ಬೆಳಗಾವಿ ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಖಾನಾಪುರ ಮತ್ತು ಬೆಳಗಾವಿ ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಆದೇಶವು ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು, ಪದವಿ ಪೂರ್ವ ಕಾಲೇಜುಗಳು (1ರಿಂದ 12ನೇ ತರಗತಿ) ಮತ್ತು ಅಂಗನವಾಡಿ ಕೇಂದ್ರಗಳಿಗೆ ಅನ್ವಯವಾಗುತ್ತದೆ.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಈ ಆದೇಶವನ್ನು ಕಟ್ಟುನಿಟ್ಟಾಗಿ ಅನುಸರಿಸುವಂತೆ ಸೂಚನೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿಯ ಪರಿಶೀಲನೆಯ ಬಳಿಕ ರಜೆಯ ಅವಧಿಯನ್ನು ವಿಸ್ತರಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.