ವಿಜಯಪುರ | ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥ ಮಾಡಿಕೊಳ್ಳುವುದು ಅಗತ್ಯ: ಪ್ರೊ. ಶುಭಾ ಮರೆವಂತೆ

Date:

Advertisements

“ಸ್ತ್ರೀವಾದವನ್ನು ಪ್ರತಿಯೊಬ್ಬರೂ ಸರಿಯಾಗಿ ಅರ್ಥಮಾಡಿಕೊಳ್ಳುವುದು ಈಗಿನ ಕಾಲದಲ್ಲಿ ಅಗತ್ಯವಾಗಿದೆ” ಎಂದು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ಅಧ್ಯಯನ ವಿಭಾಗದ ಪ್ರಾಧ್ಯಾಪಕಿ ಪ್ರೊ. ಶುಭಾ ಮರವಂತೆ ಹೇಳಿದರು.

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಸೋಮವಾರ ಆಯೋಜಿಸಿದ್ದ ‘ಲಿಂಗತ್ವ ಗ್ರಹಿಕೆ ವಿವಿಧ ಆಯಾಮಗಳಲ್ಲಿ” ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಹೆಣ್ಣು-ಗಂಡು ಸಹಜೀವಿಗಳಾಗಿ, ಪರಸ್ಪರ ಪೂರಕವಾಗಿ ಬದುಕಿದಾಗ ಮಾತ್ರ ಸಮತೋಲನದ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ. ಸ್ತ್ರೀವಾದವು ಮಹಿಳೆಯರನ್ನು ಸೃಜನಶೀಲರಾಗಿರಲು ಪ್ರೇರೇಪಿಸುವುದಲ್ಲದೆ, ನಮ್ಮೊಳಗಿನ ಸಮಾನತೆಯ ಅರಿವನ್ನು ಎಚ್ಚರಿಸುತ್ತದೆ. ಇದು ಹಕ್ಕುಗಳಿಗಾಗಿ ಹೋರಾಟವಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಪ್ರತಿಪಾದನೆ” ಎಂದರು.

Advertisements

ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ, “ಸಮಾಜದಲ್ಲಿ ಯಾರು ಶ್ರೇಷ್ಠರು ಅಥವಾ ಕನಿಷ್ಠರು ಎಂಬ ಭಾವನೆಗೆ ಸ್ಥಳವಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಶಕ್ತಿ ಮತ್ತು ಸಾಮರ್ಥ್ಯ ಹೊಂದಿದ್ದಾರೆ. ಮಹಿಳೆ ಮತ್ತು ಪುರುಷರು ಸಮಾನವಾಗಿ ಬೆಳೆದುಬರಬೇಕಾದ ಕಾಲ ಇದು. ಇಂದಿನ ಬದಲಾಗುತ್ತಿರುವ ಕಾಲಘಟ್ಟದಲ್ಲಿ ಮಹಿಳಾ ಅಧ್ಯಯನ ಶಿಸ್ತು ಕೇವಲ ಅಧ್ಯಯನವಲ್ಲ, ಅದು ಸಮಾನತೆ, ಸಬಲೀಕರಣ ಮತ್ತು ಸಮಾಜಮುಖಿ ಚಿಂತನೆಗಳ ದಿಕ್ಕೂಚಿಯಾಗಬೇಕಿದೆ” ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ. ಮಾತನಾಡಿ, “ಮಹಿಳಾ ವಿಶ್ವವಿದ್ಯಾಲಯದಲ್ಲಿ ನಡೆಯುವ ಎಲ್ಲಾ ಕಾರ್ಯಚಟುವಟಿಕೆಗಳು ಮಹಿಳಾ ಸಬಲೀಕರಣಕ್ಕೆ ಭಾಗವಾಗಿರುತ್ತವೆ. ಇಂದಿನ ಯುವಜನತೆ. ವಿಶೇಷವಾಗಿ ವಿದ್ಯಾರ್ಥಿನಿಯರು. ಕೇವಲ ಜ್ಞಾನವನ್ನು ಪಡೆದುಕೊಳ್ಳುವಷ್ಟರಲ್ಲಿ ನಿಲ್ಲದೇ, ಸಮಾಜದಲ್ಲಿ ಸಮಾನತೆಯ ಧ್ವಜದಾರರಾಗಬೇಕು. ಇಂತಹ ನಿಲುವುಗಳು ತಾನಾಗಿಯೇ ಬರುವುದಿಲ್ಲ ಅವುಗಳನ್ನು ಬೆಳಸಬೇಕಾಗುತ್ತದೆ. ಈ ಹಿನ್ನೆಲೆಯಲ್ಲಿ ಮಹಿಳಾ ಅಧ್ಯಯನ ಕೇಂದ್ರ ಮತ್ತು ವಿಭಾಗದ ಕಾರ್ಯಚಟುವಟಿಕೆಗಳು ಮಹಿಳಾ ಚೇತನತೆಗೆ ಮಾರ್ಗದರ್ಶನ ನೀಡುತ್ತಿದ್ದು, ಸಮಾನತೆಯ ಅರಿವನ್ನು ಮತ್ತಷ್ಟು ಗಾಢಗೊಳಿಸುತ್ತಿವೆ” ಎಂದರು.

ಈ ಸುದ್ದಿ ಓದಿದ್ದೀರಾ? ಗದಗ | ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ; ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ಲೋಕಾಯುಕ್ತ ಬಲೆಗೆ

ಕಾರ್ಯಕ್ರಮದಲ್ಲಿ ಡಾ. ಕಲಾವತಿ ಕಾಂಬಳೆ, ಡಾ. ಸರೋಜಾ ಸಂತಿ, ಡಾ.ರಜಿಯಾ ನದಾಫ ಉಪಸ್ಥಿತರಿದ್ದರು. ಮಹಿಳಾ ಅಧ್ಯಯನ ಕೇಂದ್ರದ ನಿರ್ದೇಶಕ ಪ್ರೊ. ಲಕ್ಷ್ಮೀದೇವಿ ವೈ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಡಾ.ಶಶಿಕಲಾ ರಾಠೋಡ ನಿರೂಪಿಸಿದರು.ಡಾ. ಭಾಗ್ಯಶ್ರೀ ದೊಡಮನಿ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X