ದಕ್ಷಿಣ ಕನ್ನಡ | ವಿಜಯ ಕೋಟ್ಯಾನ್‌ಗೆ ʼಬ್ರ್ಯಾಂಡ್ ಮಂಗಳೂರುʼ ಪ್ರಶಸ್ತಿ

Date:

Advertisements

ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ ʼಬ್ರ‍್ಯಾಂಡ್ ಮಂಗಳೂರುʼ ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು ಆಯ್ಕೆಯಾಗಿದ್ದಾರೆ.

ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್ 2ರಂದು ಪ್ರಕಟವಾದ “ಹುಲಿ ವೇಷಕ್ಕೆ ಖದರ್ ನೀಡಿದ್ದ ಆಸಿಫ್” ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ.

ಪ್ರಶಸ್ತಿಯು ₹5,001 ಮತ್ತು ಪ್ರಶಸ್ತಿ ಪತ್ರದ ಜತೆಗೆ ಒಂದು ಸ್ಮರಣಿಕೆಯನ್ನು ಒಳಗೊಂಡಿದೆ. ಸಿಸಿಆರ್‌ಬಿ ಎಸಿಪಿ ಗೀತಾ ಕುಲಕರ್ಣಿ, ಹಿರಿಯ ಪತ್ರಕರ್ತ ಜೈದೀಪ್ ಶೆಣೈ, ಪತ್ರಿಕೋದ್ಯಮ ಉಪನ್ಯಾಸಕ ಗುರುಪ್ರಸಾದ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿ ತೀರ್ಪುಗಾರರಾಗಿದ್ದರು ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisements

ವಿಜಯಕೋಟ್ಯಾನ್ ಪಡು ಅವರು ಹೊಸದಿಗಂತ ಮೂಲಕ ಪತ್ರಿಕೋದ್ಯಮ ಪ್ರವೇಶಿಸಿ ವಿಜಯ ಕರ್ನಾಟಕದಲ್ಲಿ 20 ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. 2019-20ನೇ ಸಾಲಿನ ಪ.ಗೋ. ಪ್ರಶಸ್ತಿ, 2022ರಲ್ಲಿ ಕಲಬುರಗಿಯಲ್ಲಿ ನಡೆದ ಪತ್ರಕರ್ತರ ರಾಜ್ಯ ಸಮ್ಮೇಳನದಲ್ಲಿ ಡ್ರಗ್ಸ್ ಸಂಬಂಧಿತ ಸ್ಕೂಪ್ ವರದಿಗೆ ಬಿ ಎಸ್ ವೆಂಕಟರಾಂ ರಾಜ್ಯ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯಿಂದ ನೀಡುವ ಪ್ರತಿಷ್ಠಿತ `ಅಭಿಮಾನಿ ದತ್ತಿ ಪ್ರಶಸ್ತಿ’ ಲಭಿಸಿದೆ. ಇವರು
ನೀರುಮಾರ್ಗ ಪಡು ಬೊಂಡಂತಿಲ ಗ್ರಾಮದ ಗೋಪಾಲ ಪೂಜಾರಿ ಮತ್ತು ಕಮಲ ದಂಪತಿಯ ಪುತ್ರ.

ಇದನ್ನೂ ಓದಿದ್ದೀರಾ? ಬಿಪಿಎಲ್ ಕುಟುಂಬಗಳಿಗೆ ‘ಇಂದಿರಾ ಆಹಾರ ಕಿಟ್’ ವಿತರಣೆಗೆ ಸರ್ಕಾರ ಚಿಂತನೆ; ತಗ್ಗುವುದೇ ಮಧ್ಯವರ್ತಿಗಳ ಹಾವಳಿ

ಪ್ರಶಸ್ತಿ ಪ್ರದಾನ ಸಮಾರಂಭ: ಜೂನ್‌ 25ರ ಬೆಳಿಗ್ಗೆ 11ಕ್ಕೆ ಪತ್ರಿಕಾಭವನದಲ್ಲಿ ಮಂಗಳೂರು ಪೊಲೀಸ್‌ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಪ್ರಶಸ್ತಿ ಪ್ರದಾನ ಮಾಡುವರು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ ಅಧ್ಯಕ್ಷತೆ ವಹಿಸುವರು. ಪ್ರೆಸ್‌ ಕ್ಲಬ್‌ ಅಧ್ಯಕ್ಷ ಪಿ ಬಿ ಹರೀಶ್‌ ರೈ, ಪತ್ರಿಕಾಭವನ ಟ್ರಸ್ಟ್‌ ಅಧ್ಯಕ್ಷ ರಾಮಕೃಷ್ಣ ಆರ್ ಉಪಸ್ಥಿತರಿರುವರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X