ಮಣಿಪುರ ಹಿಂಸಾಚಾರ | ಪ್ರಧಾನಿ ಮೋದಿ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು: ಆಪ್ ಪ್ರತಿಭಟನೆ

Date:

Advertisements
  • ಬೆತ್ತಲೆ ಪೆರೇಡ್ ನಡೆಸಿದ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಪ್ರಕರಣ ಮುಚ್ಚಿ ಹಾಕುವ ಪ್ರಯತ್ನ
  • ಸಂಜಯ್ ಸಿಂಗ್‌ರನ್ನು ಸಂಪೂರ್ಣ ಅವಧಿಗೆ ಅಮಾನತು ಮಾಡಿರುವುದು ಸಂವಿಧಾನ ವಿರೋಧಿ ನಡೆ

ಮಣಿಪುರ ರಾಜ್ಯದಲ್ಲಿ ಕಳೆದ ಮೂರು ತಿಂಗಳಿನಿಂದ ಹಿಂಸಾಚಾರ ನಡೆಯುತ್ತಿದ್ದು, ಇದನ್ನು ಹತ್ತಿಕ್ಕುವಲ್ಲಿ ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಂಪೂರ್ಣ ವಿಫಲವಾಗಿದ್ದಾರೆ. ಹಾಗಾಗಿ, ಅವರು ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿ ರಾಜೀನಾಮೆ ನೀಡಬೇಕು ಎಂದು ಆಮ್‌ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ ಆಗ್ರಹಿಸಿದರು.

ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದಿಂದ ಪ್ರತಿಭಟನೆ ಆಯೋಜಿಸಲಾಗಿತ್ತು. ಈ ವೇಳೆ, ಸುದ್ದಿಗಾರರೊಂದಿಗೆ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿ.ಟಿ.ನಾಗಣ್ಣ, “ಮಣಿಪುರ ರಾಜ್ಯದಲ್ಲಿನ ವರ್ಗ ಸಂಘರ್ಷಗಳನ್ನು ಹತ್ತಿಕ್ಕುವ ಬದಲು ಕೇಂದ್ರ ಸರ್ಕಾರ ತಾನೇ ಖುದ್ದಾಗಿ ನಿಂತು ವೋಟ್ ರಾಜಕಾರಣಕ್ಕಾಗಿ ಹಿಂಸಾಚಾರಗಳಿಗೆ ಆಸ್ಪದ ನೀಡುತ್ತಿರುವ ದುರುಳ ನೀತಿಯನ್ನು ಖಂಡಿಸಲೇ ಬೇಕಾಗಿದೆ” ಎಂದರು.

“ಗೃಹ ಸಚಿವರು ಖುದ್ದಾಗಿ ಐದು ದಿವಸಗಳ ಕಾಲ ಮಣಿಪುರ ರಾಜ್ಯದಲ್ಲಿ ಮುಕ್ಕಾಂ ಹೂಡಿ ಬಂದಿದ್ದರೂ ಸಹ ಹಿಂಸಾಚಾರವನ್ನು ತಡೆಯಲು ಸಾಧ್ಯವಾಗಲಿಲ್ಲ. ಎರಡು ತಿಂಗಳುಗಳ ಹಿಂದೆ ಮಹಿಳೆಯರ ಮೇಲಿನ ಅತ್ಯಾಚಾರ ಹಾಗೂ ಬೆತ್ತಲೆ ಪೆರೇಡ್ ದುಷ್ಕರ್ಮಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸದೆ ಪ್ರಕರಣವನ್ನು ಮುಚ್ಚಿ ಹಾಕುವ ಕೇಂದ್ರ ಸರ್ಕಾರದ ತಂತ್ರಗಾರಿಕೆ ನಿಜಕ್ಕೂ ನಾಚಿಕೆಗೇಡಿನ ಸಂಗತಿ” ಎಂದು ಹೇಳಿದರು.

