ಪ್ರೊ. ದೊಡ್ಡರಂಗೇಗೌಡ ಆರೋಗ್ಯ ವಿಚಾರಿಸಿದ ಸಚಿವ ಶಿವರಾಜ ತಂಗಡಗಿ; ಸರ್ಕಾರದಿಂದ ವೈದ್ಯಕೀಯ ವೆಚ್ಚ ಭರಿಸಲು ಸೂಚನೆ

Date:

Advertisements

ಹಿರಿಯ ಸಾಹಿತಿ ಪ್ರೊ.ದೊಡ್ಡರಂಗೇಗೌಡ ಅವರು ತೀವ್ರ ಅನಾರೋಗ್ಯದಿಂದ ಕೆಂಗೇರಿಯಲ್ಲಿರುವ ಗ್ಲೆನೆಗಲ್ ಬಿಜಿಎಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಸಚಿವ ಶಿವರಾಜ ತಂಗಡಗಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಬಿಜಿಎಸ್ ಆಸ್ಪತ್ರೆಗೆ ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಅವರು ಭೇಟಿ ನೀಡಿ ಪ್ರೊ.ದೊಡ್ಡರಂಗೇಗೌಡ ಅವರ ಆರೋಗ್ಯದ ಬಗ್ಗೆ ಸಚಿವರು ಮಾಹಿತಿ ಪಡೆದುಕೊಂಡಿದ್ದಾರೆ.

ಸಚಿವ ಶಿವರಾಜ ತಂಗಡಗಿ ಅವರು ಆಸ್ಪತ್ರೆಯ ವೈದ್ಯರಲ್ಲಿ ದೊಡ್ಡರಂಗೇಗೌಡ ಅವರ ಆರೋಗ್ಯ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಅವರ ವೈದ್ಯಕೀಯ ವೆಚ್ಚವನ್ನು ಸಂಪೂರ್ಣವಾಗಿ ಸರ್ಕಾರವೇ ಭರಿಸುತ್ತದೆ ಎಂದು ಹೇಳಿದ್ದಾರೆ. ಹಿರಿಯ ಸಾಹಿತಿಗೆ ಅಗತ್ಯವಿರುವ ಎಲ್ಲ ವೈದ್ಯಕೀಯ ಸೌಲಭ್ಯ ಒದಗಿಸುವಂತೆ ಸೂಚಿಸಿದ್ದಾರೆ. ದೊಡ್ಡರಂಗೇಗೌಡ ಆಸ್ಪತ್ರೆಗೆ ದಾಖಲಾದ ಬಗ್ಗೆ ಈದಿನ ಡಾಟ್‌ ಕಾಂ ಮೊದಲು ವರದಿ ಮಾಡಿತ್ತು.

Advertisements

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?

ಪ್ರೊ.ದೊಡ್ಡರಂಗೇಗೌಡರ ಕುಟುಂಬ ಸದಸ್ಯರನ್ನು ಶಿವರಾಜ ತಂಗಡಗಿ ಅವರು ಭೇಟಿ ಮಾಡಿ ಧೈರ್ಯ ಹೇಳಿದರು. ಹಿರಿಯ ಸಾಹಿತಿ ಕನ್ನಡ ಸಾಂಸ್ಕೃತಿಕ ಲೋಕದ ಆಸ್ತಿ. ಅವರ ಬಗ್ಗೆ ಅಪಾರವಾದ ಕಾಳಜಿ ಇದೆ. ಎಲ್ಲ ರೀತಿಯ ನೆರವನ್ನು ಸರ್ಕಾರದಿಂದ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮನುಜ ಕಾವ್ಯನಾಮದ ಮೂಲಕ ಕನ್ನಡ ಸಾಹಿತ್ಯ ಲೋಕದಲ್ಲಿ ಪ್ರೊ.ದೊಡ್ಡರಂಗೇಗೌಡ ಅವರು ಗುರುತಾಗಿದ್ದಾರೆ. ಇವರು ಕೆ.ರಂಗೇಗೌಡ, ಅಕ್ಕಮ್ಮ ದಂಪತಿಯ ಮಗನಾಗಿ 1946 ಫೆಬ್ರುವರಿ 7 ರಂದು ಮಧುಗಿರಿ ತಾಲೂಕಿನ ಕುರುಬರಹಳ್ಳಿಯಲ್ಲಿ ಜನಿಸಿದ್ದರು. ಪ್ರೊ.ದೊಡ್ಡರಂಗೇಗೌಡ ಅವರು ಹಾವೇರಿಯಲ್ಲಿ ನಡೆದ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

BREAKING NEWS | ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್

ಬೆಂಗಳೂರು ನಗರ ಸಿವಿಲ್ ನ್ಯಾಯಾಲಯಕ್ಕೆ ಬಾಂಬ್​ ಬೆದರಿಕೆ ಇಮೇಲ್ ಬಂದಿದೆ ಎಂದು...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

Download Eedina App Android / iOS

X