ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜೂ. 23 ರಂದು ರಾಜಕೀಯ ಸಭೆ ನಡೆಸಲು ಅವಕಾಶ ನೀಡಿದ ಆರೋಪದ ಮೇಲೆ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗೋಕುಲ್ ದಾಸ್ ಭಕ್ತ ಅವರನ್ನು ದ.ಕ. ಜಿಲ್ಲಾ ಪಂಚಾಯತ್ ಸಿಇಒ ಅಮಾನತುಗೊಳಿಸಿದ್ದಾರೆ.
ಕರ್ನಾಟಕ ನಾಗರೀಕ ಸೇವಾ ನಡತೆ ನಿಯಮವನ್ನು ಉಲ್ಲಂಘಿಸಿ ಕರ್ತವ್ಯದಲ್ಲಿ ನಿರ್ಲಕ್ಷ್ಯ ತೋರಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ. ಘಟನೆಗೆ ಸಂಬಂಧಿಸಿ ಬಂಟ್ವಾಳ ತಾಲೂಕು ಇಒ ಗೋಕುಲ್ ದಾಸ್ ಅವರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದ್ದರು. ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ರಾಜಕೀಯ ಸಭೆ ನಡೆಸಿರುವುದು ನನ್ನ ಗಮನಕ್ಕೆ ಬಂದಿಲ್ಲ ಎಂದು ಪಿಡಿಒ ವಿವರಣೆ ನೀಡಿದ್ದರು.
ಇದನ್ನೂ ಓದಿ: ಮಂಗಳೂರು | ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್‌ನಲ್ಲೇ ನಿವೃತ್ತ ನೌಕರ ನೇಣಿಗೆ ಶರಣು
ಆದರೆ ಅದನ್ನು ಒಪ್ಪತಕ್ಕದಲ್ಲ. ಸರ್ಕಾರಿ ಕಚೇರಿಯಲ್ಲಿ ಯಾವುದೇ ರಾಜಕೀಯ ಪಕ್ಷಗಳ ಸಭೆ, ಸಮಾರಂಭಗಳಿಗೆ ಅವಕಾಶ ನೀಡಬಾರದು. ಇಲ್ಲಿ ಪಿಡಿಒ ಅವರ ಕರ್ತವ್ಯಲೋಪವಾಗಿರುವುದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಉಲ್ಲೇಖಿಸಿ ಬಂಟ್ವಾಳ ಇಒ ವರದಿ ಸಲ್ಲಿಸಿದ್ದಾರೆ.