ಮಂಗಳೂರು | ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯ : ನಿರ್ದೇಶಕ ತಮ್ಮ ಲಕ್ಷ್ಮಣ

Date:

Advertisements

ತುಳು ನಾಟಕ ಪರಂಪರೆಯಲ್ಲಿ ಶಿಕ್ಷಕರ ಹಾಗೂ ಶಿಕ್ಷಣ ಸಂಸ್ಥೆಗಳ ಪಾತ್ರ ಮಹತ್ತರವಾಗಿತ್ತು. ಹಾಗಾಗಿ, ಕಾಲೇಜು ವಿದ್ಯಾರ್ಥಿಗಳಿಗೆ ತುಳು ನಾಟಕದ ಅಭಿರುಚಿ ಮೂಡಿಸುವುದು ಅಗತ್ಯವಿದೆ ಎಂದು ಹಿರಿಯ ನಿರ್ದೇಶಕ ತಮ್ಮ ಲಕ್ಷ್ಮಣ ಅವರು ಹೇಳಿದರು.

ಅವರು ಮಂಗಳವಾರದಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಹಾಗೂ ಪಡೀಲ್ ಅಮೃತ ಕಾಲೇಜ್ ಸಹಯೋಗದಲ್ಲಿ ಆಯೋಜಿಸಲಾದ ತುಳು ನಾಟಕ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಶತಮಾನಗಳ ಹಿಂದೆಯೇ ಪಂಜೆ ಮಂಗೇಶರಾಯರ ಕಾರಣದಿಂದಾಗಿ ಶಾಲೆಗಳಲ್ಲಿ ನಾಟಕ ಆರಂಭವಾಗಿತ್ತು ಎಂಬ ವಿಚಾರವನ್ನು ತಮ್ಮ ಲಕ್ಷಣ ಅವರು ಈ ಸಂದರ್ಭದಲ್ಲಿ ನೆನಪಿಸಿದರು.

Advertisements

ವಿದ್ಯಾರ್ಥಿಗಳು ತುಳು ನಾಟಕದ ಬಗ್ಗೆ ಆಸಕ್ತಿ ಬೆಳೆಸಿಕೊಳ್ಳಬೇಕು ಹಾಗೂ ರಂಗಭೂಮಿಯಲ್ಲಿ ತೊಡಗಿಸಿಕೊಳ್ಳಬೇಕು, ಶಾಲೆಯಿಂದಲೇ ತುಳು ನಾಟಕಗಳ ಬೆಳವಣಿಗೆ ಆರಂಭಗೊಂಡಿತು ಹಾಗೂ ವೃತ್ತಿಪರವಾಗಿ ಬೆಳವಣಿಗೆ ಹೊಂದಿದೆ. ಅದನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ಯುವ ಪೀಳಿಗೆಯ ಮೇಲಿದೆ ಎಂದರು.

ಮುಖ್ಯ ಅತಿಥಿಯಾಗಿ ಪಾಲ್ಗೊಂಡ ‌ ಹಿರಿಯ ರಂಗನಟ ಪ್ರಭಾಕರ ಕಾಪಿಕಾಡ್ ಮಾತನಾಡಿ, ನಾಟಕದ ಮೂಲಕ ಸ್ನೇಹ, ಪ್ರೀತಿ, ಸಾಮರಸ್ಯವನ್ನು ಮೂಡಿಸಬೇಕು ಎಂದು ಹೇಳಿದರು.

ಇದನ್ನು ಓದಿದ್ದೀರಾ? ಇರಾನ್-ಇಸ್ರೇಲ್ ಸಂಘರ್ಷ | ಇಸ್ರೇಲ್‌ಗೆ ಅವಾಚ್ಯ ಶಬ್ದಗಳಿಂದ ಬೈದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್!

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಅಧ್ಯಕ್ಷತೆ ವಹಿಸಿದ್ದರು. ಅಮೃತ ಕಾಲೇಜ್ ಪ್ರಿನ್ಸಿಪಾಲ್ ಡಾ.ಚಂದ್ರಹಾಸ ಕಣ್ವತೀರ್ಥ ಶುಭಕೋರಿ ಮಾತನಾಡಿದರು.

ಹತ್ತು ದಿನಗಳ ನಾಟಕ ಕಾರ್ಯಾಗಾರದ ಮೂಲಕ ಹೊಸ ತುಳು ನಾಟಕವನ್ನು ಪ್ರಸ್ತುತಪಡಿಸಲಾಗುವುದು ಎಂದು ಶಿಬಿರದ ನಿರ್ದೇಶಕ ಜಗನ್ ಪವರ್ ಬೇಕಲ್ ಅವರು ತಿಳಿಸಿದರು. ಅಕಾಡೆಮಿ ಸದಸ್ಯೆ ಅಕ್ಷಯ ಆರ್ .ಶೆಟ್ಟಿ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X