ರಾಜ್ಯದ ಮಾವು ಬೆಳೆಗಾರರ ಹಿತರಕ್ಷಣೆಗೆ ಸ್ಪಂದಿಸುವಂತೆ ಕೋರಿ ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಬರೆದಿದ್ದ ಪತ್ರಕ್ಕೆ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಸ್ಪಂದಿಸಿದ್ದು, ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿ ಮಾವಿಗೆ ಬೆಂಬಲ ಬೆಲೆ ಘೋಷಣೆ ಮಾಡಿದ್ದಾರೆ.
ಈ ಯೋಜನೆಯಡಿಯಲ್ಲಿ, ಕ್ವಿಂಟಲ್‌ಗೆ ರೂ. 1616 ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯಲ್ಲಿ ಗರಿಷ್ಠ 2,50,000 ಮೆಟ್ರಿಕ್ ಟನ್ ಮಾವಿನಹಣ್ಣಿನ ಖರೀದಿಗೆ ಅನುಮೋದಿಸಲಾಗಿದೆ ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.
ಈ ಮಧ್ಯಸ್ಥಿಕೆ ಪರಿಹಾರವನ್ನು ನೀಡುತ್ತದೆ ಮತ್ತು ಕರ್ನಾಟಕದ ಮಾವಿನ ರೈತರ ಕಲ್ಯಾಣಕ್ಕಾಗಿ ಕುಮಾರಸ್ವಾಮಿ ಅವರು ಎತ್ತಿದ ನಿಜವಾದ ಕಳವಳಗಳನ್ನು ಪರಿಹರಿಸುತ್ತದೆ ಎಂದು ಶಿವರಾಜ್ ಸಿಂಗ್ ಚೌಹಾಣ್ ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?
ಇದಕ್ಕೆ ಧನ್ಯವಾದ ತಿಳಿಸಿರುವ ಕುಮಾರಸ್ವಾಮಿ, ‘ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು. ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ನರೇಂದ್ರ ಮೋದಿ ಅವರ ಆಡಳಿತದಲ್ಲಿ ರೈತರ ಉತ್ಪನ್ನಗಳಿಗೆ ಸ್ಥಿರ ಬೆಲೆಯ ಖಾತರಿ ಸದಾ ಇರುತ್ತದೆ ಎಂಬುದನ್ನು ಈ ಉಪಕ್ರಮವು ಮತ್ತೊಮ್ಮೆ ಸಾಬೀತುಪಡಿಸಿದೆ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಕೃಷಿ ಸಚಿವರಿಗೆ ಬರೆದಿದ್ದ ಪತ್ರದಲ್ಲಿ, ರಾಜ್ಯದಲ್ಲಿನ ವಾತಾವರಣ, ಮಾವಿನ ಬೆಲೆ ಕುಸಿತದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಮಾವು ಬೆಳೆಗಾರರ ಸಮಸ್ಯೆ ಪರಿಹರಿಸಿ. ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮುಂತಾದ ಜಿಲ್ಲೆಗಳಲ್ಲಿ ಮಾವು ಬೆಳೆಗಾರರು ಸಂಕಷ್ಟದಲ್ಲಿ ಇದ್ದಾರೆ. ಭಾರೀ ಬೆಲೆ ಕುಸಿತದಿಂದ ಬೆಳಗಾರರು ಕಂಗಾಲಾಗಿದ್ದಾರೆ. ಇವರಿಗೆ ನೆರವು ನೀಡುವಂತೆ ಮನವಿ ಮಾಡಿದ್ದರು.
ಕರ್ನಾಟಕದ ಮಾವು ಬೆಳೆಗಾರರ ನೆರವಿಗೆ ಧಾವಿಸಿದ ಗೌರವಾನ್ವಿತ ಪ್ರಧಾನಿಗಳಾದ ಶ್ರೀ @narendramodi ಅವರ ಸರಕಾರದ ರೈತಪರ ಬದ್ಧತೆ, ಅಚಲತೆಗೆ ನನ್ನ ಹೃದಯಪೂರ್ವಕ ಧನ್ಯವಾದಗಳು🙏
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 24, 2025
ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ (Market Intervention… pic.twitter.com/Ox3coq57qr