ಬೆಂಗಳೂರಿನ ಕನಕಪುರ ರಸ್ತೆಯ ಪಕ್ಕದಲ್ಲಿ ಎರಡು ಸಾವಿರ ಮುಖಬೆಲೆಯ ಖೋಟಾ ನೋಟುಗಳು ಪತ್ತೆಯಾಗಿವೆ. ತಲಘಟ್ಟಪುರ ಠಾಣೆಯ ಪೊಲೀಸರು ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಮಂಗಳವಾರ ಒಂದು ದೊಡ್ಡ ಸೂಟಕೇಸ್ ಹಾಗೂ ಎರಡು ರಟ್ಟಿನ ಬಾಕ್ಸ್ ತುಂಬ ತುಂಬಿರುವ ₹2000 ಮುಖಬೆಲೆಯ ಜೆರಾಕ್ಸ್ ನೋಟುಗಳನ್ನು ರಸ್ತೆ ಬದಿ ಬಿಸಾಕಿದ್ದಾರೆ. ಈ ಬಗ್ಗೆ ಸ್ಥಳೀಯರು ಸಂಚಾರ ಪೊಲೀಸರ ಗಮನಕ್ಕೆ ತಂದಿದ್ದಾರೆ. ತಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಜೆರಾಕ್ಸ್ ನೋಟುಗಳನ್ನು ಪರಿಶೀಲನೆ ಮಾಡಿ ವಶಕ್ಕೆ ಪಡೆದಿದ್ದಾರೆ.
ಈ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ತಲಘಟ್ಟಪುರ ಠಾಣೆಯ ಪೊಲೀಸರು, “ಸದ್ಯ ನಕಲಿ ನೋಟುಗಳನ್ನು ವಶಕ್ಕೆ ಪಡೆಯಲಾಗಿದೆ. ಎಷ್ಟು ಹಣ ಇದೆ ಎಂಬ ಬಗ್ಗೆ ಮಾಹಿತಿ ಇಲ್ಲ. ಆ ಖೋಟಾ ನೋಟುಗಳನ್ನು ರಸ್ತೆ ಬದಿ ಯಾರು ತಂದು ಬಿಸಾಕಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ” ಎಂದು ತಿಳಿಸಿದರು.