ಆಗಸ್ಟ್ 15ರಂದು 76ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚಸಿಲು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳಬೇಕೆಂದು ಅದಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಸೂಚನೆ ನೀಡಿದ್ದಾರೆ.
ಮಂಗಳವಾರ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ಅವರು ಸಭೆ ನಡೆಸಿದರು. “ಸ್ವಾತಂತ್ರ್ಯೋತ್ಸವ ದಿನದಂದು ಜಿಲ್ಲಾಮಟ್ಟದ ಕಾರ್ಯಕ್ರಮವು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಳೆಗಾಲ ಇರುವುದರಿಂದ ಶಾಲಾ ಮಕ್ಕಳು, ಸಾರ್ವಜನಿಕರಿಗೆ, ಅತಿಥಿಗಳಿಗೆ ಕಾರ್ಯಕ್ರಮ ವೀಕ್ಷಣೆಗೆ ತೊಂದರೆ ಆಗದಂತೆ ಸಿದ್ಧತೆ ಮಾಡಿಕೊಳ್ಳಬೇಕು. ವೇದಿಕೆ, ದೀಪಾಲಂಕಾರ, ಸಾಂಸ್ಕೃತಿಕ ಕಾರ್ಯಕ್ರಮ, ಕವಾಯತು ಸೇರಿದಂತೆ ಪ್ರತಿಯೊಂದೂ ಅಚ್ಚುಕಟ್ಟಾಗಿ ನಡೆಯುವಂತೆ ನೋಡಿಕೊಳ್ಳಬೇಕು” ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಬಿ.ಎಸ್ ಮೂಗನೂರಮಠ, ಅಬಕಾರಿ ಇಲಾಖೆ ಉಪ ಆಯುಕ್ತ ಕೆ.ಪ್ರಶಾಂತಕುಮಾರ, ಹೆಸ್ಕಾಂ ಕಾರ್ಯಪಾಲಕ ಅಭಿಯಂತರ ಎಂ.ಎಂ.ನದಾಫ್, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ.ಭದ್ರನ್ನವರ, ಕೈಗಾರಿಕೆ ಇಲಾಖೆಯ ಉಪನಿರ್ದೇಶಕ ಡಾ. ಭೀಮಪ್ಪ, ಧಾರವಾಡ ತಹಸಿಲ್ದಾರ ಡಾ.ಮೋಹನ ಭಸ್ಮೆ, ಅಗ್ನಿಶಾಮಕ ಠಾಣಾಧಿಕಾರಿ ಅಮೃತ ಟಿ., ಕ್ರೀಡಾ ಮತ್ತು ಯುವ ಸಬಲೀಕರಣ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ ಸರಶಟ್ಟಿ, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಕ್ ಸಾರ್ವಜನಿಕ ಸಂಪರ್ಕ ಅಧಿಕಾರಿ ಉಲ್ಲಾಸ ಗುಣಗಾ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಭಾಗವಹಿಸಿದ್ದರು.