ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಚಮಕೇರಿ ಗ್ರಾಮದಲ್ಲಿ ಶಾಲಾ ಆವರಣದಲ್ಲಿ ಆಟವಾಡುತ್ತಿದ್ದಾಗ ಹೃದಯಾಘಾತ ಸಂಭವಿಸಿ 9ನೇ ತರಗತಿಯ ವಿದ್ಯಾರ್ಥಿನಿ ಸಾವಿಗೀಡಾಗಿರುವ ದಾರುಣ ಘಟನೆ ಮಂಗಳವಾರ ನಡೆದಿದೆ.
ಮೃತಳು ತಾಲ್ಲೂಕಿನ ಬೇಡರಹಟ್ಟಿ ಗ್ರಾಮದ ನಿವಾಸಿ ರೇಣುಕಾ ಸಂಜಯ ಬಂಡಗಾರ (ವಯಸ್ಸು 15) ಎಂಬ ವಿದ್ಯಾರ್ಥಿನಿಯಾಗಿದ್ದಾರೆ. ಚಮಕೇರಿ ಗ್ರಾಮದಲ್ಲಿರುವ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ರೇಣುಕಾ, ಆಟವಾಡುವ ವೇಳೆ ಕುಸಿದು ಬಿದ್ದಿದ್ದಾಳೆ ಘಟನೆಯಾದ ನಂತರ ಶಿಕ್ಷಕರು ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ರು. ಆದರೆ ವೈದ್ಯರು ಪರೀಕ್ಷಿಸಿದಾಗ ವಿದ್ಯಾರ್ಥಿನಿ ಈಗಾಗಲೇ ಮೃತಪಟ್ಟಿರುವುದು ದೃಢಪಟ್ಟಿದೆ.
ಘಟನೆ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅಕಾಲಿಕವಾಗಿ ಪುತ್ರಿಯನ್ನು ಕಳೆದುಕೊಂಡ ಕುಟುಂಬದವರು ಆಘಾತದಿಂದ ಕಂಗಾಲಾಗಿದ್ದಾರೆ.