ಚಿಕ್ಕಮಗಳೂರು ತಾಲೂಕಿನ ಅಲ್ಲಂಪುರ ಗ್ರಾಮದ ಓಂಕಾರಮೂರ್ತಿ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ತನಿಖಾಧಿಕಾರಿಗಳು ಕ್ರಮ ತೆಗೆದುಕೊಂಡು ಆರೋಪಿಗಳನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ ಎಂದು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.
ಈ ಪ್ರಕರಣ ಕುರಿತು ತನಿಖೆ ಮಾಡಿ ತಪ್ಪಿತಸ್ಥ ಆರೋಪಿಗಳನ್ನು ಬಂಧಿಸಿ, ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸುವಂತೆ ಹಲವು ಸಂಘಟನೆಗಳು ಮನವಿ ಮಾಡಿದ್ದರೂ, ಪೊಲೀಸ್ ಇಲಾಖೆ ಇದನ್ನು ಕಡೆಗಣಿಸುತ್ತಿದೆ. ನ್ಯಾಯಕ್ಕಾಗಿ ಸಂಘಟನೆಗಳಿಂದ ಪ್ರತಿಭಟನೆ ನಡೆಸಲಾಯಿತು. ಆದರೆ ಭಾನುವಾರ ಮಧ್ಯಾಹ್ನ ಜಿಲ್ಲಾ ಪೊಲೀಸ್ ಕಚೇರಿಗೆ ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಸಂಘಟಕರನ್ನು ಕರೆಸಿ, “ಪ್ರತಿಭಟನೆ ನಡೆಸಿದರೆ ನಿಮ್ಮ ಮೇಲೆ ಕೇಸು ದಾಖಲಿಸುತ್ತೇವೆ” ಎಂದು ಬೆದರಿಕೆ ಹಾಕಿರುವುದು ಖಂಡನೀಯ ಎಂದು ಸಂಘಟನೆ ಹೊರಡಿಸಿದೆ.
ಪ್ರಕರಣ ವಿಚಾರವಾಗಿ ಪ್ರಶ್ನಿಸಿದಾಗ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ಓಂಕಾರಮೂರ್ತಿಯ ಪ್ರಕರಣ ತನಿಖಾಧಿಕಾರಿಗೆ ಸಂಬಂಧಿಸಿದ್ದು, ಬಿ.ಎನ್.ಎಸ್. ನಿಯಮದ ಪ್ರಕಾರ 60 ಯಾರನ್ನೂ ಬಂಧಿಸಲು ಸಾಧ್ಯವಿಲ್ಲ ಎಂದು ತಪ್ಪು ನೀಡಿ ಹೋರಾಟಗಾರರಿಗೆ ಬೆದರಿಕೆ ಹಾಕಿದ್ದಾರೆ ಶ್ರೀನಿವಾಸ್ ಆರೋಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಾನೆ ದಾಳಿಯಿಂದ ಬೆಳೆ ನಾಶ: ರೈತರಿಗೆ ಆತಂಕ
ಓಂಕಾರಮೂರ್ತಿಯ ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ನಡೆಯುತ್ತಿದೆ. ಈ ಪ್ರಕರಣವನ್ನು ತಕ್ಷಣವೇ ಸಿ. ಓ.ಡಿ ತನಿಖೆಗೆ ಶಿಫಾರಸು ಮಾಡಿ, ನೊಂದ ಕುಟುಂಬಕ್ಕೆ ನ್ಯಾಯ ದೊರಕಿಸಬೇಕು. ತಪ್ಪಿತಸ್ಥ ಆರೋಪಿಗಳಿಗೆ ತಕ್ಕ ಶಿಕ್ಷೆ ವಿಧಿಸಬೇಕು. ಹಾಗೂ ಪೊಲೀಸ್ ಅಧಿಕಾರಿಗಳು ಬೆದರಿಕೆ ಮತ್ತು ತನಿಖಾ ನಿರ್ಲಕ್ಷ್ಯವನ್ನು ಪರಿಶೀಲಿಸಿದ ಪೊಲೀಸ್ ಮಹಾನಿರ್ದೇಶಕರು ಕ್ರಮ ತೆಗೆದುಕೊಳ್ಳುತ್ತಾರೆ ಹೆಚ್ಚುವರಿ ಪೊಲೀಸ್, ಅಧೀಕ್ಷಕರನ್ನು ಚಿಕ್ಕಮಗಳೂರಿನಿಂದ ತಕ್ಷಣ ವರ್ಗಾವಣೆ ಮಾಡಬೇಕೆಂದು ಸಂಘಟನೆಯ ಸ್ಥಾಪನೆ.