ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ.
ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಆಕಸ್ಮಿಕವಾಗಿ ಸಾವನ್ನಪ್ಪಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಿಷ ಸೇವಿಸಿ ವಿದ್ಯಾರ್ಥಿನಿ ಆತ್ಮಹತ್ಯೆ
ಈ ಘಟನೆ ಕುರಿತು ಸ್ಥಳಕ್ಕೆ ಮೆಸ್ಕಾಂ ಸಿಬ್ಬಂದಿ, ಜಾನುವಾರು ವೈದ್ಯರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದೇ ರೀತಿ ಹಿಂದೆಯೇ ಘಟನೆ ಸಂಭವಿಸಿದ್ದು, ವಿದ್ಯುತ್ ಅವಘಡ ತಪ್ಪಿಸುವಲ್ಲಿ ಮೆಸ್ಕಾಂ ಸಿಬ್ಬಂದಿ ವಿಫಲರಾಗಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.