ರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಗಳಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಖಂಡಿಸಿ ಬೀದರ್ ನಗರದಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಪ್ರತಿಭಟನೆ ನಡೆಸಿದರು.
ನಗರದ ಕಾಜಿ ಕಲ್ಯಾಣ ಮಂಟಪದಿಂದ ತಾಲ್ಲೂಕು ಪಂಚಾಯತ್ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಬಳಿಕ ತಾಲ್ಲೂಕು ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿದರು.
ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ʼರಾಜೀವ್ ಗಾಂಧಿ ವಸತಿ ನಿಗಮದ ಯೋಜನೆಯಲ್ಲಿ ಹಣ ನೀಡಿದವರಿಗೆ ಮನೆ ಹಂಚಿಕೆ ಮಾಡಲಾಗುತ್ತಿದೆ ಎಂದು ಆಳಂದ ಶಾಸಕ ಬಿ.ಆರ್.ಪಾಟೀಲ್ ಅವರು ಅವರದೇ ಸರ್ಕಾರದ ವಿರುದ್ಧ ಆರೋಪಿಸಿದ್ದಾರೆ. ಈ ಬಗ್ಗೆ ಸೂಕ್ತ ತನಿಖೆಯಾಗಬೇಕು. ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ರಾಜೀನಾಮೆ ನೀಡುವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ, ವಿಧಾನ ಪರಿಷತ್ ಸದಸ್ಯ ಎಂ.ಜಿ. ಮುಳೆ, ಮಾಜಿ ವಿಧಾನ ಪರಿಷತ್ ಸದಸ್ಯ ರಘುನಾಥ್ ರಾವ್ ಮಲ್ಕಾಪುರೆ, ಜಿಲ್ಲಾ ಬಿಜೆಪಿ ಅಧ್ಯಕ್ಷ ಸೋಮನಾಥ ಪಾಟೀಲ್ ಸೇರಿದಂತೆ ಪಕ್ಷದ ಪ್ರಮುಖರು, ಜಿಲ್ಲಾ ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು.
ಇದನ್ನೂ ಓದಿ : ಬೀದರ್ | ಚಲಿಸುತ್ತಿದ್ದ ರೈಲಿನಿಂದ ಬಿದ್ದು ಯುವಕ ಸಾವು