ.

ಸೀಟು ಹಂಚಿಕೆ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್‌ ರಮ್ಯಾ, “ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಮತ್ತು ಅನಗತ್ಯ ವಿಳಂಬವನ್ನು ತಪ್ಪಿಸುವ ಉದ್ದೇಶದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ” ಎಂದು ತಿಳಿಸಿದ್ದಾರೆ.

“ವೈದ್ಯಕೀಯ, ದಂತ ವೈದ್ಯಕೀಯ, ಎಂಜಿನಿಯರಿಂಗ್, ಪಶುವೈದ್ಯ, ಕೃಷಿ, ನರ್ಸಿಂಗ್, ಅರ್ಕಿಟೆಕ್ಟ್ ಹಾಗೂ ಫಾರ್ಮಸಿ ಕೋರ್ಸ್‌ಗಳ ಪ್ರವೇಶಕ್ಕೆ ಸಂಯೋಜಿತ ಸೀಟು ಹಂಚಿಕೆ (Combined Seat Allotment) ಪ್ರಕ್ರಿಯೆಯನ್ನು ನಡೆಸಲಾಗುತ್ತದೆ. ಹೀಗೆ ಮಾಡುತ್ತಿರುವುದು ಇದೇ ಮೊದಲು” ಎಂದು ಅವರು ವಿವರಿಸಿದ್ದಾರೆ.

Advertisements

“ಪ್ರತ್ಯೇಕ ಸೀಟು ಹಂಚಿಕೆ ಪ್ರಕ್ರಿಯೆಯಿಂದಾಗಿ ಸಾಕಷ್ಟು ಅನಾನುಕೂಲಗಳು ಇದ್ದವು. ಒಬ್ಬ ಅಭ್ಯರ್ಥಿ ಒಮ್ಮೆಗೇ ಒಂದಕ್ಕಿಂತ ಹೆಚ್ಚು ಕೋರ್ಸ್‌ಗಳಲ್ಲಿ ಸೀಟು ಪಡೆದು, ನಂತರ ಆತ ಯಾವುದಾದರು ಒಂದಕ್ಕೆ ಪ್ರವೇಶ ಪಡೆಯುವವರೆಗೂ ಉಳಿದ ಕೋರ್ಸ್‌ಗಳಲ್ಲಿನ ಸೀಟು ಬೇರೆಯ ಅಭ್ಯರ್ಥಿಗಳಿಗೆ ಲಭ್ಯವಾಗುತ್ತಿರಲಿಲ್ಲ. ಇದರಿಂದ ಪ್ರತಿಭಾವಂತರಿಗೆ ಆಯ್ಕೆ ಸುತ್ತಿನಲ್ಲಿ ಸೀಟು ಕೈತಪ್ಪುತ್ತಿತ್ತು” ಎಂದು ಅವರು ಹೇಳಿದ್ದಾರೆ.

ಅಭ್ಯರ್ಥಿಗಳು ಯಾವುದೇ ಕೋರ್ಸ್‌ಗಳಿಗೆ ಪ್ರವೇಶ ಬಯಸಿದ್ದಲ್ಲಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಶುಲ್ಕ ಮತ್ತು ಲಭ್ಯವಿರುವ ಸೀಟುಗಳನ್ನು ಪರಿಶೀಲಿಸಿ, ನಂತರ ತಮ್ಮ ಆದ್ಯತೆಯನುಸಾರ ಸೀಟುಗಳ ಆಪ್ಷನ್ ಎಂಟ್ರಿ ಮಾಡಬೇಕು” ಎಂದು ಅವರು ಸಲಹೆ ನೀಡಿದ್ದಾರೆ.

ಹೊಸ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತೆ?

“ಅಭ್ಯರ್ಥಿಯು ಆಪ್ಷನ್ ಎಂಟ್ರಿ ಮಾಡುವಾಗ ತನ್ನ ಮೊದಲ ಆದ್ಯತೆಯ ಕೋರ್ಸ್‌ಗಳನ್ನು ಮೊದಲು ದಾಖಲಿಸಬೇಕು. ಒಂದು ವೇಳೆ ಮೊದಲ ಆದ್ಯತೆಯ ಕೋರ್ಸ್ ಸಿಗದಿದ್ದರೆ ಅದರ ನಂತರದ ಆಯ್ಕೆಯ ಕೋರ್ಸ್ ಯಾವುದು ಎನ್ನುವುದನ್ನು ಎರಡನೇ ಆದ್ಯತೆಯಾಗಿ ದಾಖಲಿಸಬೇಕು. ಇದೇ ರೀತಿ ಸೀಟ್ ಮ್ಯಾಟ್ರಿಕ್ಸ್ ಪ್ರಕಾರ ಎಷ್ಟು ಕೋರ್ಸ್‌ಗಳು ಇವೆಯೊ ಅಷ್ಟೂ ಕೋರ್ಸ್‌ಗಳಿಗೆ ಆದ್ಯತೆಯನುಸಾರ ಆಪ್ಷನ್ ಎಂಟ್ರಿ ಮಾಡುವುದರ ಮೂಲಕ ಸೀಟು ಪಡೆಯಬಹುದು” ಎಂದು ರಮ್ಯಾ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಈದಿನ ವಿಶೇಷ | ಕೃಷಿ ವಿವಿಗಳಲ್ಲಿ ಡಿಪ್ಲೊಮಾ ಕೋರ್ಸ್‌ ಸ್ಥಗಿತ, ಕೃಷಿಕರ ಮಕ್ಕಳ ಭವಿಷ್ಯಕ್ಕೆ ಬರೆ ಎಳೆದ ಸರ್ಕಾರ!

“ಅಭ್ಯರ್ಥಿಯ ಮೆರಿಟ್, ಮೀಸಲಾತಿ ಹಾಗೂ ಆಪ್ಷನ್ ಎಂಟ್ರಿ ಆಧಾರದ ಮೇಲೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯುತ್ತದೆ. ಕೆಲ ಅಭ್ಯರ್ಥಿಗಳಿಗೆ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಎರಡೂ ಕೋರ್ಸ್‌ಗಳಲ್ಲಿ ಸೀಟು ದೊರೆಯುವ ಸಾಧ್ಯತೆ ಇರುತ್ತದೆ. ಅಂತಹವರು ಚಾಯ್ಸ್ ಎಂಟ್ರಿ ಸ್ಕ್ರೀನ್‌ನಲ್ಲಿ ಇವೆರಡರಲ್ಲಿ (ವೈದ್ಯಕೀಯ ಅಥವಾ ಎಂಜಿನಿಯರಿಂಗ್) ಒಂದನ್ನು ಆಯ್ಕೆ ಮಾಡಿಕೊಳ್ಳಬೇಕಾಗುತ್ತದೆ. ಆಗ ಉಳಿದ ಮತ್ತೊಂದು ಸೀಟು ಖಾಲಿ ಇದೆ ಎಂದು ಭಾವಿಸಿ, ಅದನ್ನು ಮುಂದಿನ ಸುತ್ತಿನ ಹಂಚಿಕೆಗೂ ಬಳಸಿಕೊಳ್ಳಲಾಗುತ್ತದೆ.” ಎಂದು ಅವರು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X