ಮಂಗಳೂರು | ಬಿಎಸ್‌ಡಬ್ಲ್ಯೂಟಿ ಎರಡನೇ ಹಂತದ ಉಚಿತ ಹೊಲಿಗೆ ತರಬೇತಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

Date:

Advertisements

ಭಾರತ್ ಸೋಷಿಯಲ್ ವೆಲ್ಫೇರ್ ಟ್ರಸ್ಟ್ ಮಂಗಳೂರು(BSWT) ಇದರ ದಶಮಾನೋತ್ಸವದ ಪ್ರಯುಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ತರಬೇತಿ ಕೇಂದ್ರಗಳನ್ನು ಆರಂಭಿಸಿದ್ದು, ಇದೀಗ ಮೊದಲನೇ ತರಗತಿ ಪೂರ್ತಿಗೊಂಡಿದೆ. ಈ ತರಬೇತಿ ಸಂಪೂರ್ಣ ಉಚಿತವಾಗಿದ್ದು 60 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದಿದ್ದಾರೆ. ಶೀಘ್ರದಲ್ಲೇ ಎರಡನೇ ಹಂತದ ತರಗತಿ ಆರಂಭಿಸಲು ತೀರ್ಮಾನಿಸಲಾಗಿದ್ದು, ಆಸಕ್ತ ಗ್ರಾಮ ಪಂಚಾಯಿತಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಮೊದಲು ಆಗಮಿಸಿದ ಅರ್ಜಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಹೆಣ್ಣು ಮಕ್ಕಳ ಸ್ವಾವಲಂಬಿ ಬದುಕಿಗಾಗಿ ಆರಂಭಿಸಲಿರುವ ಹೊಲಿಗೆ ತರಬೇತಿ ಕೇಂದ್ರಕ್ಕೆ ಹತ್ತು ಹೊಲಿಗೆ ಯಂತ್ರ ಮತ್ತು ತರಬೇತಿದಾರರ, ಸಹಾಯಕರ ವೇತನವನ್ನು, ತರಗತಿಗೆ ಸಂಬಂಧಪಟ್ಟ ಖರ್ಚು ವೆಚ್ಚಗಳನ್ನು ಸಂಸ್ಥೆಯ ವತಿಯಿಂದ ಭರಿಸಲಾಗುವುದು. ಮೂರು ತಿಂಗಳ ಅವಧಿಯ ಈ ಕೋರ್ಸ್‌ನಲ್ಲಿ ಪ್ರತಿದಿನ ಮೂರು ಬ್ಯಾಚ್ ಇರುತ್ತವೆ.

ಹೊಲಿಗೆ ತರಬೇತಿಯಲ್ಲಿ ಪ್ರಥಮ ಹಾಗೂ ದ್ವಿತೀಯ ಅಂಕ ಪಡೆದ ಪ್ರತಿ ಬ್ಯಾಚ್‌ನ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಗುವುದು. ತರಬೇತಿ ಪಡೆದ ಎಲ್ಲರಿಗೆ ಸರ್ಟಿಫಿಕೇಟ್ ಮತ್ತು ಗೌರವ ಕಾಣಿಕೆ ನೀಡಿ ಗೌರವಿಸಲಾಗುವುದು.

Advertisements

ತರಗತಿಗೆ ಅನುಕೂಲವಾಗುವಂತೆ ಕಟ್ಟಡ ಸೌಕರ್ಯವಿರುವ ಪಂಚಾಯಿತಿಗಳಿಗೆ ಶೀಘ್ರ ಅರ್ಜಿ ಸಲ್ಲಿಸಬಹುದು. ಪ್ರಸ್ತುತ ಮಂಗಳೂರು ಕಾರ್ಪೊರೇಷನ್ ವ್ಯಾಪ್ತಿಯಲ್ಲಿ ಹಾಗೂ ಉಳ್ಳಾಲ ತಾಲೂಕಿನ ಮುಡಿಪು, ಕುರ್ನಾಡು, ಅಸ್ಸೈ, ಕೈರಂಗಳ, ಪಜೀರು, ಮುನ್ನೂರು, ಸಜಿಪ, ಬಾಳೆಪುಣಿ, ಬೆಳ್ಮ, ಕೊಣಾಜೆ ಆಸುಪಾಸಿನ ಗ್ರಾಮ ಪಂಚಾಯಿತಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಾಗಾಗಿ ಜುಲೈ 5ರ ಒಳಗಾಗಿ ಆಸಕ್ತರು ಅರ್ಜಿ ಸಲ್ಲಿಸಬಹುದು ಎಂದು ಅಧ್ಯಕ್ಷ ಎನ್ ಅಮೀನ್, ಪ್ರಧಾನ ಕಾರ್ಯದರ್ಶಿ ಆಕೀಫ್ ಎಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿದ್ದೀರಾ? ಪುತ್ತೂರು | ಮದುವೆಯಾಗುವುದಾಗಿ ನಂಬಿಸಿ ಬಿಜೆಪಿ ಮುಖಂಡನ ಪುತ್ರನಿಂದ ಅತ್ಯಾಚಾರ; ಗರ್ಭಿಣಿಯಾದ ವಿಷಯ ತಿಳಿದು ಪರಾರಿ

ಈಮೇಲ್ : bswtmangalore2015@gmail.com

ವಿಳಾಸ
Asheeruddeen Sarthabail
Coordinator
Near Sneha sadana Pakkaldka, Bajal
Kankanady Mangalore
575027
ಪೋ. ನಂ. 9742937692

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

6 COMMENTS

  1. ನನಗೆ ಮಿಶಿನ್ ಒಂದು ಬೆಕಾಗಿತು ದಯೆವಿಟು ನನ್ನ ಮನೆಯೇ ಗೆ ಕಳಿಸಿಕೊಡಿ ಮತ್ತೆ ನಾನು ಕಷ್ಟದಲ್ಲಿ ಇದಲ್ದ್ವೆ ನನಗೆ ಸಹಾಯ ಮಾಡಿ .

  2. ನನಗೆ ಒಂದು ಮಿಷನ್ ಬೇಕಾಗಿದೆ ತುಂಬಾ ಸಾಲದ ಕಷ್ಟ ಇದೇ ನನಗೆ ಒಂದು ಮಿಷನ್ ಮನೆಗೆ ಕಳುಹಿಸಿ ಕೊಡಿ ನನಗೆ ಸಹಾಯ ಮಾಡಿ

  3. ನನಗೆ ಒಂದು ಮಿಷನ್ ಬೇಕಾಗಿದೆ ನನಗೆ ತುಂಬಾ ಕಷ್ಟ ಇದೇ ನನ್ನ ಮನೆಗೆ ಕಳುಹಿಸಿ ಕೊಡಿ ನನಗೆ ಸಹಾಯ ಮಾಡಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X