ಉಡುಪಿ | ಮಾದಕ ವ್ಯಸನ ಶೈಕ್ಷಣಿಕ ಕ್ಷೇತ್ರಕ್ಕೆ ಬಹುದೊಡ್ಡ ಸವಾಲು – ಶ್ಯಾಮಲ

Date:

Advertisements

ಇಂದು ಶೈಕ್ಷಣಿಕ ಕ್ಷೇತ್ರ ಎದುರಿಸುತ್ತಿರುವ ಸಮಸ್ಯೆಗಳಲ್ಲಿ ಮಾದಕ ವ್ಯಸನಗಳ ಸವಾಲು ಬಹು ಪ್ರಮುಖವಾಗಿದೆ. ಅದರಲ್ಲೂ ಪದವಿ ಮತ್ತು ಪದವಿ ಪೂರ್ವ ಹಂತದ ವಿದ್ಯಾರ್ಥಿಗಳನ್ನು ಇದರಿಂದ ದೂರ ಇಡುವ ಪ್ರಯತ್ನ ಮಾಡಬೇಕಾಗಿದೆ. ವೈಜ್ಞಾನಿಕವಾಗಿ ಅರಿವು ಮೂಡಿಸುವುದೊಂದೆ ಇದಕ್ಕಿರುವ ದಾರಿ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲ ಸಿ.ಕೆ. ಹೇಳಿದರು.

ಅವರು ಇಂದು ಕ್ರಿಶ್ಚಿಯನ್ ಪದವಿ ಪೂರ್ವ ಕಾಲೇಜಿನಲ್ಲಿ ಅಂತರಾಷ್ಟ್ರೀಯ ಮಾದಕ ದ್ರವ್ಯ ವ್ಯಸನ ಮತ್ತು ಅಕ್ರಮ ಸಾಗಾಟ ವಿರೋಧಿ ದಿನಾಚರಣೆಯ ಅಂಗವಾಗಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಭಾರತ ಸರ್ಕಾರ ನಶಾ ಮುಕ್ತ ಭಾರತ ಅಭಿಯಾನ ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಡಾ. ಎ.ವಿ. ಬಾಳಿಗಾ ಮೆಮೋರಿಯಲ್ ಆಸ್ಪತ್ರೆ ಶ್ರೀ ರಾಜೀವ್ ಗಾಂಧಿ ಎಜುಕೇಶನ್ ವೆಲ್ಫೇರ್ ಟ್ರಸ್ಟ್ ಸ್ಪಂದನ ವ್ಯಸನ ಮುಕ್ತ ಕೇಂದ್ರ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವ್ಯಸನ ವಿರುದ್ಧ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತಾನಾಡಿದರು.

ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಡಾ. ಎವಿ ಬಾಳಿಗಾ ಮೆಮೋರಿಯಲ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ ಸುನೀಲ್ ಕುಮಾರ್ ಜಿ ಮಾದಕ ದ್ರವ್ಯವು ಮನಸ್ಸಿನ ಮೇಲೆ ಮತ್ತು ಸಾಮಾಜಿಕವಾಗಿ ಬೀರುವ ಪ್ರಭಾವವನ್ನು ವಿವರಿಸಿದರು. ಕೆಎಎಸ್‌ಡಿಇಎಸ್ ಮಂಗಳೂರು ಇದರ ಖಜಾಂಚಿಗಳಾದ ರೆವರೆಂಡ್ ಐವನ್ ಸೋನ್ಸ್ ಅಧ್ಯಕ್ಷತೆ ವಹಿಸಿದ್ದರು.

Advertisements

ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ರತ್ನ ಭಾರತೀಯ ರೆಡ್‌ಕ್ರಾಸ್‌ನ ಉಪಸಭಾಪತಿ ಡಾ ಅಶೋಕ್ ಕುಮಾರ್ ವೈಜಿ ಸಿಎಸ್‌ಐ ವಯಲಯಾಧ್ಯಕ್ಷರಾದ ರೆವರೆಂಡ್ ಕಿಶೋರ್ ಕುಮಾರ್ ಮುಖ್ಯ ಅತಿಥಿಗಳಾಗಿದ್ದರು.

ರೆಡ್ ಕ್ರಾಸ್ ಖಚಾಂಚಿ ರಮಾದೇವಿ ವಿದ್ಯಾರ್ಥಿಗಳಿಗೆ ಪ್ರತಿಜ್ಙಾ ವಿಧಿ ಬೋಧಿಸಿದರು. ಜಿಲ್ಲಾ ರೆಡ್‌ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಶೆಟ್ಟಿ ಎಕ್ಕಾರು ಪ್ರಸ್ತಾವಿಕವಾಗಿ ಮಾತಾನಾಡಿ ಸ್ವಾಗತಿಸಿ, ರೆಡ್‌ಕ್ರಾಸ್ ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್, ಸ್ವಂದನ ವ್ಯಸನ ಮುಕ್ತ ಕೇಂದ್ರದ ನರೇಂದ್ರ ನಾಯಕ್, ನಿಶಾ ಶೆಟ್ಟಿ, ಡಿಡಿಆರ್‌ಸಿ ನೋಡಲ್ ಅಧಿಕಾರಿ ಜಯಶ್ರೀ ಉಪಸ್ಥಿತರಿದ್ದರು. ಪ್ರಾಧ್ಯಾಪಕಿ ಡಾ ನಿಕೇತನ ಕಾರ್ಯಕ್ರಮ ನಿರ್ವಹಿಸಿದರೆ, ಪ್ರಾಂಶುಪಾಲೆ ಶ್ವೇತಾ ಶ್ರೀನಿವಾಸ್ ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X