2025-26ನೇ ಸಾಲಿನ ʼನಮ್ಮೂರ ಶಾಲೆಗೆ ನಮ್ಮ ಯುವಜನರುʼ ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ₹1 ಲಕ್ಷ ಅನುದಾನವನ್ನು ಪ್ರೋತ್ಸಾಹಧನದ ರೂಪದಲ್ಲಿ ನೀಡಲಾಗುತ್ತದೆ.
ಇದನ್ನೂ ಓದಿ: ಹಿಂದುತ್ವಕ್ಕೂ ಹಿಂದು ಧರ್ಮಕ್ಕೂ ಸಂಬಂಧವೇ ಇಲ್ಲ: ಸಿಪಿಐಎಂ ರಾಜ್ಯ ಕಾರ್ಯದರ್ಶಿ ಪ್ರಕಾಶ್
ಈ ಪೈಕಿ ₹10000 ಶಾಲೆಯ ದೈಹಿಕ ಶಿಕ್ಷಕರಿಗೆ ಪ್ರೋತ್ಸಾಹಧನವಾಗಿ ಮತ್ತು ₹90000 ಶಾಲೆಯ ಎಸ್.ಡಿ.ಎಂ.ಸಿ.ಗೆ ಅಗತ್ಯ ಕ್ರೀಡಾ ಸಾಮಾಗ್ರಿಗಳ ಪೂರೈಕೆಗಾಗಿ ಅನುದಾನದ ರೂಪದಲ್ಲಿ ನೀಡಲಾಗುತ್ತದೆ. ಪ್ರೋತ್ಸಾಹಧನ ಪಡೆಯಲು ಬಯಸುವ ಸರ್ಕಾರಿ ಶಾಲೆಗಳ ಮುಖ್ಯಸ್ಥರು ಜೂನ್ 27ರೊಳಗೆ ಕ್ರೀಡಾಪಟುಗಳ ಸಾಧನೆಯ ವಿವರ, ದೈಹಿಕ ಶಿಕ್ಷಕರ ಹೆಸರು, ಮೊಬೈಲ್ ಸಂಖ್ಯೆಯೊಂದಿಗೆ ಪ್ರಸ್ತಾವನೆ ಕಳುಹಿಸಿಕೊಡಬೇಕು.
ಇದನ್ನೂ ಓದಿ: ಮಂಗಳೂರು | ಮಹಾನಗರ ಪಾಲಿಕೆಗೆ ಡಿಸಿ ದಿಢೀರ್ ಭೇಟಿ
ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಸ್ಟೇಡಿಯಂ, ಮಂಗಳೂರು ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.