ಪ್ರಥಮ ದರ್ಜೆಯ ಗುತ್ತಿಗೆದಾರನ ಭೀಕರ ಹತ್ಯೆಗೈಯಲಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಮೃತನ ಹೆಸರು ಶಿವಾನಂದ ಕುನ್ನೂರು (40) ಪ್ರಥಮ ದರ್ಜೆಯ ಗುತ್ತಿಗೆದಾರ. ಹೊಟೇಲ್‌ನಲ್ಲಿ ಊಟ ಮಾಡಿ ನಂತರ ಕಾರಿನಲ್ಲಿ ತೆರಳುವ ವೇಳೆ ದಾಳಿ ಮಾಡಿದ ಆರೋಪಿಗಳು, ಕೊಲೆ ಮಾಡಿ ಪರಾರಿಯಾಗಿದ್ದಾರೆ. ಶಿವು ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಹಾವೇರಿ ಎಸ್ಪಿ ಅಂಶುಕುಮಾರ, ಶ್ವಾನದಳ ಮತ್ತು ಬೆರಳಚ್ಚು ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸುದ್ದಿ ಓದಿದ್ದೀರಾ? ಗದಗ | ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ; ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ಲೋಕಾಯುಕ್ತ ಬಲೆಗೆ
ಶಿಗ್ಗಾಂವಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.