2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2 ಸಾವಿರ ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಕಲಾವಿದರ ಮಾಸಾಶನ ಪಾವತಿಸಲು ತಗಲುವ ವೆಚ್ಚವನ್ನು 2025-26ನೆ ಸಾಲಿನ ಕ್ರಿಯಾ ಯೋಜನೆಯಲ್ಲಿ 32.94 ಕೋಟಿ ರೂ.ಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕರಿಗೆ ಬಿಡುಗಡೆ ಮಾಡಲು ಸರಕಾರ ಮಂಜೂರಾತಿ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಗ ಇರಾಕ್ – ಈಗ ಇರಾನ್: ಅಮೆರಿಕ ಕ್ರೌರ್ಯಕ್ಕೆ ಕೊನೆ ಎಂದು?
ಕಳೆದ ವರ್ಷದ ಲೆಕ್ಕಾಚಾರದಂತೆ 60 ವರ್ಷ ಮೀರಿದ 12,543 ಮಂದಿ ಕಲಾವಿದರು ರಾಜ್ಯದಾದ್ಯಂತ ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಮಾಸಾಶನ ಪಡೆಯುತ್ತಿದ್ದರು. ಇನ್ನು ಮುಂದೆ ಇಷ್ಟೂ ಮಂದಿಗೆ 2500 ರೂಪಾಯಿ ಮಾಸಾಶನ ದೊರೆಯಲಿದೆ. ಅಲ್ಲದೆ ಗ್ರಾಮಗಳಲ್ಲಿ ಕಲಾವಿದರನ್ನು ಗುರುತಿಸಿ ಅವರಿಗೆ ಮಾಸಾಶನ ಕೊಡಿಸುವ ಕ್ರಮವನ್ನು ಕೈಗೊಳ್ಳುವುದಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಳೆದ ವರ್ಷ ಹೇಳಿತ್ತು.
2023 ರಿಂದಲೂ ಈ ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಸಭೆಗಳು, ಅನುಮೋದನೆಗಳು, ಬೇಡಿಕೆ ಸಲ್ಲಿಕೆ ಇನ್ನಿತರೆಗಳು ನಡೆಯುತ್ತಲೇ ಇದ್ದವು. ಕಳೆದ ವರ್ಷ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ ಬಳಿಕ ಪ್ರಕ್ರಿಯೆಗೆ ಇನ್ನಷ್ಟು ಚುರುಕು ದೊರಕಿತ್ತು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರೂ ಸಹ ಈ ಬಗ್ಗೆ ಭರವಸೆ ನೀಡಿದ್ದರು. ಕೊನೆಗೆ ಇಂದು ಮಾಸಾಶನ ಹೆಚ್ಚಳಕ್ಕೆ ಸಂಬಂಧಿಸಿದಂತೆ ಅನುದಾನವನ್ನು ಇಲಾಖೆ ಬಿಡುಗಡೆ ಮಾಡಿದೆ.