ಬಾಗೇಪಲ್ಲಿ | ಡೆಂಘಿ, ಮಲೇರಿಯಾ ಬಗ್ಗೆ ವಿದ್ಯಾರ್ಥಿಗಳಿಗೆ ಮುಂಜಾಗ್ರತೆ

Date:

Advertisements

ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಕಸಬಾ ಹೋಬಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೊತ್ತಪಲ್ಲಿ ಶಾಲೆಯಲ್ಲಿ ಮಂಗಳವಾರದಂದು ಸಾರ್ವಜನಿಕ ಆರೋಗ್ಯ ಇಲಾಖೆಯಿಂದ ಡೆಂಘಿ, ಮಲೇರಿಯಾ ರೋಗದ ಬಗ್ಗೆ ಮಕ್ಕಳಿಗೆ ಮುಂಜಾಗ್ರತಾ ಅರಿವು ಮೂಡಿಸಿದರು.

ಈ ಸಂದರ್ಭದಲ್ಲಿ ಆರೋಗ್ಯ ಸಹಾಯಕಿ ಗೀತಾ ಮಾತನಾಡಿ, “ಮಳೆಗಾಲದಲ್ಲಿ ನಿಂತ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿಯಾಗಿ, ಸೊಳ್ಳೆ ಕಡಿತದಿಂದ ಡೆಂಘಿ, ಮಲೇರಿಯಾ, ಚಿಕನ್ ಗುನ್ಯಾ, ಆನೆಕಾಲು ರೋಗ ಸೇರಿದಂತೆ ಹಲವಾರು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ನಿಮ್ಮ ಮನೆಯಲ್ಲಿ ಮತ್ತು ನಿಮ್ಮ ಮನೆಯ ಸುತ್ತಮುತ್ತಲೂ ಎಲ್ಲೆಂದರಲ್ಲಿ ಕಸ, ಪ್ಲಾಸ್ಟಿಕ್, ಔಷಧೀಯ ಬಾಟಲ್ ಸೇರಿದಂತೆ ಅನೇಕ ತ್ಯಾಜ್ಯವನ್ನು ಬಿಸಾಡದೆ ಕಸದ ತೊಟ್ಟಿಯಲ್ಲಿ ಹಾಕಬೇಕು. ಈ ಮೂಲಕ ಸಾಂಕ್ರಾಮಿಕ ರೋಗಗಳು ಹರಡುವುದನ್ನು ಕಡಿಮೆ ಮಾಡಬೇಕು” ಎಂದು ಮಕ್ಕಳಿಗೆ ತಿಳಿಸಿದರು.

ರಕ್ಷಣಾತ್ಮಕ ಕ್ರಮಗಳು: “ಸೊಳ್ಳೆ ನಿವಾರಕ ಲೇಪನ, ಸೊಳ್ಳೆ ಪರದೆಗಳನ್ನು ಬಳಸಬೇಕು. ಈ ಸೊಳ್ಳೆಗಳು ಹಗಲು ಕಚ್ಚುವುದರಿಂದ ಮಕ್ಕಳು, ಹಿರಿಯರು ಮೈ ತುಂಬಾ ಬಟ್ಟೆ ಧರಿಸಬೇಕು. ಜಾಗೃತಿ ಜಾಥಾ ಕಾರ್ಯಕ್ರಮ ಎಲ್ಲ, ತಾಲೂಕು, ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಕರಪತ್ರಗಳು, ಆಡಿಯೋ ಮೂಲಕವೂ ಅರಿವು ಮೂಡಿಸಲಾಗುತ್ತಿದೆ” ಎಂದರು.

Advertisements

ಇದನ್ನೂ ಓದಿದ್ದೀರಾ? ಗದಗ | ಅಲ್ಪಸಂಖ್ಯಾತರ ಹಾಸ್ಟೆಲ್‌ನಲ್ಲಿ ಮೂಲ ಸೌಕರ್ಯಗಳ ಕೊರತೆ: ಅಧಿಕಾರಿಗಳ ಸುಳಿವೇ ಇಲ್ಲ

ಶಾಲಾ ಮುಖ್ಯ ಶಿಕ್ಷಕ ವೇಣು ಮಾತನಾಡಿ, “ಸೊಳ್ಳೆಗಳ ಉತ್ಪತ್ತಿ ತಾಣಗಳಾದ ಸಿಮೆಂಟ್ ತೊಟ್ಟಿಗಳು ಟೈರ್‌ಗಳು ಬ್ಯಾರೆಲ್‌ಗಳು, ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು ಮತ್ತು ಘನ ತ್ಯಾಜ್ಯ ವಸ್ತುಗಳಲ್ಲಿ ನೀರು ನಿಂತು ಡೆಂಘಿ ಮತ್ತು ಚಿಕನ್ ಗುನ್ಯಾ ಹರಡುವ ಸೊಳ್ಳೆಗಳು ಯಥೇಚ್ಛವಾಗಿ ಉತ್ಪತ್ತಿಯಾಗುತ್ತಿವೆ. ಮಳೆಗಾಲ ಪ್ರಾರಂಭವಾಗುತ್ತಿರುವುದರಿಂದ ಡೆಂಘಿ ಹಾಗೂ ಚಿಕನ್ ಗುನ್ಯಾ ರೋಗಗಳು ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ.‌ ಆದ್ದರಿಂದ ಇವುಗಳನ್ನು ನಿಯಂತ್ರಿಸಲು ಮುಂಜಾಗೃತಾ ಕ್ರಮವನ್ನು ತೆಗೆದುಕೊಳ್ಳುವುದು ತುಂಬಾ ಅತ್ಯಗತ್ಯ” ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿಕ್ಷಕಿಯರಾದ ಜಯಲಕ್ಷ್ಮಿ, ವರಲಕ್ಷ್ಮೀ, ಪುಷ್ಪಾವತಿ, ವಿಜಯಲಕ್ಷ್ಮಿ, ಶಿಕ್ಷಕರಾದ ಜಿ.ರಾಮಕೃಷ್ಣ ನಾಯಕ, ವೆಂಕಟೇಶ್, ಅರೋಗ್ಯ ಇಲಾಖೆ ಸಿಬ್ಬಂದಿಗಳಾದ ಲಲಿತ, ಮುನಿಯಮ್ಮ ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X