ಮಣಿಪುರದಲ್ಲಿ ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಮಣಿಪುರ ಸರ್ಕಾರವನ್ನು ವಿಜಾಗೊಳಿಸಿ ರಾಷ್ಟ್ರಪತಿ ಆಡಳಿತವನ್ನು ಜಾರಿಗೊಳಿಸಬೇಕು ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ಆಗ್ರಹಿಸಿದೆ.
ಉಡುಪಿ ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ ವೆಲ್ಫೇರ್ ಪಾರ್ಟಿಯ ಮುಖಂಡರು, “ಮಣಿಪುರದಲ್ಲಿ ಕಳೆದ ಎರಡೂವರೆ ತಿಂಗಳಿಂದ ಹಿಂಸಾಚಾರ ನಡೆಯುತ್ತಲೇ ಇದೆ. ಹಿಂಸಾಚಾರದಲ್ಲಿ 200ಕ್ಕೂ ಹೆಚ್ಚು ನಾಗರಿಕರು ಪ್ರಾಣ ಕಳೆದುಕೊಂಡಿದ್ದಾರೆ. ಸುಮಾರು 6000ಕ್ಕೂ ಹೆಚ್ಚು ಮಂದಿ ಜೀವ ಭಯದಿಂದ ವಲಸೆ ಹೋಗಿದ್ದಾರೆ. ಹಿಂಸಾಚಾರವನ್ನು ತಡೆಯುವಲ್ಲಿ ಅಲ್ಲಿನ ರಾಜ್ಯ ಸರ್ಕಾರ ವಿಫಲವಾಗಿದೆ” ಎಂದು ಕಿಡಿಕಾರಿದ್ದಾರೆ.
“ಅಲ್ಲಿ ಮಹಿಳೆಯರ ಮೇಲೆ ದೌರ್ಜನ್ಯಗಳು ದಿನೇ ದಿನೇ ಹೆಚ್ಚುತ್ತಲೇ ಇವೆ. ಮಹಿಳೆಯೊಬ್ಬರನ್ನು ಮುಖದ ಮೇಲೆ ಗುಂಡಿಟ್ಟು ಕೊಲ್ಲಲಾಗಿದೆ. ಇನ್ನೊಂದೆಡೆ, ದೇಶವೇ ತಲೆತಗಿಸುವ ಘಟನೆಯಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆ ಮೆರವಣಿಗೆ ಮಾಡಿ, ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಮಣಿಪುರದಲ್ಲಿ ಕಾನೂನು ಸುವ್ಯವಸ್ತೆ ಸಂಪೂರ್ಣ ಹದಗೆಟ್ಟಿದೆ, ರಾಜ್ಯ ಸರ್ಕಾರ ಜನರ ಜೀವ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಪರೋಕ್ಷವಾಗಿ ಅತ್ಯಾಚಾರಿಗಳಿಗೆ, ಕೊಲೆಗಡುಕರಿಗೆ ಮತ್ತು ದರೋಡೆಕೋರರಿಗೆ ಬೆಂಬಲಿಸುತ್ತಿದೆಯಾ ಎಂಬ ಅನುಮಾನ ಮೂಡುತ್ತಿದೆ” ಎಂದು ಹೇಳಿದ್ದಾರೆ.
ಮಣಿಪುರ ಹಿಂಸಾಚಾರ ತಡೆಯಲು ರಾಷ್ಟ್ರಪತಿಗಳುಮಧ್ಯ ಪ್ರವೇಶಿಸಬೇಕು. ಆ ರಾಜ್ಯದಲ್ಲಿ ಶಾಂತಿ ಮತ್ತು ನೆಮ್ಮದಿಯ ಬದುಕಿಗಾಗಿ ಅಲ್ಲಿನ ಸರ್ಕಾರವನ್ನು ವಜಾಗೊಳಿಸಿ, ರಾಷ್ಟ್ರಪತಿ ಆಡಳಿತ ಹೇರಬೇಕು” ಎಂದು ಒತ್ತಾಯಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸುವ ವೇಳೆ ಪಕ್ಷದ ಉಡುಪಿ ಜಿಲ್ಲಾಧ್ಯಕ್ಷ ಅಬ್ದುಲ್ ಅಝೀಝ್ ಉದ್ಯಾವರ, ಜಿಲ್ಲಾ ಉಪಾಧ್ಯಕ್ಷ ವಿಜಯ, ಮಾಜಿ ಜಿಲ್ಲಾ ಉಪಾಧ್ಯಕ್ಷ, ಶಹಜಹಾನ್ ತೋನ್ಸೆ, ಮಾಜಿ ಜಿಲ್ಲಾಧ್ಯಕ್ಣ ಅನ್ವರ್ ಅಲಿ ಕಾಪು ಇದ್ದರು.
ಕಾಲದ ತುರ್ತು ಬೇಡಿಕೆ.