ಕೇಂದ್ರ ಸರ್ಕಾರವು ಜಾರಿಗೆ ತಂದಿರುವ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಇಂದು ಸಂಜೆ ರಾಯಚೂರು ನಗರದ ಮಹಾತ್ಮ ಗಾಂಧಿ ಮೈದಾನದಲ್ಲಿ ಜಾಗೃತ ಸಮಾವೇಶ ಬೃಹತ್ ವೇದಿಕೆ ಸಿದ್ಧಪಡಿಸಲಾಗಿದೆ.
ಜಮಾತ್ ಇಸ್ಲಾಂ ಹಿಂದ್ ,ಮುಸ್ಲಿಂ ಒಕ್ಕೂಟ ಹಾಗೂ ವಿವಿಧ ಸಂಘಟನೆಗಳ ರಾಯಚೂರು ಘಟಕದ ಒಕ್ಕೂಟದಿಂದ ಈ ಸಮಾರಂಭ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಮುಖ್ಯ ಅತಿಥಿ ಭಾಷಣಕಾರರಾಗಿ ಎಐಎಂಐಎಂ ಮುಖ್ಯಸ್ಥ ಹಾಗೂ ಸಂಸದ ಅಸಾದುದ್ದೀನ್ ಓವೈಸಿ ಹಾಗೂ ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್ ರಾಷ್ಟ್ರೀಯ ಅಧ್ಯಕ್ಷರಾದ ಖಾಲೀದ ಸೈಫುಲ್ಲಾ ರೆಹಮಾನ್ ಹಾಗೂ ಪ್ರಗತಿ ಪರ ಚಿಂತಕ ಶಿವಸುಂದರ್ ಅವರು ಆಗಮಿಸುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕೆರೆಯಲ್ಲಿ ಮುಳುಗಿ ಕುರಿಗಾಹಿ ಸಾವು
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ತಾಲ್ಲೂಕಿನ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.
