ಬೆಂಗಳೂರಿನ ಜೆಪಿ ನಗರದಲ್ಲಿ ಮಗನ ನಿರ್ಲಕ್ಷ್ಯದಿಂದ ಮನನೊಂದ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಕೃಷ್ಣಮೂರ್ತಿ (81), ರಾಧ (74) ಆತ್ಮಹತ್ಯೆಗೆ ಶರಣಾದ ದಂಪತಿ.
ನಗರದ ಎಂಟನೇ ಹಂತದ ವೃದ್ಧಾಶ್ರಮದಲ್ಲಿ ಘಟನೆ ನಡೆದಿದೆ. ಮನೆಯಲ್ಲಿ ಸೊಸೆ ಮಾಡಿದ ಅಡುಗೆ ಚೆನ್ನಾಗಿರಲ್ಲ ಎಂಬ ವಿಚಾರಕ್ಕೆ ಆಗಾಗ ಗಲಾಟೆ ನಡೆಯುತ್ತಿತ್ತು. ಈ ಹಿನ್ನೆಲೆ ವಯಸ್ಸಾದ ತಂದೆ ತಾಯಿಯನ್ನು ಮಗ ಕಳೆದ ತಿಂಗಳು ವೃದ್ಧಾಶ್ರಮಕ್ಕೆ ಸೇರಿಸಿದ್ದ. ಇದರಿಂದ ನೊಂದ ವೃದ್ಧ ದಂಪತಿ ಸೋಮವಾರ ರಾತ್ರಿ ವೃದ್ಧಾಶ್ರಮದಲ್ಲಿ ನೇಣಿಗೆ ಶರಣಾಗಿದ್ದಾರೆ.
ಮಂಗಳವಾರ ಬೆಳಗಿನ ಜಾವ ದಂಪತಿ ಬಾಗಿಲು ತೆಗೆದಿರಲಿಲ್ಲ. ಅನುಮಾನಗೊಂಡ ಆಶ್ರಮದವರು ಬಾಗಿಲು ತೆಗೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಘಟನೆ ಸಂಬಂಧ ತಲಘಟ್ಟಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಬೆಂಗಳೂರು | ಬಿಬಿಎಂಪಿಯ ಅರಣ್ಯಾಧಿಕಾರಿಗಳನ್ನು ಕೂಡಲೇ ಅಮಾನತುಗೊಳಿಸಿ ಕ್ರಿಮಿನಲ್ ಮೊಕದ್ದಮೆ ಹೂಡಿ: ಆಪ್ ಆಗ್ರಹ