Advertisements

“ಈ ಬಗ್ಗೆ ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚಿಸದೆ ನಮ್ಮ ಪಕ್ಷದ ಸಂಸದ ಸಂಜಯ್ ಸಿಂಗ್‌ರನ್ನು ಸಂಪೂರ್ಣ ಅವಧಿಗೆ ಅಮಾನತು ಮಾಡಿರುವುದು ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ನಡೆ. ಇಂದು ವಿಶ್ವದಲ್ಲಿ ಭಾರತವನ್ನು ತಲೆತಗ್ಗಿಸುವಂತಹ ಪರಿಸ್ಥಿತಿಗೆ ತಳ್ಳಿರುವ ನರೇಂದ್ರ ಮೋದಿಯವರು ಈ ಕೂಡಲೇ ರಾಷ್ಟ್ರದ ಜನತೆಯ ಮುಂದೆ ಕ್ಷಮೆಯಾಚಿಸಿ ರಾಜೀನಾಮೆ ಕೊಟ್ಟು ತೊಲಗಬೇಕು” ಎಂದು ಆಗ್ರಹಿಸಿದರು .

ಈ ಸುದ್ದಿ ಓದಿದ್ದೀರಾ? ಜುಲೈ 25ರ ರಾಜ್ಯದ ಜಲಾಶಯಗಳ ನೀರಿನ ಮಟ್ಟ : ವಿವರ ಇಲ್ಲಿದೆ

ಮಹಿಳಾ ಘಟಕದ ಅಧ್ಯಕ್ಷ ಕುಶಲಸ್ವಾಮಿ ಮಾತನಾಡಿ, “ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಾಗಿದೆ. ಅತ್ಯಾಚಾರವನ್ನು ಮಾಡಿ ಬೆತ್ತಲೆ ಮೆರವಣಿಗೆ ಮಾಡುವಂತಹ ಹೀನಾತಿ ಹೀನರಿಗೆ ರಕ್ಷಣೆ ನೀಡುತ್ತಿರುವ ಬಿಜೆಪಿ ಕೇಂದ್ರ ಸರ್ಕಾರ ನಿಜಕ್ಕೂ ದೇಶದಿಂದ ತೊಲಗಬೇಕಾಗಿದೆ. ಕುಸ್ತಿಪಟು ಅತ್ಯಾಚಾರ ಪ್ರಕರಣದಲ್ಲಿ ಸಂಸದ ಬ್ರಿಜ್ ಭೂಷಣ್ ರಕ್ಷಣೆಗೆ ನಿಂತಿರುವ ಪ್ರೀತಿಯನ್ನು ಗಮನಿಸಿದರೆ ಕೇವಲ ಭ್ರಷ್ಟಾಚಾರಿಗಳನ್ನು ರಕ್ಷಿಸುತ್ತಿರುವ ಕೇಂದ್ರ ಸರ್ಕಾರ ಈಗ ಅತ್ಯಾಚಾರಿಗಳನ್ನು ಸಹ ಸಂರಕ್ಷಿಸುವ ಕಾರ್ಯದಲ್ಲಿ ತೊಡಗಿರುವುದು ಈ ದೇಶದ ದುರಂತವೇ ಸರಿ. ಭಾರತ ಮಾತೆಯನ್ನು ಪೂಜಿಸುವಂತಹ ಸಂಸ್ಕೃತಿ ರಕ್ಷಕರು ಎಂದು ಪೋಸು ನೀಡುತ್ತಾ ಬಂದಿರುವ ಬಿಜೆಪಿಯ ನಿಜ ಬಣ್ಣ ದೇಶದ ಮುಂದೆ ಬೆತ್ತಲಾಗಿದೆ. ಮುಂದಿನ ದಿವಸಗಳಲ್ಲಿ ತಕ್ಕ ಪಾಠವನ್ನು ದೇಶದ ಜನ ಕಲಿಸುತ್ತಾರೆ” ಎಂದು ತಿಳಿಸಿದರು.

ಪ್ರತಿಭಟನೆಯಲ್ಲಿ ಪಕ್ಷದ ಹಿರಿಯ ನಾಯಕ ವಿಜಯ ಶರ್ಮ, ಮಾಧ್ಯಮ ವಕ್ತಾರೆ ಉಷಾ ಮೋಹನ್ ಸೇರಿದಂತೆ ಹಲವರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

Download Eedina App Android / iOS

X